ಗಡಿಯಲ್ಲಿ ಶಾಂತಿ ಮುಖ್ಯ; LAC ಕುರಿತು ಮಾತುಕತೆ ನಡೆಸಿದ ಭಾರತ ಮತ್ತು ಚೀನಾ

Date:

ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮೇ 27ರಂದು ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ 35ನೇ ಉನ್ನತ ಮಟ್ಟದ (WMCC) ಸಭೆ ನಡೆದಿದೆ. ಉಭಯ ದೇಶಗಳು ಈ ಮಾತುಕತೆಯನ್ನು ‘ರಚನಾತ್ಮಕ ಮತ್ತು ಭವಿಷ್ಯದ ದೃಷ್ಟಿಕೋನ ಹೊಂದಿರುವ’ ಚರ್ಚೆ ಎಂದು ಬಣ್ಣಿಸಿವೆ.

- Advertisement -

ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆ (LAC) ಉದ್ದಕ್ಕೂ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವುದು ದ್ವಿಪಕ್ಷೀಯ ಸಂಬಂಧಗಳ ಸುಧಾರಣೆಗೆ ಅತ್ಯಂತ ಪ್ರಮುಖವಾಗಿದೆ ಎಂಬುದನ್ನು ಈ ಸಭೆಯಲ್ಲಿ ಪುನರುಚ್ಚರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಇದನ್ನು ಓದಿದ್ದೀರಾ? ಭಾರತ-ಚೀನಾ ಸಂಬಂಧ ಸುಧಾರಣೆ ಎಫೆಕ್ಟ್: ರದ್ದಾಗುತ್ತಾ ಸಲ್ಮಾನ್‌ ಖಾನ್‌ ಚಿತ್ರ ʼಮಾತೃಭೂಮಿʼ?

ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಪೂರ್ವ ಏಷ್ಯಾ) ಸುಜಿತ್ ಘೋಷ್ ಅವರು ಭಾರತದ ಪರವಾಗಿ ನೇತೃತ್ವ ವಹಿಸಿ ಭಾಗವಹಿಸಿದ್ದರು. ಚೀನಾದ ವಿದೇಶಾಂಗ ಸಚಿವಾಲಯದ ಗಡಿ ಮತ್ತು ಸಾಗರ ವ್ಯವಹಾರಗಳ ವಿಭಾಗದ ಮಹಾನಿರ್ದೇಶಕಿ ಹೌ ಯಾನ್ಕಿ ಚೀನಾದ ಪರವಾಗಿ ಭಾಗವಹಿಸಿದ್ದರು.

ಉಭಯ ದೇಶಗಳು ಚೀನಾದಲ್ಲಿ ಶೀಘ್ರವೇ ನಡೆಯಲಿರುವ ಮುಂದಿನ ಹಂತದ ವಿಶೇಷ ಪ್ರತಿನಿಧಿಗಳ ಸಭೆಗಾಗಿ ಸಿದ್ಧತೆಗಳನ್ನು ಮಾಡಲು ಒಪ್ಪಿಕೊಂಡಿವೆ. ಹಾಗೆಯೇ ಗಡಿಯಲ್ಲಿ ಪರಿಣಾಮಕಾರಿ ನಿಯಂತ್ರಣ ಮತ್ತು ಶಾಂತಿಯನ್ನು ಕಾಪಾಡಲು WMCC ಅಡಿಯಲ್ಲಿ ಹೊಸ ಕಾರ್ಯಕಾರಿ ಗುಂಪನ್ನು ರಚಿಸಲು ನಿರ್ಧರಿಸಲಾಗಿದೆ.

ಪಶ್ಚಿಮ ವಲಯದ ಜೊತೆಗೆ ಈಗ ಗಡಿಯ ಪೂರ್ವ ಮತ್ತು ಮಧ್ಯ ವಲಯಗಳಿಗೂ ಮಾತುಕತೆ ಕಾರ್ಯವಿಧಾನವನ್ನು ವಿಸ್ತರಿಸಲು ಉಭಯ ದೇಶಗಳು ಸಮ್ಮತಿಸಿವೆ. ಇದರೊಂದಿಗೆ ಗಡಿಯಾಚೆಗಿನ ನದಿಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಾಲೋಚನೆಗಾಗಿ ತಜ್ಞರ ಸಭೆಯನ್ನು ಶೀಘ್ರದಲ್ಲೇ ನಡೆಸುವ ಬಗ್ಗೆ ಭಾರತ ಪ್ರಸ್ತಾಪಿಸಿದೆ. ಚೀನಾವು ಮಾನವೀಯತೆಯ ಆಧಾರದ ಮೇಲೆ ತುರ್ತು ಜಲವಿಜ್ಞಾನದ ಮಾಹಿತಿಯನ್ನು ಹಂಚಿಕೊಳ್ಳಲು ಒಪ್ಪಿಕೊಂಡಿದೆ.

ಉಭಯ ದೇಶಗಳ ನಡುವೆ ನೇರ ವಿಮಾನಯಾನ ಸೇವೆಗಳನ್ನು ಶೀಘ್ರವಾಗಿ ಪುನರಾರಂಭಿಸಲೂ ಮಾತುಕತೆ ನಡೆಸಲಾಗಿದೆ. ಮೂರು ಸಾಂಪ್ರದಾಯಿಕ ಗಡಿ ವ್ಯಾಪಾರ ಮಾರುಕಟ್ಟೆಗಳನ್ನು ಮರುಪ್ರಾರಂಭಿಸಲು ಸಹ ಚರ್ಚಿಸಲಾಗಿದೆ.

2020ರ ಗಾಲ್ವಾನ್ ಕಣಿವೆಯ ಘರ್ಷಣೆಯ ನಂತರ ಉಭಯ ದೇಶಗಳ ನಡುವೆ ಗಡಿ ಉದ್ವಿಗ್ನತೆ ಹೆಚ್ಚಾಗಿತ್ತು. ಇದೀಗ ಈ ಉದ್ವಿಗ್ನತೆಯನ್ನು ತಿಳಿಗೊಳಿಸಲು ಮತ್ತು ದ್ವಿಪಕ್ಷೀಯ ಬಾಂಧವ್ಯವನ್ನು ಹಂತಹಂತವಾಗಿ ಸುಧಾರಿಸಲು ಉಭಯ ದೇಶಗಳು ಮಾತುಕತೆ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಐಗೆ ವಿಪಕ್ಷಗಳು ಬರೆದ ಪತ್ರದಲ್ಲಿ ಏನಿದೆ?

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ...

ಬಾಗಲಕೋಟೆ | ಸಮಾಜದ ಪ್ರಗತಿಗೆ ಪತ್ರಕರ್ತರ ಮಾರ್ಗದರ್ಶನ ಅಗತ್ಯ: ಅಶೋಕ ನಾರಾಯಣಿ

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ, ಜನರಲ್ಲಿ ಜಾಗೃತಿ ಮೂಡಿಸಿ ಅಭಿವೃದ್ಧಿಯ ಹಾದಿಗೆ ದಿಕ್ಸೂಚಿಯಾಗುವ...

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...