ಮಣಿಪುರ | 40 ಕೆಜಿ ಸ್ಫೋಟಕ ಹೊಂದಿರುವ ಸುಧಾರಿತ ರಾಕೆಟ್ ಪತ್ತೆ

Date:

ಸುಮಾರು 40 ಕೆಜಿ ಸ್ಫೋಟಕ ಹೊಂದಿರುವ ಸುಧಾರಿತ ರಾಕೆಟ್ ಒಂದು ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಅದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

- Advertisement -

ಮಂಗಳವಾರ ಗೆಲ್ಮೋಲ್ ಗ್ರಾಮದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, ಈ ಸುಧಾರಿತ ರಾಕೆಟ್ ಅನ್ನು ವಶಪಡಿಸಿಕೊಂಡಿದ್ದಾರೆ. ರಾಕೆಟ್ ಜತೆಗೆ ರಾಕೆಟ್ ಉಡಾವಣಾ ಸ್ಟ್ಯಾಂಡ್ ಮತ್ತು ಬ್ಯಾಟರಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ ; ಪೊಲೀಸರ ಮೇಲೆ ಗುಂಡಿನ ದಾಳಿ

ಕಾಂಗ್‌ಪೋಕ್ಪಿ ಜಿಲ್ಲೆಯ ಸಾಂಗ್‌ಲಂಗ್ ಗ್ರಾಮದ ಸಮೀಪದಲ್ಲಿ ಮತ್ತೊಂದು ಕಾರ್ಯಾಚರಣೆ ನಡೆದಿದ್ದು, ಭದ್ರತಾ ಪಡೆಗಳು ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ. ಒಂದು ಜರ್ಮನ್ ರೈಫಲ್, ಎರಡು ಬೋಲ್ಟ್-ಆಕ್ಷನ್ ರೈಫಲ್‌ಗಳು, ನಾಲ್ಕು ಪುಲ್ ಮೆಕ್ಯಾನಿಸಂ ರೈಫಲ್‌ಗಳು, ಒಂದು ಸುಧಾರಿತ ಮಾರ್ಟರ್, ಎರಡು ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಡಿಟೋನೇಟರ್‌ಗಳು, ಒಂದು ರೇಡಿಯೋ ಸೆಟ್ ಅನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದೆ.

ಜಿಲ್ಲೆಯ ಗೆಲ್‌ಬಂಗ್ ಕಾಡಿನಿಂದಲೂ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳಲ್ಲಿ ಒಂದು ಸಿಎಂಜಿ ಕಾರ್ಬೈನ್, ಒಂದು .303 ರೈಫಲ್(ಲೀ-ಎನ್‌ಫೀಲ್ಡ್), ಎರಡು ಪಿಸ್ತೂಲ್‌ಗಳು, ಒಂಬತ್ತು ಬೋಲ್ಟ್-ಆಕ್ಷನ್ ರೈಫಲ್‌ಗಳು, ಒಂದು ದೇಶೀಯ ನಿರ್ಮಿತ ಎಸ್‌ಬಿಬಿಎಲ್, ಒಂದು ಸ್ಥಳೀಯ ನಿರ್ಮಿತ ಗ್ರೆನೇಡ್, ಮೂರು ಪ್ಲಾಸ್ಟಿಕ್ ಸ್ಫೋಟಕಗಳು ಮತ್ತು ಎರಡು ಹ್ಯಾಂಡ್‌ಸೆಟ್‌ಗಳು ಸೇರಿವೆ.

2023ರ ಮೇ 3ರಿಂದ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿದ್ದು 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಿಂಸಾಚಾರವನ್ನು ಹತ್ತಿಕ್ಕುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗುತ್ತಿದ್ದಂತೆ 2025ರ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ. ಹಿಂಸಾಚಾರದ ಸಂದರ್ಭದಲ್ಲಿ ಗುಂಪುಗಳು ಪೊಲೀಸ್ ಶಸ್ತ್ರಾಗಾರಗಳಿಂದ 6,000ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದವು. ರಾಷ್ಟ್ರಪತಿ ಆಡಳಿತದ ಬಳಿಕ ಅವುಗಳನ್ನು ಮತ್ತೆ ಆಡಳಿತದ ವಶಕ್ಕೆ ಪಡೆದುಕೊಳ್ಳುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...