ತೆಲಂಗಾಣದ ಬಿಆರ್‌ಎಸ್ ಪಕ್ಷ 2024ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದೆ. ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ನಡೆದ ಎರಡನೇ ಚುನಾವಣೆಯಲ್ಲಿ ಪಕ್ಷವು ಭಾರಿ ಆಘಾತ ಅನುಭವಿಸಿದೆ.
2023ರ ನವೆಂಬರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರತ್ ರಾಷ್ಟ್ರೀಯ ಪಕ್ಷ(ಬಿಆರ್‌ಎಸ್) ಕಾಂಗ್ರೆಸ್ ಎದುರು ಸೋಲು ಕಂಡಿತ್ತು. 2014ರಲ್ಲಿ ಆಂಧ್ರ ಪ್ರದೇಶದಿಂದ ಪ್ರತ್ಯೇಕ ರಾಜ್ಯವನ್ನಾಗಿ ಮಾರ್ಪಡಿಸಲಾಗಿತ್ತು. ಪ್ರತ್ಯೇಕ ರಾಜ್ಯ ನಿರ್ಮಾಣದಲ್ಲಿ ಬಿಆರ್‌ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಪ್ರಮುಖ ಪಾತ್ರ ವಹಿಸಿದ್ದರು.
ಕಳೆದ 10 ವರ್ಷಗಳಲ್ಲಿ ಬಿಆರ್‌ಎಸ್ ಪಕ್ಷದ ವಿರುದ್ಧ ಹತ್ತಾರು ಭ್ರಷ್ಟಾಚಾರ ಆರೋಪ, ಅದಕ್ಷ ಆಡಳಿತದಿಂದ ಜನರು ಬೇಸತ್ತು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದರು.
ಪ್ರಸ್ತುತ ಚುನಾವಣೆಯ 17ನೇ ಲೋಕಸಭಾ ಕ್ಷೇತ್ರಗಳಲ್ಲಿ ಬಿಆರ್‌ಎಸ್ ಒಂದೂ ಕ್ಷೇತ್ರದಲ್ಲೂ ಜಯಗಳಿಸಿಲ್ಲ. 14 ಕ್ಷೇತ್ರಗಳಲ್ಲಿ ಪಕ್ಷ ಮೂರನೇ ಸ್ಥಾನಕ್ಕೆ ಇಳಿದಿದೆ. ಎರಡು ಕ್ಷೇತ್ರಗಳಲ್ಲಿ ಎರಡನೇ ಸ್ಥಾನ ಹಾಗೂ ಒಂದು ಕ್ಷೇತ್ರದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ
ಒಟ್ಟಾರೆ ಪ್ರಕಟಗೊಂಡಿರುವ ಫಲಿತಾಂಶದಲ್ಲಿ ಬಿಜೆಪಿ 8, ಕಾಂಗ್ರೆಸ್ 8 ಹಾಗೂ ಅಸಾಸುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷ ಒಂದು ಕ್ಷೇತ್ರದಲ್ಲಿ ಜಯಗಳಿಸಿದೆ.
ಮತ್ತೊಂದು ತೆಲುಗು ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಟಿಡಿಪಿ 16, ಬಿಜೆಪಿ 3, ವೈಎಸ್ಆರ್‌ಸಿಪಿ 4 ಹಾಗೂ ಜನಸೇನಾ ಪಕ್ಷ 2 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ 134, ಜನಸೇನಾ ಪಕ್ಷ 21, ವೈಎಸ್‌ಆರ್‌ಸಿಪಿ 12 ಹಾಗೂ ಬಿಜೆಪಿ 8 ಸ್ಥಾನಗಳಲ್ಲಿ ಜಯಗಳಿಸಿವೆ.
