ಮುಂಬೈ | ಶಿವಸೇನಾ ನಾಯಕನ ಪುತ್ರನಿಂದ ಹಿಟ್ ಆ್ಯಂಡ್ ರನ್: ಮಹಿಳೆಯನ್ನು 100 ಮೀಟರ್ ಎಳೆದೊಯ್ದ ಕಾರು

Date:

ಪುಣೆಯಲ್ಲಿ ಕೆಲವು ದಿನಗಳ ಹಿಂದೆ ನಡೆದಿದ್ದ ಪೋರ್ಷೆ ಕಾರು ಹಿಟ್ ಆ್ಯಂಡ್ ರನ್ ರೀತಿಯಲ್ಲೇ ಮತ್ತೊಂದು ಪ್ರಕರಣ ಮುಂಬೈನಲ್ಲಿ ಇಂದು ನಡೆದಿದೆ. ಮುಂಬೈನ ವಾರ್ಲಿಯಲ್ಲಿ ಬಿಎಂಡಬ್ಲ್ಯು ಕಾರನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ನಾಯಕರೊಬ್ಬರ 24 ವರ್ಷದ ಪುತ್ರ ಮಿಹಿರ್‌ ಶಾ ಕಾರು ಚಾಲನೆ ಮಾಡುತ್ತಿದ್ದು, ಅಪಘಾತದ ನಂತರ ನಾಪತ್ತೆಯಾಗಿದ್ದಾನೆ. ಮಿಹಿರ್‌ ಶಾ ತಂದೆ ರಾಜೇಶ್ ಶಾ ಪಾಲ್ಗರ್ ಜಿಲ್ಲೆಯ ಶಿವಸೇನೆಯ ಪ್ರಮುಖ ನಾಯಕರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಿಎಂಡಬ್ಲ್ಯು ಕಾರು ರಾಜೇಶ್ ಶಾ ಹೆಸರಿನಲ್ಲಿ ನೋಂದಣಿಯಾಗಿದೆ. ಇಂದು ಬೆಳಿಗ್ಗೆ 5.30ರ ಸುಮಾರಿಗೆ ಮುಂಬೈನ ಅತ್ರಿಯಾ ಮಾಲ್‌ ಬಳಿ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ತಮ್ಮ ಪತಿಯ ಜೊತೆ ತೆರಳುತ್ತಿದ್ದ ಕಾವೇರಿ ನಕ್ವಾ ಎಂಬುವವರು ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ದ್ವಿಚಕ್ರ ವಾಹನದಲ್ಲಿ ದಂಪತಿ ತೆರಳುತ್ತಿದ್ದಾಗ ವೇಗವಾಗಿ ಬಂದ ಮಿಹಿರ್‌ ಶಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿಹೊಡೆದಿದೆ.ಸ್ಕೂಟರ್‌ನಿಂದ ಕಾವೇರಿ ನಕ್ವಾ ಅವರ ಪತಿ ಪ್ರದೀಪ್ ನಕ್ವಾ ಬಿದ್ದ ನಂತರ ಕಾರಿನಡಿ ಕಾವೇರಿ ಅವರು ಸಿಲುಕಿದ್ದಾರೆ. ಅವರನ್ನು 100 ಮೀಟರ್‌ವರೆಗೂ ಕಾರು ಎಳೆದೊಯ್ದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 19ರ ಇಬ್ಬರು ಐಟಿ ಉದ್ಯೋಗಿಗಳು ತೆರಳುತ್ತಿದ್ದ ಬೈಕ್‌ಗೆ ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಅತಿ ವೇಗದ ಪೋರ್ಷೆ ಕಾರು ಢಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಇಬ್ಬರೂ ಐಟಿ ಉದ್ಯೋಗಿಗಳು ಸಾವನ್ನಪ್ಪಿದ್ದರು. ಅಪಘಾತವಾದ ಸಮಯದಲ್ಲಿ ಬಾಲಕ ಮದ್ಯಪಾನ ಮಾಡಿದ್ದ.

ಸದ್ಯ ಬಾಲಕನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಆತನ ಪೋಷಕರು ಹಾಗೂ ಅಜ್ಜ ಸೆರೆಮನೆಯಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...