ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ಪ್ರಧಾನಿ ಆಯ್ಕೆ: ಜೈರಾಮ್‌ ರಮೇಶ್

Date:

ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಲಿದ್ದು, 48 ಗಂಟೆಯಲ್ಲಿ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು, ಮೈತ್ರಿಕೂಟದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಪಕ್ಷ ಸ್ವಾಭಾವಿಕವಾಗಿ ನಾಯಕತ್ವ ವಹಿಸಿಕೊಳ್ಳುತ್ತದೆ ಎಂದು  ಹೇಳಿದ್ದಾರೆ.

‘ಇಂಡಿಯಾ ಮೈತ್ರಿಕೂಟವು ಸರಳ ಬಹುಮತಕ್ಕೆ ಅಗತ್ಯವಿರುವ 272ಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇಂಡಿಯಾ ಒಕ್ಕೂಟದ ಪಕ್ಷದ ಪರವಾಗಿ ಜನಾಭಿಪ್ರಾಯ ಇರಲಿದೆ. ಎನ್‌ಡಿಎ ಮೈತ್ರಿಕೂಟದ ಕೆಲವೊಂದು ಪಕ್ಷಗಳು ನಮ್ಮ ಮೈತ್ರಿಗೆ ಸೇರಲಿವೆ. ಅವರನ್ನು ಸೇರಿಸುವ ಬಗ್ಗೆ ಕಾಂಗ್ರೆಸ್ ಹೈ ಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಪ್ರಾಯಶ್ಚಿತ್ತಕ್ಕಾಗಿ ಮೋದಿ ಕನ್ಯಾಕುಮಾರಿಗೆ ಹೋಗಬೇಕೆಂದುಕೊಂಡಿದ್ದರೆ ಒಳ್ಳೆಯದು: ಕಪಿಲ್ ಸಿಬಲ್

‘ನಾವು ಬಹು ದೊಡ್ಡ ವಿಜಯ ಸಾಧಿಸುತ್ತೇವೆ. ನಮ್ಮಲ್ಲಿ ಸೇಡಿನ ರಾಜಕಾರಣವಿಲ್ಲ. ಭಾರತ ಪ್ರಕಾಶಿಸುತ್ತಿದೆ ಎಂದು 2004ರಲ್ಲಿ ಬಿಜೆಪಿ ಪ್ರಚಾರ ಮಾಡಿದರೂ, ಕಾಂಗ್ರೆಸ್ ಗೆಲುವು ಸಾಧಿಸಿ ಮೈತ್ರಿ ಸರ್ಕಾರ ರಚಿಸಿತ್ತು. 2024ರಲ್ಲಿ ಅದೇ ಪುನರಾವರ್ತನೆಯಾಗಲಿದೆ. ರಾಜಸ್ಥಾನ, ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರಗಳಲ್ಲಿ ಕಾಂಗ್ರೆಸ್‌ ಹೆಚ್ಚು ಸೀಟು ಗಳಿಸಲಿದೆ. ಛತ್ತೀಸಗಢ, ಮಧ್ಯ ಪ್ರದೇಶ ಹಾಗೂ ಅಸ್ಸಾಂನಲ್ಲಿ ನಾವು ಉತ್ತಮ ಪ್ರದರ್ಶನ ನೀಡಲಿದ್ದೇವೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಸೀಟು ಗಳಿಕೆ ಹೆಚ್ಚಳವಾಗಲಿದೆ. ಬಿಜೆಪಿ 2019ರಲ್ಲಿ ಗಳಿಸಿದ್ದಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಗೆಲ್ಲಲಿದೆ. ಪಶ್ಚಿಮ ಬಂಗಾಳದಲ್ಲೂ ಅವರು ಕಡಿಮೆ ಸ್ಥಾನ ಗಳಿಸಲಿದ್ದಾರೆ ಎಂದು ಹೇಳಿದರು

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಷೇರು ಮಾರುಕಟ್ಟೆಯ ಅಕ್ರಮದ ತನಿಖೆಗಾಗಿ ಟಿಎಂಸಿ ನಿಯೋಗದಿಂದ ಸೆಬಿ ಅಧಿಕಾರಿಗಳ ಭೇಟಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದರ ನಿಯೋಗ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ(ಸೆಬಿ)...

ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ: ಬಕ್ರೀದ್ ಸಂಭ್ರಮಾಚರಣೆ ಮರೆತು ಪ್ರಯಾಣಿಕರ ರಕ್ಷಣೆಗಿಳಿದ ಮುಸ್ಲಿಮರು

ಪಶ್ಚಿಮ ಬಂಗಾಳದ ಐಕಾನಿಕ್ ಗಿರಿಧಾಮ ಡಾರ್ಜಿಲಿಂಗ್ ಬಳಿ ನಡೆದ ಕಾಂಚನಜುಂಗಾ ಎಕ್ಸ್‌ಪ್ರೆಸ್...

ಪಿಎಂ ಕಿಸಾನ್ | ರೈತರಿಗೆ ನೀಡುವ ‘ಪ್ರಸಾದ’ವಲ್ಲ ಕಾನೂನುಬದ್ಧ ಹಕ್ಕು: ಕಾಂಗ್ರೆಸ್

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ (ಪಿಎಂ ಕಿಸಾನ್) 17ನೇ ಕಂತಿನ...