ಸುಪ್ರೀಂ ಕೋರ್ಟ್ ಸಿಜೆಐಗೆ ಚಪ್ಪಲಿ ಎಸೆದ ಘಟನೆ; ದೇಶಾದ್ಯಂತ ವಕೀಲರ ಪ್ರತಿಭಟನೆಗೆ ಕರೆ, ತೆಲಂಗಾಣದಲ್ಲಿ ಕೋರ್ಟ್ ಕಲಾಪ ಬಹಿಷ್ಕಾರ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ನಡೆದ ಚಪ್ಪಲಿ ಎಸೆದ ಘಟನೆಯ ವಿರುದ್ಧ ದೇಶದಾದ್ಯಂತ ವಕೀಲರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಅಕ್ಟೋಬರ್ 7 ಮತ್ತು 8ರಂದು ರಾಷ್ಟ್ರಮಟ್ಟದ ಪ್ರತಿಭಟನೆ ನಡೆಸಲು ಕರೆ ನೀಡಿವೆ. ತೆಲಂಗಾಣದ ಹನುಮಕೊಂಡ ವಕೀಲರ ಸಂಘ ಸೇರಿದಂತೆ ಅನೇಕ ರಾಜ್ಯಗಳ ಬಾರ್ ಅಸೋಸಿಯೇಷನ್‌ಗಳು ಕೋರ್ಟ್ ಕಲಾಪ ಬಹಿಷ್ಕಾರ ಘೋಷಿಸಿದ್ದು, ನ್ಯಾಯಾಂಗದ ಗೌರವ ಮತ್ತು ಸ್ವಾಯತ್ತತೆಯನ್ನು ರಕ್ಷಿಸಲು ಇದು ಅಗತ್ಯ ಕ್ರಮವೆಂದು ತಿಳಿಸಿವೆ.

- Advertisement -

ನ್ಯಾಯಾಂಗದ ಗೌರವಕ್ಕೆ ಧಕ್ಕೆ ತರುವ ಈ ಘಟನೆ ಸೋಮವಾರ (ಅಕ್ಟೋಬರ್ 6) ನವದೆಹಲಿಯ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ವಿಚಾರಣೆಯ ವೇಳೆ ವಕೀಲ ರಾಕೇಶ್ ಕಿಶೋರ್ ಎಂಬಾತ ಸಿಜೆಐ ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದರು. ಭದ್ರತಾ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡು ಅವರನ್ನು ಬಂಧಿಸಿದರೂ, ಸುಪ್ರೀಂ ಕೋರ್ಟ್ ರಜಿಸ್ಟ್ರಿಯು ಯಾವುದೇ ದೂರು ದಾಖಲಿಸದೆ ಬಿಡುಗಡೆ ಮಾಡಿರುವುದು ವಿವಾದ ಹುಟ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಘಟನೆಯನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಗಂಭೀರವಾಗಿ ಪರಿಗಣಿಸಿ ಕಿಶೋರ್ ಅವರ ವಕೀಲ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. BCI ಪ್ರಕಟಣೆಯಲ್ಲಿ, ಈ ಕೃತ್ಯ “ನ್ಯಾಯಾಂಗದ ಗೌರವಕ್ಕೆ ವಿರುದ್ಧವಾದ ಅಸಹ್ಯ ಕೃತ್ಯ” ಎಂದು ಖಂಡಿಸಿದೆ. ಸುಪ್ರೀಂ ಕೋರ್ಟ್‌ನ ಒಳಗೆ ನಡೆದ ಈ ರೀತಿಯ ಕೃತ್ಯವು ಕೇವಲ ನ್ಯಾಯಾಧೀಶರ ಮೇಲೆ ನಡೆದ ದಾಳಿ ಅಲ್ಲ, ಭಾರತದ ನ್ಯಾಯಾಂಗದ ಮೂಲಭೂತ ಮೌಲ್ಯಗಳ ಮೇಲಿನ ಆಘಾತವೆಂದು ವಕೀಲರ ಸಂಘಟನೆಗಳು ಹೇಳಿವೆ.

ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಶನ್ ಫಾರ್ ಜಸ್ಟಿಸ್ ಈ ಘಟನೆಯನ್ನು “ಪ್ರಜಾಸತ್ತಾತ್ಮಕ ಸಂವೇದನೆಗಳ ಕುಸಿತ” ಎಂದು ಆಘಾತ ವ್ಯಕ್ತಪಡಿಸಿ, ಎಲ್ಲ ವಕೀಲರು ಶಾಂತ ಪ್ರತಿಭಟನೆಗಳ ಮೂಲಕ ನ್ಯಾಯಾಂಗದ ಬೆಂಬಲಕ್ಕೆ ನಿಲ್ಲಬೇಕು ಎಂದು ಕರೆ ನೀಡಿದೆ.

ತೆಲಂಗಾಣದಲ್ಲಿ ಕಲಾಪ ಬಹಿಷ್ಕಾರ

ಪ್ರತಿಭಟನೆಯ ಭಾಗವಾಗಿ ತೆಲಂಗಾಣದ ಹನುಮಕೊಂಡ ಜಿಲ್ಲಾ ವಕೀಲರ ಸಂಘ ಅಕ್ಟೋಬರ್ 7ರಂದು ಕಲಾಪ ಬಹಿಷ್ಕಾರ ನಡೆಸಲು ನಿರ್ಧರಿಸಿದೆ. ಸಂಘದ ಕಾರ್ಯಕಾರಿ ಸಮಿತಿಯು ಸಭೆ ಸೇರಿ “ಸುಪ್ರೀಂ ಕೋರ್ಟ್ ಸಿಜೆಐ ಮೇಲೆ ನಡೆದ ದಾಳಿ ಭಾರತೀಯ ನ್ಯಾಯಾಂಗದ ಮೇಲೆ ನಡೆದ ದಾಳಿ” ಎಂದು ಘೋಷಿಸಿ, ಎಲ್ಲ ಸದಸ್ಯರು ಒಂದು ದಿನದ ಕಾಲ ಕೋರ್ಟ್ ಕಾರ್ಯದಿಂದ ದೂರ ಇರಬೇಕೆಂದು ಕರೆ ನೀಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಸೋಮಣ್ಣ, ಡಿಕೆಶಿ ಉದ್ಧಟತನ ಅಕ್ಷಮ್ಯ

ಇದೇ ವೇಳೆ, ‘ತೆಲಂಗಾಣ ನ್ಯಾಯಾಧೀಶರ ಸಂಘ ಕೂಡ ಈ ದಾಳಿಯನ್ನು ಖಂಡಿಸಿ, “ಇಂತಹ ಕೃತ್ಯಗಳು ನ್ಯಾಯಾಂಗದ ಪ್ರಾಮಾಣಿಕತೆಗೆ ಧಕ್ಕೆ ತರುತ್ತವೆ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಅಪಾಯ ಉಂಟುಮಾಡುತ್ತವೆ” ಎಂದು ಹೇಳಿದೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಅನೇಕ ರಾಜ್ಯಗಳ ವಕೀಲರ ಸಂಘಗಳೂ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕಿಶೋರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿವೆ.

ಘಟನೆಯ ನಂತರ ಸಿಜೆಐ ಬಿ ಆರ್ ಗವಾಯಿ ಶಾಂತ ಪ್ರತಿಕ್ರಿಯೆ ನೀಡುತ್ತಾ, “ಈ ರೀತಿಯ ಘಟನೆಗಳಿಂದ ನನ್ನ ಕೆಲಸದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ; ನ್ಯಾಯ ಮತ್ತು ಸಂವಿಧಾನದ ಮಾರ್ಗದಲ್ಲೇ ನಾನು ಮುಂದುವರೆಯುತ್ತೇನೆ” ಎಂದು ಹೇಳಿದ್ದಾರೆ. ಅವರ ಈ ನಿಲುವು ನ್ಯಾಯಾಂಗದ ಶಿಸ್ತು, ತಾಳ್ಮೆ ಮತ್ತು ಪ್ರಜಾಸತ್ತಾತ್ಮಕ ಬದ್ಧತೆಯ ಸಂಕೇತವೆಂದು ಕಾನೂನು ವಲಯ ಪ್ರಶಂಸಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...