ಭಾರತದ ಸರಕುಗಳಿಗೆ ಅಮೆರಿಕ ಮಾರುಕಟ್ಟೆಯಲ್ಲಿ ಆದ್ಯತೆ; ಸುಂಕ ಕಡಿತದ ಒಪ್ಪಂದಕ್ಕೆ ಒಪ್ಪಿಗೆ

Date:

ಅಮೆರಿಕದ ಮಾರುಕಟ್ಟೆಯಲ್ಲಿ ಭಾರತದ ಸರಕುಗಳಿಗೆ ಆದ್ಯತೆ ನೀಡಿ, ಬೇರೆ ರಾಷ್ಟ್ರಗಳ ಸರಕುಗಳಿಗೆ ವಿಧಿಸುವ ಸುಂಕಕ್ಕಿಂತ ಕಡಿಮೆ ಸುಂಕ ವಿಧಿಸಲು ಭಾರತ ಮತ್ತು ಅಮೆರಿಕ ಒಪ್ಪಿಕೊಂಡಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾಕಾ ಸಚಿವ ಪಿಯೂಷ್‌ ಗೋಯಲ್‌ ತಿಳಿಸಿದ್ದಾರೆ.

- Advertisement -

ಕೆಲವು ತಿಂಗಳ ಹಿಂದೆಯೇ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರಕ್ಕೆ ಒಪ್ಪಿಗೆ ಸೂಚಿಸಿದ್ದರು. ಅಮೆರಿಕದ ಮಾರುಕಟ್ಟೆಯಲ್ಲಿ ಭಾರತದ ಸರಕುಗಳಿಗೆ ವಿಶೇಷ ಆದ್ಯತೆ ನೀಡುವ ಒಂದು ವಿಶಾಲವಾದ ಒಪ್ಪಂದದ ಚೌಕಟ್ಟಿಗೆ ಬಂದಿದ್ದೇವೆ ಎಂದು ಘೋಷಿಸಿದ್ದರು. ಇದರಿಂದ ಸ್ಪರ್ಧಿ ರಾಷ್ಟ್ರಗಳಿಗೆ ಹೋಲಿಸಿದರೆ ಕಡಿಮೆ ಸುಂಕದೊಂದಿಗೆ ಅಮೆರಿಕದ ಮಾರುಕಟ್ಟೆಗೆ ಭಾರತದ ಸರಕುಗಳು ಪ್ರವೇಶಿಸಬಹುದಾಗಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಗೋಯಲ್‌ ಉತ್ತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಭಾರತ ಮತ್ತು ಅಮೆರಿಕ ಫೆಬ್ರವರಿಯಲ್ಲಿ ಈ ಒಪ್ಪಂದದ ಮೊದಲ ಹಂತದ ಚೌಕಟ್ಟನ್ನು ಅಂತಿಮಗೊಳಿಸಿ ಸಹಿ ಹಾಕುವ ನಿರೀಕ್ಷೆ ಇತ್ತು. ಆದರೆ, ಅಮೆರಿಕದ ಸುಂಕ ನೀತಿಯಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಮತ್ತಷ್ಟು ಮಾತುಕತೆ ನಡೆಸಿ, ಅಂತಿಮವಾಗಿ ಒಪ್ಪಂದಗೊಳ್ಳುವ ಚೌಕಟ್ಟಿನ ಆಧಾರದ ಮೇಲೆ ಭಾರತೀಯ ಉತ್ಪನ್ನಗಳಿಗೆ ದೊರೆಯುವ ಸುಂಕದ ಪ್ರಮಾಣ ನಿರ್ಧಾರವಾಗಲಿದೆ.

ಪ್ರಸ್ತಾವಿತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಭಾರತಕ್ಕೆ ಸುಂಕದಲ್ಲಿ ಅನುಕೂಲ ಕಲ್ಪಿಸುವುದಾಗಿ ಅಮೆರಿಕ ಭರವಸೆ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದೊಳಗೆ ಒಪ್ಪಂದದ ಮೊದಲ ಹಂತವನ್ನು ಪೂರ್ಣಗೊಳಿಸಲು ಉಭಯ ದೇಶಗಳು ಪ್ರಯತ್ನಿಸುತ್ತಿದ್ದು, ಸುಂಕ ಚೌಕಟ್ಟು ಯಾವ ರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಭಾರತದೊಂದಿಗಿನ ಮಾತುಕತೆಗಳಿಗೆ ಆಧಾರವಾಗಿದ್ದ ಅಧ್ಯಕ್ಷ ಟ್ರಂಪ್‌ ಅವರ ಪ್ರತಿಸುಂಕಗಳನ್ನು ಅಮೆರಿಕ ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ ಬಳಿಕ ಹೊಸ ಸುಂಕ ವ್ಯವಸ್ಥೆಯನ್ನು ರೂಪಿಸಲು ಅಮೆರಿಕವು ತನ್ನ ವ್ಯಾಪಾರ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪರ್ಯಾಯ ಕ್ರಮಗಳನ್ನು ಅನುಸರಿಸುತ್ತಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್‌ನಲ್ಲಿ ಚುನಾವಣೆ ವಿರೋಧಿಸಿ ಪ್ರತಿಭಟನೆ; ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ಗೆ ಗೃಹ ಬಂಧನ

ಪರಿಸರ ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ ಅವರನ್ನು 60 ದಿನಗಳ ಕಾಲ ʻಗೃಹಬಂಧನʼದಲ್ಲಿ...

ನಕಲಿ ಕೋರ್ಟ್ ಆದೇಶದಡಿ 95 ವೆಬ್‌ಸೈಟ್ ನಿರ್ಬಂಧಿಸಿದ್ದ ಕೇಂದ್ರ ಸರ್ಕಾರ; ಮುಖಭಂಗದ ಬೆನ್ನಲ್ಲೇ ಅನ್‌ಬ್ಲಾಕ್‌ಗೆ ಆದೇಶ!

ನ್ಯಾಯಾಲಯಗಳ ನಕಲಿ ಆದೇಶಗಳನ್ನು ಆಧರಿಸಿ ಬರೋಬ್ಬರಿ 129 ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳನ್ನು...

7,300 ಕೋರ್ಟ್‌ಗಳ ಖಾಲಿ ಕುರ್ಚಿಗಳ ನಡುವೆ ನ್ಯಾಯಕ್ಕಾಗಿ ಕಾಯುತ್ತಿರುವ 5.8 ಕೋಟಿ ಪ್ರಕರಣಗಳು!

"ನ್ಯಾಯ ವಿಳಂಬವಾದರೆ ಅದು ನ್ಯಾಯ ನಿರಾಕರಣೆಗೆ ಸಮ" ಎಂಬ ಮಾತಿದೆ. ಆದರೆ...

ಭದ್ರಾವತಿ | ಆಶ್ರಿತ ಸಂಸ್ಥೆ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ

ಭದ್ರಾವತಿಯ ನ್ಯೂಟೌನ್ ನಗರದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಶ್ರಿತ ಸಂಸ್ಥೆ ಮತ್ತು...