ಇಂಡಿಯಾ ಒಕ್ಕೂಟವು ಮತ ಬ್ಯಾಂಕ್‌ಗಾಗಿ ‘ಮುಜ್ರಾ ನೃತ್ಯ’ ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

Date:

ಇಂಡಿಯಾ ಮೈತ್ರಿಕೂಟದ ನಾಯಕರು ತಮ್ಮ ಮತ ಬ್ಯಾಂಕ್‌ಗಾಗಿ ‘ಮುಜ್ರಾ’ (ಒಂದು ಪ್ರಕಾರದ ನೃತ್ಯ) ಮಾಡುತ್ತಿದೆ ಎಂದ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

- Advertisement -

ಬಿಹಾರದ ಪಾಟಲೀಪುತ್ರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಇಂಡಿಯಾ ಮೈತ್ರಿಕೂಟ ತನ್ನ ಮತ ಬ್ಯಾಂಕ್‌ನ ಗುಲಾಮಗಿರಿಯನ್ನು ಸ್ವೀಕರಿಸಲು ಬಯಸುತ್ತದೆ. ಆದರೆ ನಮಗೆ ಸಂವಿಧಾನವು ಸರ್ವೋಚ್ಚವಾಗಿದೆ. ಯಾವುದೇ ಸಂದರ್ಭದಲ್ಲಿಯೂ ಭಾರತದ ಸಂವಿಧಾನ ಎಸ್‌ಸಿ/ಎಸ್ ಟಿ, ಒಬಿಸಿಗಳಿಗೆ ನೀಡಿರುವ ಮೀಸಲಾತಿ ಪ್ರಯೋಜನಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಾನು ಬಿಹಾರ, ಎಸ್‌ಸಿ/ಎಸ್‌ಟಿ/ಒಬಿಸಿ ಸಮುದಾಯಗಳಿಗೆ ಭರವಸೆ ನೀಡುತ್ತಿದ್ದೇನೆ. ಮೋದಿ ಬದುಕಿರುವವರೆಗೆ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ. ಮೋದಿಗೆ ಸಂವಿಧಾನವೇ ಸರ್ವಶ್ರೇಷ್ಠ. ಮೋದಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವನೆಗಳು ಸರ್ವೋಚ್ಚ. ಇಂಡಿಯಾ ಮೈತ್ರಿಕೂಟ ತನ್ನ ಮತ ಬ್ಯಾಂಕ್‌ನ ಜೀತ ಸ್ವೀಕರಿಸಲು ಬಯಸುತ್ತದೆ. ಅವರು ಹಾಗೆ ಮಾಡಲು ಸ್ವತಂತ್ರರು. ಅವರು ಮುಜ್ರಾ (ನೃತ್ಯ) ಮಾಡಲು ಬಯಸಿದರೆ ಅವರು ಸ್ವತಂತ್ರರು. ನಾನು ಯಾವಾಗಲೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರವಾಗಿ ನಿಂತಿದ್ದೇನೆ” ಎಂದು ಹೇಳಿದ್ದಾರೆ.

ತನ್ನ ಭಾಷಣದಲ್ಲಿ ಪ್ರಧಾನಿ ಮೋದಿ ‘ಮುಜ್ರಾ’ ಎಂಬ ಪದವನ್ನು ಬಳಸಿದ್ದಾರೆ. ಮುಜ್ರಾ ಎಂದರೆ ಮೊಘಲರ ಆಡಳಿತದ ಕಾಲದಲ್ಲಿ ಬಂದ ಒಂದು ನೃತ್ಯದ ಪ್ರಕಾರ. ಇದನ್ನು ಮೊದಲು ಹೆಚ್ಚಾಗಿ ರಾಜರು ಮತ್ತು ಗಣ್ಯರ ಆಸ್ಥಾನಗಳಲ್ಲಿ ಮಹಿಳೆಯರು ಪ್ರದರ್ಶಿಸುತ್ತಿದ್ದರು. ನೃತ್ಯ ಪ್ರದರ್ಶನದ ಬಳಿಕ ಉಡುಗೊರೆಗಳನ್ನು ನೀಡಲಾಗುತ್ತಿತ್ತು. ಇದು 60ರ ದಶಕದ ಹಿಂದಿ ಸಿನಿಮಾಗಳಲ್ಲಿ ವ್ಯಾಪಕವಾಗಿ ಬಳಕೆಯಲ್ಲಿತ್ತು.

ತಮ್ಮ ವೋಟ್ ಬ್ಯಾಂಕ್ ಅನ್ನು ಸಂತೋಷಪಡಿಸಲು ಕಾಂಗ್ರೆಸ್ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಸಂಬಂಧಿಸಿದ ಕಾನೂನನ್ನು ಬದಲಾಯಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದು, “ಈ ಮೊದಲು ಎಸ್‌ಸಿ/ಎಸ್‌ಟಿ/ಒಬಿಸಿಗಳು ಸಂಪೂರ್ಣ ಮೀಸಲಾತಿಯನ್ನು ಪಡೆಯುತ್ತಿದ್ದರು. ನಂತರ ಸಾವಿರಾರು ಸಂಸ್ಥೆಗಳನ್ನು ಅಲ್ಪಸಂಖ್ಯಾತ ಸಂಸ್ಥೆಗಳೆಂದು ಘೋಷಿಸಲಾಯಿತು” ಎಂದು ಮೋದಿ ಹೇಳಿದರು.

“ಭಾರತದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ಇರುವುದಿಲ್ಲ ಎಂದು ನಮ್ಮ ಸಂವಿಧಾನ ಹೇಳುತ್ತದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಧರ್ಮದ ಆಧಾರದ ಮೇಲೆ ಮೀಸಲಾತಿ ಇರುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಆರ್​​ಜೆಡಿ-ಕಾಂಗ್ರೆಸ್ ಎಸ್‌ಸಿ, ಎಸ್‌ಟಿ, ಒಬಿಸಿ ಕೋಟಾವನ್ನು ಕೊನೆಗೊಳಿಸುವ ಮೂಲಕ ತಮ್ಮ ಮತಬ್ಯಾಂಕ್‌ಗೆ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನೀಡಲು ಬಯಸುತ್ತಿವೆ” ಎಂದು ಮೋದಿ ಹೇಳಿಕೆ ನೀಡಿದ್ದಾರೆ.

ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ದೇಶದ ಜನರ ಸಂಪತ್ತನ್ನು ಕಸಿದುಕೊಂಡು ಅನೇಕ ಮಕ್ಕಳನ್ನು ಹೊಂದಿರುವವರಿಗೆ ಹಂಚುತ್ತದೆ ಎಂದು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈಗ ಮುಜ್ರಾ ಎಂಬ ಹೇಳಿಕೆ ನೀಡುವ ಮೂಲಕ, ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...