ವಿಷಕಾರಿ ಕೋಲ್‌ಡ್ರಿಫ್ ಪ್ರಕರಣ: ದೇಶದಲ್ಲಿ ಮೂರು ಕೆಮ್ಮಿನ ಸಿರಪ್‌ಗಳು ನಿಷೇಧ

Date:

ವಿಷಕಾರಿ ಕೋಲ್‌ಡ್ರಿಫ್ ಸಿರಪ್ ಸೇವಿಸಿ 20 ಮಕ್ಕಳು ಸಾವನ್ನಪಿದ ಬಳಿಕ ದೇಶದಲ್ಲಿ ಮೂರು ಕೆಮ್ಮಿನ ಸಿರಪ್‌ಗಳನ್ನು ನಿಷೇಧಿಸಲಾಗಿದೆ. ಭಾರತದ ಆರೋಗ್ಯ ಅಧಿಕಾರಿಗಳು ಕೋಲ್‌ಡ್ರಿಫ್, ರಿಸ್ಪಿಫ್ರೆಶ್ ಟಿಆರ್ ಮತ್ತು ರೀಲೈಫ್ ಸಿರಪ್‌ಗಳನ್ನು ದೇಶದಲ್ಲಿ ನಿಷೇಧಿಸಿದ್ದಾರೆ.

- Advertisement -

ಈಗಾಗಲೇ ಪ್ರಯೋಗಾಲಯದ ಪರೀಕ್ಷೆ ವೇಳೆ ಕೋಲ್‌ಡ್ರಿಫ್ ಅಪಾಯಕಾರಿ ಎಂಬುದು ದೃಢಪಟ್ಟಿದೆ. ಈ ಸಿರಪ್‌ನಲ್ಲಿ ಅಧಿಕವಾಗಿ ಡೈಥಿಲೀನ್ ಗ್ಲೈಕಾಲ್ (DEG) ಇದೆ ಎಂದು ತಿಳಿದುಬಂದಿದೆ. ಡೈಥಿಲೀನ್ ಗ್ಲೈಕಾಲ್ ಕೈಗಾರಿಕಾ ಉತ್ಪನ್ನಗಳಲ್ಲಿ ಬಳಸುವ ವಿಷಕಾರಿ ರಾಸಾಯನಿಕವಾಗಿದೆ. ಸಣ್ಣ ಪ್ರಮಾಣದಲ್ಲಿ ಈ ರಾಸಾಯನಿಕ ದೇಹಕ್ಕೆ ಸೇರಿದರೂ ಮೂತ್ರಪಿಂಡಗಳು ಮತ್ತು ಯಕೃತ್ತಿಗೆ ಹಾನಿಯಾಗುತ್ತದೆ, ಸಾವೂ ಸಂಭವಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದನ್ನು ಓದಿದ್ದೀರಾ? ವಿಷಕಾರಿ ಕೋಲ್‌ಡ್ರಿಪ್ ಸಿರಪ್ ಪ್ರಕರಣ: ಮತ್ತಿಬ್ಬರು ಮಕ್ಕಳ ಸಾವು; ಮೃತರ ಸಂಖ್ಯೆ 16ಕ್ಕೆ ಏರಿಕೆ

ಈ ಮೂರು ಸಿರಪ್‌ಗಳಲ್ಲಿ ಯಾವುದನ್ನೂ ರಫ್ತು ಮಾಡಲಾಗಿಲ್ಲ. ಆದರೆ ನಕಲಿ ಅಥವಾ ಹೆಸರು ಬದಲಾಯಿಸಿ ಇದೇ ಸಿರಪ್‌ನ ಕಾನೂನುಬಾಹಿರ ವ್ಯಾಪಾರ ನಡೆಯುವ ಸಾಧ್ಯತೆಯಿದೆ ಎಂದು ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ (WHO) ಎಚ್ಚರಿಸಿದೆ. ಈ ಸಿರಪ್‌ಗಳನ್ನು ತೆಗೆದುಕೊಳ್ಳದಂತೆ ಮತ್ತು ಯಾವುದೇ ಅಡ್ಡಪರಿಣಾಮ ಕಂಡುಬಂದರೆ ವೈದ್ಯರಿಗೆ ತಿಳಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಇನ್ನು ದೇಶದ ಕೇಂದ್ರ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್(CDSCO) ಈ ಸಿರಪ್‌ಗಳ ತಯಾರಿಕೆಗೆ ತಡೆ ನೀಡಿದೆ. ಹಾಗೆಯೇ ಇದೇ ರೀತಿಯ ಔಷಧಿಗಳ ಬಗ್ಗೆ ಪರಿಶೀಲನೆಗೆ ಆದೇಶಿಸಿದೆ. ಔಷಧ ಮಳಿಗೆ ಮತ್ತು ಆಸ್ಪತ್ರೆಗಳಲ್ಲಿ ಇರುವ ದಾಸ್ತಾನನ್ನು ತೆಗೆದುಹಾಕುವಂತೆ ರಾಜ್ಯ ಅಧಿಕಾರಿಗಳಿಗೆ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...

ಶನಿವಾರ ದೆಹಲಿಯಲ್ಲಿ ಸಿಜೆಪಿ 2ನೇ ಬೃಹತ್ ಪ್ರತಿಭಟನೆ

ಎಸ್‌ಐಆರ್‌ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ವಿರುದ್ಧ...