ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನವದೆಹಲಿಯ ನಿಗಮ್ ಬೋಧ ಘಾಟ್‌ನಲ್ಲಿ ಸಿಖ್ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಅಂತ್ಯಕ್ರಿಯೆಗೂ ಮುನ್ನ ನಡೆದ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಮೊದಲಿಗೆ ಮೂರನೇ ಮೋತಿಲಾಲ್ ಮಾರ್ಗದಲ್ಲಿರುವ ಮನಮೋಹನ್ ಸಿಂಗ್ ಅವರ ನಿವಾಸಿದಿಂದ ಅವರ ಪಾರ್ಥೀವ ಶರೀರವನ್ನು ಬಿಗಿ ಭದ್ರತೆಯೊಂದಿಗೆ ಎಐಸಿಸಿ ಕಚೇರಿಗೆ ತರಲಾಯಿತು. ಕಾಂಗ್ರೆಸ್ ಮುಖಂಡರು ಅಂತಿಮ ದರ್ಶನ ಪಡೆದ ನಂತರ ಅಲ್ಲಿಂದ ನಿಗಮ್ ಬೋಧಗೆ ಪಾರ್ಥಿವ ಶರೀರವನ್ನು ತರಲಾಯಿತು.
ಈ ಸುದ್ದಿ ಓದಿದ್ದೀರಾ? ಪ್ರಾಥಮಿಕ ಶಿಕ್ಷಣವನ್ನು ಉರ್ದುವಿನಲ್ಲಿ ಪಡೆದಿದ್ದ ಮನಮೋಹನ್ ಸಿಂಗ್
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಕೇಂದ್ರ ಸಚಿವರು ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಕೆ ಸಿ ವೇಣುಗೋಪಾಲ್,ಕರ್ನಾಟಕ ಸಿಎಂ ಸಿದ್ದರಾಮಯ್ಯ ಸೇರದಂತೆ ಹಲವರು ಅಂತಿಮ ನಮನಕ್ಕೆ ಸಲ್ಲಿಸಿದರು.
