ಮುಸಲ್ಮಾನರಿಗೆ ವೋಟ್ ಜಿಹಾದ್ ನಡೆಸುವಂತೆ ಇಂಡಿಯಾ ಒಕ್ಕೂಟದಿಂದ ಕರೆ: ಪ್ರಧಾನಿ ಮೋದಿ ಮತ್ತೆ ದ್ವೇಷ ಭಾಷಣ

Date:

ರಾಜಸ್ಥಾನದಲ್ಲಿ ಮುಸಲ್ಮಾನರ ವಿರುದ್ಧ ದ್ವೇಷ ಭಾಷಣಗೈದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವಂತೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಮತ್ತೊಮ್ಮೆ ದ್ವೇಷ ಭಾಷಣಗೈದಿದ್ದಾರೆ.

- Advertisement -

“ಇಂಡಿಯಾ ಮೈತ್ರಿಕೂಟದ ಇನ್ನೊಂದು ರಣ ನೀತಿ ಹೊರಗಡೆ ಬಂದಿದೆ. ಅದರ ನಾಯಕರೇ ದೇಶದ ಮುಂದಿಟ್ಟಿದ್ದಾರೆ. ಇಂಡಿಯಾ ಒಕ್ಕೂಟವು ಮುಸಲ್ಮಾನರಿಗೆ ವೋಟ್ ಜಿಹಾದ್ ನಡೆಸುವಂತೆ ಕರೆ ನೀಡಿದೆ‌.” ಎಂದು ಪ್ರಧಾನಿ ನರೇಂದ್ರ ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಲವ್‌ ಜಿಹಾದ್‌, ಲ್ಯಾಂಡ್‌ ಜಿಹಾದ್‌ನಂತೆ ಇದೀಗ ವೋಟ್‌ ಜಿಹಾದ್‌ ಪ್ರಾರಂಭಿಸಲಿದ್ದಾರೆ. ಎಲ್ಲಾ ಮುಸಲ್ಮಾನರು ಒಗ್ಗಟ್ಟಾಗಿ ವೋಟ್ ಜಿಹಾದ್ ಮಾಡುವಂತೆ ಹೇಳಲಾಗಿದೆ. ವಿಪಕ್ಷಗಳ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನವಾಗಿದೆ” ಎಂದು ಮೋದಿ ಹೇಳಿಕೆ ನೀಡಿದ್ದಾರೆ.

ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, “ಲವ್ ಜಿಹಾದ್ ಬಗ್ಗೆ ಕೇಳಿದ್ದೆವು, ಲ್ಯಾಂಡ್‌ ಜಿಹಾದ್‌ ಬಗ್ಗೆ ಕೇಳಿದ್ದೆವು. ಈಗ ವೋಟ್ ಜಿಹಾದ್ ಕೇಳುತ್ತಿದ್ದೇವೆ. ಅದು ಕೂಡ ಸುಶಿಕ್ಷಿತ ಮುಸ್ಲಿಂ ಕುಟುಂಬದ ಈ ಮಾತು ಹೊರಗೆ ಬಂದಿದೆ. ಸಾಮಾನ್ಯ ಮದ್ರಸಾದಿಂದ ಹೊರಬಂದ ಮಕ್ಕಳು ಇದನ್ನು ಹೇಳಿದ್ದಲ್ಲ. ಅತ್ಯಂತ ಸುಶಿಕ್ಷಿತ ಕುಟುಂಬ, ಕಾಂಗ್ರೆಸ್‌ನ ಉನ್ನತ ಸ್ಥಾನದಲ್ಲಿರುವ ಕುಟುಂಬದಿಂದ ಈ ಮಾತು ಕೇಳಿಬಂದಿದೆ. ಮುಸಲ್ಮಾನರಿಗೆ ವೋಟ್ ಜಿಹಾದ್ ನಡೆಸುವಂತೆ ಕರೆ ನೀಡಲಾಗಿದೆ ಎಂದು ಈ ಮುಸಲ್ಮಾನ ಕುಟುಂಬವು ಹೇಳಿದೆ” ಎಂದು ಪ್ರಧಾನಿ ಹೇಳಿಕೆ ನೀಡಿದ್ದಾರೆ.

“ಜಿಹಾದ್ ಎಂದರೆ ಏನು ಎಂಬುದು ನಿಮಗೆ ಗೊತ್ತಲ್ಲವೇ? ಜಿಹಾದ್ ಯಾರ ವಿರುದ್ಧ ಮಾಡಲಾಗುತ್ತದೆ. ಎಲ್ಲ ಮುಸಲ್ಮಾನರು ಒಟ್ಟಾಗಿ ವೋಟ್ ಜಿಹಾದ್ ನಡೆಸುವಂತೆ ಇಂಡಿಯಾ ಒಕ್ಕೂಟವು ಕರೆ ನೀಡಿದೆ. ವೋಟ್ ಜಿಹಾದಿನ ಮಾತುಗಳನ್ನು ಆಡುವ ಮೂಲಕ ಇಂಡಿಯಾ ಮೈತ್ರಿಕೂಟವು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಅಪಮಾನ ಮಾಡಿದೆ. ಈವರೆಗೆ ಕಾಂಗ್ರೆಸ್‌ನ ಒಬ್ಬನೇ ಒಬ್ಬ ನಾಯಕ ಇದುವರೆಗೆ ಇದನ್ನು ವಿರೋಧಿಸಿಲ್ಲ. ಮೌನ ಸಮ್ಮತಿ ನೀಡಿದ್ದಾರೆ. ವೋಟ್ ಜಿಹಾದ್‌ನ ಮಾತುಗಳು ಕಾಂಗ್ರೆಸ್‌ನ ತುಷ್ಟೀಕರಣ ನೀತಿಯನ್ನು ಮುಂದುವರಿಸಿದೆ” ಎಂದು ಪ್ರಧಾನಿ ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಒಂದು ಕಡೆ ಇಂಡಿಯಾ ಮೈತ್ರಿಕೂಟವು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇನ್ನೊಂದು ಕಡೆ ವೋಟ್ ಜಿಹಾದ್ ನಡೆಸುವಂತೆ ಕರೆ ಕೊಡುತ್ತಿದ್ದಾರೆ. ಇಂಡಿಯಾ ಮೈತ್ರಿಕೂಟದ ಉದ್ದೇಶ ಅದೆಷ್ಟು ಭಯಾನಕ ಎಂಬುದನ್ನು ಇದರಿಂದ ತಿಳಿಯಬಹುದು” ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...