ರಾಜಸ್ಥಾನ| ಕೋಟಾದಲ್ಲಿ ಐಐಟಿ-ಜೆಇಇ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಈ ವರ್ಷದ 11ನೇ ಪ್ರಕರಣ

Date:

ಐಐಟಿ-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಯುವಕ ರಾಜಸ್ಥಾನದ ಕೋಟಾ ನಗರದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

- Advertisement -

ಬಿಹಾರದ ಮೋತಿಹಾರಿ ನಿವಾಸಿ ಆಯುಷ್ ಜೈಸ್ವಾಲ್ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಮಹಾವೀರ್ ನಗರ ಪ್ರದೇಶದ ಸಾಮ್ರಾಟ್ ಚೌಕ್ ಬಳಿಯ ಪೇಯಿಂಗ್ ಗೆಸ್ಟ್ ಹೌಸ್‌ನಲ್ಲಿ (ಪಿಜಿ) ತಂಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆಯುಷ್ ಶನಿವಾರ ರಾತ್ರಿಯವರೆಗೂ ಕೊಠಡಿಯಿಂದ ಹೊರಗೆ ಬಾರದಿರುವುದನ್ನು ನೋಡಿದ ಆತನ ಸ್ನೇಹಿತರು ಪಿಜಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಪಿಜಿ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಚಿಕ್ಕಮಗಳೂರು | ನ್ಯಾಯ ಸಿಗದಿದ್ದಕ್ಕೆ ಮನನೊಂದು ಕೋರ್ಟ್​ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ತಂಡ ಬಾಗಿಲ ಬೀಗ ಒಡೆದು ನೋಡಿದಾಗ ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪೊಲೀಸರು ಆತನನ್ನು ಕೆಳಗಿಳಿಸಿ ಹೊಸ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಬಾಲಕ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ.

“ಶನಿವಾರ ರಾತ್ರಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಆತನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಯಾವುದೇ ಆತ್ಮಹತ್ಯೆ ಪತ್ರ ಇನ್ನೂ ಪತ್ತೆಯಾಗಿಲ್ಲ” ಎಂದು ಹೇಳಿದ್ದಾರೆ.

ಬಾಲಕನ ಕುಟುಂಬ ಸದಸ್ಯರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಮಹಾವೀರ್ ನಗರ ಎಸ್‌ಎಚ್‌ಒ ಮಹೇಂದ್ರ ಮಾರು ತಿಳಿಸಿದ್ದಾರೆ.

ಶಿಕ್ಷಣ ಕೇಂದ್ರ ಕೋಟಾದಲ್ಲಿ ಈ ವರ್ಷ ಐಐಟಿ-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಸಾವಿನ 11ನೇ ಪ್ರಕರಣ ಇದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...