ಬಿಹಾರದ ಎನ್‌ಡಿಎ ಗೆಲುವಿನಲ್ಲಿ ಎಸ್‌ಐಆರ್ ಪ್ರಭಾವ ಸ್ಪಷ್ಟ: ರಾಜೀವ್ ಚಂದ್ರಶೇಖರ್

Date:

ಬಿಹಾರದ ಎನ್‌ಡಿಎ ಗೆಲುವಿನಲ್ಲಿ ಎಸ್‌ಐಆರ್‌ ಪ್ರಭಾವ ಸ್ಪಷ್ಟವಾಗಿದೆ ಎಂದು ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಬಿಹಾರದಲ್ಲಿ ನಕಲಿ ಮತದಾರರ ಮೂಲಕ ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷಗಳು ಚುನಾವಣೆ ಗೆಲ್ಲುತ್ತಿದ್ದವು. ಎಸ್‌ಐಆರ್‌ನಲ್ಲಿ ನಕಲಿ ಮತದಾರರು ತೆಗೆದು ಹಾಕಿದ ಬಳಿಕ ಈಗ ಪರಿಣಾಮ ಗೊತ್ತಾಗುತ್ತಿದೆ. ಈ ಕಾರಣಕ್ಕಾಗಿಯೇ ಕಾಂಗ್ರೆಸ್‌, ಸಿಪಿಎಂ ಪಕ್ಷಗಳು ಎಸ್‌ಐಆರ್‌ಗೆ ವಿರೋಧ ವ್ಯಕ್ತಪಡಿಸುತ್ತಿವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ಬಿಹಾರದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಇದನ್ನು ಕೇರಳದ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಸಮರ್ಥಿಸಿಕೊಂಡಿದ್ದಾರೆ.

‘ಮತ ಬ್ಯಾಂಕ್ ರಾಜಕೀಯ’ ಮತ್ತು ‘ಆಡಳಿತ ವಿರೋಧಿ ಅಲೆಯ ಸಾಂಪ್ರದಾಯಿಕ ಪ್ರಚಾರ’ದ ಸಮಯ ಮುಗಿದಿದೆ. ಜನರು ಅಭಿವೃದ್ಧಿ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಒದಗಿಸುವ ಸರ್ಕಾರಕ್ಕೆ ಮತ ಹಾಕುತ್ತಿದ್ದಾರೆ ಎಂದು ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದಲ್ಲಿ ಗೆದ್ದಿದ್ದು ಜನತಂತ್ರವೋ ಅಥವಾ ಮತಗಳ್ಳತನವೋ?

ಕೇರಳದ ಜನರು ಕೂಡ ಉತ್ತಮ ಆಡಳಿತವನ್ನು ನೀಡುವ ಸರ್ಕಾರವನ್ನು ಪಡೆಯಬೇಕು ಎಂದಿದ್ದಾರೆ. ಬಿಹಾರದ ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಸುಮಾರು 65 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ. ಎಸ್‌ಐಆರ್ ನಂತರ ಪ್ರಕಟವಾದ ಅಂತಿಮ ಮತದಾರರ ಪಟ್ಟಿಯಲ್ಲಿ ಹಲವಾರು ವ್ಯತ್ಯಾಸಗಳನ್ನು ವಿರೋಧ ಪಕ್ಷಗಳು ಎತ್ತಿ ತೋರಿಸಿವೆ.

ಎಸ್‌ಐಆರ್ ಅನ್ನು ಪ್ರಶ್ನಿಸಿದ ಹಲವಾರು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿವೆ. ಬಿಹಾರದ ಎಸ್‌ಐಆರ್ ಬಳಿಕ ಚುನಾವಣಾ ಆಯೋಗ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ 9 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳ ಎಸ್‌ಐಆರ್ ಘೋಷಿಸಿದೆ. ಇದರ ವಿರುದ್ದ ತಮಿಳುನಾಡು, ಪಶ್ಚಿಮ ಬಂಗಾಳ ಈಗಾಗಲೇ ಸುಪ್ರೀಂ ಕೋರ್ಟ್ ಮೊರೆ ಹೋಗಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....