ಶಾಲೆಯಲ್ಲಿ ಅಕ್ರಮ ಕಾರ್ಖಾನೆ ಪತ್ತೆ; ಮಾದಕ ದ್ರವ್ಯಗಳು ವಶಕ್ಕೆ

Date:

Advertisements

ಖಾಸಗಿ ಶಾಲೆಯೊಂದರಲ್ಲಿ ಕಾರ್ಖಾನೆ ಪತ್ತೆಯಾಗಿದ್ದು, ಅಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ಹೈದರಾಬಾದ್‌ನ ಈಗಲ್ (ಎಲೈಟ್ ಆ್ಯಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ ಎನ್ ಫೋರ್ಸ್ ಮೆಂಟ್) ತಂಡವು ವಶಕ್ಕೆ ಪಡೆದುಕೊಂಡಿದೆ.

ಹೈದರಾಬಾದ್‌ನ ಬೊವೇನಪಲ್ಲಿಯಲ್ಲಿರುವ ಖಾಸಗಿ ಮೇಧಾ ಶಾಲೆಯಲ್ಲಿ ಅಲ್ಪ್ರಝೋಲಂ ತಯಾರಿಕಾ ಘಟಕವು ರಹಸ್ಯವಾಗಿ ಕಾರ್ಯನಿರ್ವಹಿಸುತ್ತಿತ್ತು ಎಂದು ಈಗಲ್ ತಂಡ ಹೇಳಿದೆ. ಈ ಅಕ್ರಮ ಕಾರ್ಖಾನೆಯನ್ನು ಮೆಹಬೂಬನಗರ್ ನಿವಾಸಿ, ಮೇಧಾ ಶಾಲೆಯ ಮಾಲೀಕ ಮಲೇಲ ಜಯಪ್ರಕಾಶ್ ಗೌಡ್ ಎಂಬ ವ್ಯಕ್ತಿ ನಡೆಸುತ್ತಿದ್ದನೆಂದುಅಧಿಕಾರಿಗಳು ತಿಳಿಸಿದ್ದಾರೆ.

ಶಾಲೆಯ ತರಗತಿ ಕೋಣೆಯೊಂದನ್ನು ಕಾರ್ಖಾನೆಯ್ನಾಗಿ ಮಾಡಿಕೊಂಡು ಜಯಪ್ರಕಾಶ್ ಮತ್ತು ಆತನ ಸ್ನೇಹಿತ ಮಾದಕ ದ್ರವ್ಯಗಳನ್ನು ಬೂತ್ ಪುರ್ ಮತ್ತು ಮಹಬೂಬ್ ನಗರ ಜಿಲ್ಲೆಯ ಮದ್ಯದಂಗಡಿಗಳಿಗೆ ಪೂರೈಸುತ್ತಿದ್ದರು ಎಂದು ಆರೋಪಿಸಲಾಗಿದೆ.

ದಾಳಿಯ ವೇಳೆ 3.5 ಕೆ.ಜಿ ತೂಕದ ಅಲ್ಪ್ರಝೋಲಂ ಮತ್ತು ಅರ್ಧಂಬರ್ಧ ತಯಾರಿಸಲಾಗಿದ್ದ 4.3 ಕೆ.ಜಿ ತೂಕದ ಮಾದಕ ಮಾತ್ರೆ, ತಯಾರಿಕಾ ಉಪಕರಣಗಳು ಹಾಗೂ 21 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

Download Eedina App Android / iOS

X