ಕೇಜ್ರಿವಾಲ್ ಬಂಧನ ಖಂಡಿಸಿ ಇಂಡಿಯಾ ಒಕ್ಕೂಟದಿಂದ ಮಾರ್ಚ್ 31 ರಂದು ಬೃಹತ್ ರ್‍ಯಾಲಿ

Date:

Advertisements

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ನವದೆಹಲಿಯ ರಾಮಲೀಲ ಮೈದಾನದಲ್ಲಿ ಮಾ.31 ರಂದು ಬೃಹತ್‌ ರ್‍ಯಾಲಿ ಹಮ್ಮಿಕೊಳ್ಳುವುದಾಗಿ ‘ಇಂಡಿಯಾ’ ಒಕ್ಕೂಟ ತಿಳಿಸಿದೆ.

ಮಾ.21ರಂದು ಜಾರಿ ನಿರ್ದೇಶನಾಲಯ ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು.

ಅಬಕಾರಿ ಹಗರಣ ಪ್ರಕರಣದಲ್ಲಿ ಲಂಚ ಪಡೆದ ಪ್ರಕರಣದಲ್ಲಿ ವಿವರಾತ್ಮಕ ಹಾಗೂ ನಿರಂತರ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಮಾ.28ರವರೆಗೂ ತಮ್ಮ ಕಸ್ಟಡಿಗೆ ಪಡೆದುಕೊಂಡಿದೆ.

Advertisements

ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಎಪಿ ನಾಯಕ ಗೋಪಾಲ್‌ ರಾಯ್, ಪ್ರಜಾಪ್ರಭುತ್ವ ಹಾಗೂ ದೇಶ ಅಪಾಯದಲ್ಲಿದೆ. ದೇಶದ ಹಿತಾಸಕ್ತಿ ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸಲು ಇಂಡಿಯಾ ಒಕ್ಕೂಟದ ಎಲ್ಲ ಪಕ್ಷಗಳು ‘ಮಹಾ ರ್‍ಯಾಲಿ’ ಹಮ್ಮಿಕೊಳ್ಳಲಿವೆ” ಎಂದು ಗೋಪಾಲ್‌ ರೈ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣೆ – ಐಪಿಎಲ್‌ ಕ್ರಿಕೆಟ್‌ನಲ್ಲಿ ಅಪ್ಪ-ಮಗನ ಆಟ

“ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಸರ್ವಾಧಿಕಾರತ್ವವನ್ನು ಅಳವಡಿಸಿಕೊಂಡು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಪ್ರೀತಿಸಿ ಮತ್ತು ಗೌರವಿಸುವ ಪ್ರತಿಯೊಬ್ಬ ವ್ಯಕ್ತಿಗೂ ಇದರಿಂದ ಕೋಪವುಂಟಾಗಿದೆ. ಒಂದರ ನಂತರ ಒಂದರಂತೆ ಪ್ರತಿಯೊಬ್ಬ ವಿಪಕ್ಷ ನಾಯಕನ ವಿರುದ್ಧ ಪ್ರಧಾನಿ ಮೋದಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ” ಎಂದು ಗೋಪಾಲ್‌ ರೈ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್‌ ಸಿಂಗ್ ಲವ್ಲಿ ಮಾತನಾಡಿ, ಮಾ.31ರಂದು ಕೈಗೊಳ್ಳುವ ಮಹಾ ರ್‍ಯಾಲಿಯು ರಾಜಕೀಯ ಉದ್ದೇಶವಾಗಿರದೆ ದೇಶದ ಪ್ರಜಾಪ್ರಭುತ್ವವನ್ನು ರಕ್ಷಿಸಲು ಹಾಗೂ ಕೇಂದ್ರದ ವಿರುದ್ಧ ಧನಿಯತ್ತುವುದಾಗಿದೆ” ಎಂದರು.

ಕಳೆದ ಶುಕ್ರವಾರ ಇಂಡಿಯಾ ಒಕ್ಕೂಟದ ಹಲವು ನಾಯಕರು ಭಾರತದ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಕೇಜ್ರಿವಾಲ್ ಅವರನ್ನು ಅವರನ್ನು ಬಂಧಿಸಿರುವುದರ ವಿರುದ್ಧ ಪ್ರತಿಭಟನೆ ದಾಖಲಿಸಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರನ್ನು ಗುರಿ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ...

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್...

ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌...

ಲಿಂಗ ತಾರತಮ್ಯ | ಮಹಿಳೆಯರಿಗಿಂತ ಅಧಿಕ ವೇತನ ಪಡೆಯುತ್ತಾರೆ ಪುರುಷ ನರ್ಸ್‌ಗಳು: ಅಧ್ಯಯನ ವರದಿ

ನರ್ಸಿಂಗ್ ಅನ್ನು ಹೆಚ್ಚಾಗಿ ಮಹಿಳೆಯರ ವೃತ್ತಿ ಎಂಬಂತೆ ನೋಡಲಾಗುತ್ತದೆ. ಆದ್ದರಿಂದಾಗಿ ಪುರುಷರು...

Download Eedina App Android / iOS

X