ಗುಜರಾತ್ | ನೌಕಾದಳದಿಂದ 2 ಸಾವಿರ ಕೋಟಿ ರೂ. ಮೊತ್ತದ 3300 ಕೆಜಿ ಮಾದಕ ವಸ್ತು ವಶ

Date:

ಭಾರತೀಯ ನೌಕಾದಳ ಹಾಗೂ ಗುಜರಾತ್ ಭಯೋತ್ಪಾದಕ ವಿರೋಧಿ ದಳದ ನೆರವಿನೊಂದಿಗೆ ನಾರ್ಕೋಟಿಕ್ಸ್‌ ಕಂಟ್ರೋಲ್ ಬ್ಯೂರಿ(ಎನ್‌ಸಿಬಿ) ಗುಜರಾತ್‌ನ ಕರಾವಳಿಯಲ್ಲಿ ಶಂಕಿತ ಪಾಕಿಸ್ತಾನಿ ಸಿಬ್ಬಂದಿಯಿಂದ 3300 ಕೆಜಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

ಉಪಖಂಡದಲ್ಲಿ ಎನ್‌ಸಿಬಿಯಿಂದ ವಶಪಡಿಸಿಕೊಳ್ಳಲಾದ ಅತಿ ದೊಡ್ಡ ದಾಳಿ ಇದಾಗಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಮಾದಕವಸ್ತುಗಳ ಬೆಲೆ ಅಂದಾಜು 2 ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೊತ್ತವನ್ನು ಹೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

3,089 ಕೆಜಿ ಗಾಂಜಾ, 158 ಕೆಜಿ ಮೆಥಾಂಫೆಟಮೈನ್ ಮತ್ತು 25 ಕೆಜಿ ಮಾರ್ಫಿನ್ ಸೇರಿದಂತೆ ವಶಪಡಿಸಿಕೊಳ್ಳಲಾದ ಮಾದಕವಸ್ತುವಿನ ಸಂಗ್ರಹದಲ್ಲಿ ಪಾಕಿಸ್ತಾನದಿಂದ ಉತ್ಪಾದಿಸಲಾಗಿದೆ ಎಂದು ಬರೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪ್ರಸಾದ ಬೇಡ ಬಸ್ ಬೇಕು’ ಎಂದ ಬಾಲಕಿಯ ಮನವಿಯಲ್ಲಿದೆ ಮಹತ್ವದ ಸಂದೇಶ

ಭಾರತೀಯ ಜಲಗಡಿಗೆ ಪ್ರವೇಶಿಸಿ ಎರಡು ದಿನ ಅನುಮಾನಸ್ಪದಕವಾಗಿ ನಿಂತಿದ್ದ ದೋಣಿಯ ಬಗ್ಗೆ ಕಣ್ಗಾವಲು ವಿಮಾನಯಾನ, ಭಾರತೀಯ ನೌಕಾದಳ ನಿಯೋಜಿಸಿದ ಹಡಗು ನೀಡಿದ ಆಧಾರದ ಮೇಲೆ ದಾಳಿ ಮಾಡಲಾಗಿದೆ.

ದೋಣಿಯನ್ನು ತನಿಖೆಗೊಳಪಡಿಸಿದಾಗ ಅಧಿಕಾರಿಗಳು ಬೃಹತ್ ಮೊತ್ತದ ಮಾದಕವಸ್ತುವನ್ನು ವಶಪಡಿಸಿಕೊಂಡು, ಕೆಲವು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಹಾಗೂ ಮಾದಕ ವಸ್ತುಗಳನ್ನು ಗುಜರಾತ್‌ನ ಪೋರ್‌ಬಂದರ್‌ಗೆ ಸ್ಥಳಾಂತರಿಸಲಾಗಿದೆ.

ಶಂಕಿತ ಪಾಕಿಸ್ತಾನಿ ಸಿಬ್ಬಂದಿಯ ಮೂಲ ಹಾಗೂ ಮಾದಕ ವಸ್ತು ತಲುಪುವ ಸ್ಥಳದ ಬಗ್ಗೆ ಮಾಹಿತಿ ಸಂಗ್ರಹಿಸಲು ತನಿಖೆ ನಡೆಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೊಲೀಸ್ ಕ್ರೌರ್ಯ: ಗರ್ಭಿಣಿ ಹೊಟ್ಟೆಗೆ ಒದ್ದ ಪೊಲೀಸರು; ತಾಯಿ ಸಾವು

ಕಳ್ಳತನದ ಆರೋಪದಲ್ಲಿ ಆರೋಪಿಯನ್ನು ಬಂಧಿಸಲು ಬಂದ ಪೊಲೀಸರು, ಆತನ ಪತ್ನಿ ಗರ್ಭಿಣಿಯ...

ʼಶಿವಸೇನೆʼ ವಿವಾದ: ಚುನಾವಣಾ ಆಯೋಗದ ನಿರ್ಧಾರ ಸಮರ್ಥಿಸಿದ ಶಿಂಧೆ ಬಣ

‘ನಿಜವಾದ ಶಿವಸೇನೆ’ಯನ್ನು ಗುರುತಿಸುವ ವಿಚಾರದಲ್ಲಿ ಚುನಾವಣಾ ಆಯೋಗ ಅನುಸರಿಸಿದ ‘ಸಂಘಟನಾ ಬಹುಮತ’...

ಶೇಖ್‌ ಹಸೀನಾ ಪಕ್ಷದ 7 ನಾಯಕರಿಗೆ ಮರಣದಂಡನೆ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಅವಾಮಿ ಲೀಗ್‌ ಪಕ್ಷದ...