ಜೋಸೆಫ್ ವಿಜಯ್ ಸಿಎಂ ಆಗಿದ್ದನ್ನು ನೋಡಿ ಅಸೂಯೆ ಪಡುವಷ್ಟು ಕೀಳುಮಟ್ಟದ ವ್ಯಕ್ತಿ ನಾನಲ್ಲ: ರಜನಿಕಾಂತ್

Date:

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಸೋಲು ಕಂಡ ಎರಡು ದಿನಗಳ ನಂತರ ಸೂಪರ್ ಸ್ಟಾರ್ ರಜನಿಕಾಂತ್, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂಕೆ ಸ್ಟ್ಯಾಲಿನ್ ಅವರನ್ನು ಚೆನ್ನೈನ ನಿವಾಸದಲ್ಲಿ ಭೇಟಿಯಾಗಿದ್ದರು. ಇದಾದ ಬಳಿಕ ಸಾಕಷ್ಟು ಊಹಾಪೋಹಗಳು ಹರಿದಾಡಲು ಆರಂಭವಾಗಿವೆ. ಸಿಎಂ ಆದ ಜೋಸೆಫ್ ವಿಜಯ್ ಬಗ್ಗೆ ರಜನಿಕಾಂತ್ ಅವರಿಗೆ ಅಸೂಯೆಯಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಈ ಬಗ್ಗೆ ರಜನಿಕಾಂತ್ ಸ್ಪಷ್ಟನೆ ನೀಡಿದ್ದಾರೆ.

- Advertisement -

ಚೆನ್ನೈನ ಪೋಯಸ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಜನಿಕಾಂತ್, “ನಾನು ಸ್ಟ್ಯಾಲಿನ್ ಅವರನ್ನು ಸ್ನೇಹಿತನಂತೆ ಭೇಟಿಯಾದೆ. ಜೋಸೆಫ್ ವಿಜಯ್ ಸಿಎಂ ಆಗಿದ್ದನ್ನು ನೋಡಿ ಅಸೂಯೆ ಪಡಲು ನಾನು ಕೀಳುಮಟ್ಟದ ವ್ಯಕ್ತಿಯಲ್ಲ. ಅಷ್ಟಕ್ಕೂ ನಾನು ರಾಜಕೀಯದಲ್ಲೇ ಇಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ತಮಿಳುನಾಡು | ಕಷ್ಟದ ಸಮಯದಲ್ಲಿಯೂ ನಿಮ್ಮ ಬೆನ್ನಿಗೆ ನಿಲ್ಲುತ್ತೇನೆ: ಸ್ಟ್ಯಾಲಿನ್ ಭೇಟಿ ಮಾಡಿದ ರಜನಿಕಾಂತ್

“ನಾನು ವಿಜಯ್ ಬಗ್ಗೆ ಅಸೂಯೆ ಯಾಕೆ ಪಡಬೇಕು? ಬಹುಶಃ ಕಮಲ್ (ಹಾಸನ್) ಮುಖ್ಯಮಂತ್ರಿಯಾದರೆ, ನನಗೆ ಅಸೂಯೆಯಾಗಬಹುದು” ಎಂದು ತಮಾಷೆಯಾಗಿ ಹೇಳಿದರು. ಹಾಗೆಯೇ “ವಿಜಯ್ ಅವರ ಪಕ್ಷ ಗೆದ್ದ ತಕ್ಷಣ ಅವರನ್ನು ಅಭಿನಂದಿಸಿದ್ದೇನೆ. ತಮ್ಮ ಮೊದಲ ಚುನಾವಣೆಯಲ್ಲಿ ವಿಜಯ್ ರಾಜ್ಯದ ಮುಖ್ಯಮಂತ್ರಿಯಾಗುವುದನ್ನು ನೋಡಿ ಆಶ್ಚರ್ಯವಾಯಿತು” ಎಂದೂ ಈ ಸಂದರ್ಭದಲ್ಲೇ ಹೇಳಿದ್ದಾರೆ.

“ಹಲವು ಟೀಕೆಗಳು ಹರಿದಾಡುತ್ತಿದೆ. ಹೀಗಿರುವಾಗ ನಾನು ಸ್ಪಷ್ಟನೆ ನೀಡದಿದ್ದರೆ, ಈ ವದಂತಿಗಳನ್ನು ನಾನು ಒಪ್ಪಿಕೊಂಡಂತೆ ಆಗುತ್ತದೆ. ರಜನಿ ಬೇರೆ ಯಾವುದರ ಬಗ್ಗೆಯೂ ಅನಗತ್ಯವಾಗಿ ಮಾತನಾಡಲು ಅಗ್ಗದ ಅಥವಾ ಕೀಳು ಮಟ್ಟದ ವ್ಯಕ್ತಿಯಲ್ಲ” ಎಂದರು.

ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆಯನ್ನು ಸೋಲಿಸಿ, 108 ಸ್ಥಾನಗಳನ್ನು ಗೆದ್ದಿದೆ. ಡಿಎಂಕೆ 59 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಸಫಲವಾಗಿದೆ. ಸ್ಟ್ಯಾಲಿನ್ ತಮ್ಮ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ವಿಎಸ್ ಬಾಬು ವಿರುದ್ಧ ಸುಮಾರು 8,700 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ.

ವಿಧಾನಸಭೆಯ ಒಟ್ಟು 234 ಸ್ಥಾನಗಳ ಪೈಕಿ ಟಿವಿಕೆ ಪಕ್ಷವು ಆರಂಭದಲ್ಲಿ 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ತದನಂತರ ನಡೆದ ಮಹತ್ವದ ವಿಶ್ವಾಸಮತ ಯಾಚನೆಯಲ್ಲಿ ವಿಜಯ್ ಸರ್ಕಾರಕ್ಕೆ ಒಟ್ಟು 144 ಶಾಸಕರ ಭರ್ಜರಿ ಬೆಂಬಲ ದೊರೆತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...