ದೆಹಲಿ, ಉತ್ತರ ಭಾರತದ ರಾಜ್ಯಗಳಲ್ಲಿ ಶೀತ ಅಲೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

ಮುಂದಿನ ಕೆಲವು ದಿನಗಳಲ್ಲಿ ದೆಹಲಿ ಸೇರಿದಂತೆ ಉತ್ತರ, ಪೂರ್ವ ಮತ್ತು ಮಧ್ಯ ಭಾರತದಲ್ಲಿ ಶೀತ ಅಲೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ನೀಡಿದೆ. ಮುಂದಿನ ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಪೂರ್ವ ಮತ್ತು ಪಶ್ಚಿಮ ಮಧ್ಯಪ್ರದೇಶ, ಛತ್ತೀಸ್‌ಗಢ, ವಿದರ್ಭ, ಜಾರ್ಖಂಡ್ ಮತ್ತು ಒಡಿಶಾದ ಪ್ರತ್ಯೇಕ ಪ್ರದೇಶಗಳಲ್ಲಿ ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಶೀತ ಅಲೆ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಎರಡು ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಾದಾಗ ಶೀತ ಅಲೆ ಉಂಟಾಗುತ್ತದೆ. ಪ್ರಸ್ತುತ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಶೀತಗಾಳಿ ಮತ್ತು ತೀವ್ರ ಶೀತಗಾಳಿ ಕಂಡುಬಂದಿದೆ. ನವೆಂಬರ್ 9ರಿಂದ ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ಛತ್ತೀಸ್‌ಗಢದ ಪ್ರತ್ಯೇಕ ಪ್ರದೇಶಗಳಲ್ಲಿ ಶೀತಗಾಳಿ ಹೆಚ್ಚಾಗುತ್ತಿದೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಪಂಜಾಬ್, ಹಿಮಾಚಲ ಪ್ರದೇಶ, ಉತ್ತರ ಹರಿಯಾಣ, ಉತ್ತರಾಖಂಡ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ವಿದರ್ಭ, ಮಧ್ಯ ಮಹಾರಾಷ್ಟ್ರ, ಛತ್ತೀಸ್‌ಗಢ ಮತ್ತು ಉತ್ತರ ಪ್ರದೇಶ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು 7-10 ಡಿಗ್ರಿ ಸೆಲ್ಸಿಯಸ್‌ವರೆಗೆ ಇರುತ್ತದೆ ಎಂದು ಐಎಂಡಿ ಹೇಳಿದೆ. ಹಾಗೆಯೇ ಈ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5.1 ಡಿಗ್ರಿ ಸೆಲ್ಸಿಯಸ್‌ ಅಥವಾ ಅದಕ್ಕಿಂತ ಹೆಚ್ಚು ಇಳಿದಿದ್ದು ಆರೋಗ್ಯ ಸಮಸ್ಯೆಯ ಅಪಾಯಗಳಿವೆ.

ಇನ್ನು ತೆಲಂಗಾಣದಲ್ಲಿ ತಾಪಮಾನವು ಎರಡು-ಮೂರು ದಿನಗಳವರೆಗೆ 3-4 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ಕನಿಷ್ಠ ತಾಪಮಾಣ ಹಠಾತ್ ಆಗಿ ಕುಸಿಯುವುದರಿಂದಾಗಿ ವಿವಿಧ ಕಾಯಿಲೆಗಳ ಸಾಧ್ಯತೆ ಅಧಿಕವಾಗಿದೆ ಎಂದು ಐಎಂಡಿ ಎಚ್ಚರಿಸಿದೆ. “ಚಳಿಯನ್ನು ನಿರ್ಲಕ್ಷಿಸಬೇಡಿ, ಆರೋಗ್ಯದ ಕಡೆ ಗಮನವಿರಲಿ. ದೇಹವನ್ನು ಬೆಚ್ಚವಾಗಿರಿಸಿ” ಎಂದು ಹವಾಮಾನ ಇಲಾಖೆ ಆರೋಗ್ಯ ಸಲಹೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...