ಮೋದಿ ಫ್ರಾನ್ಸ್ ಭೇಟಿ: 26 ರಫೇಲ್, ಜಲಾಂತರ್ಗಾಮಿ ನೌಕೆ ಖರೀದಿಗೆ ಅನುಮೋದನೆ

Date:

  • 2015ರಲ್ಲಿ ರಫೇಲ್‌ ಖರೀದಿಗೆ ಭಾರತ ಒಪ್ಪಂದ
  • 2 ದಿನಗಳ ಫ್ರಾನ್ಸ್‌ ಭೇಟಿ ನೀಡಿರುವ ಪ್ರಧಾನಿ ಮೋದಿ

ಫ್ರಾನ್ಸ್‌ ದೇಶದಿಂದ ಭಾರತೀಯ ನೌಕಾಪಡೆಗೆ 3 ಸ್ಕಾರ್ಪಿಯನ್‌ ದರ್ಜೆ ಜಲಾಂತರ್ಗಾಮಿ ನೌಕೆಗಳು ಮತ್ತು 26 ರಫೇಲ್‌ ಯುದ್ಧ ವಿಮಾನಗಳ ಖರೀದಿಗೆ ಭಾರತದ ರಕ್ಷಣಾ ಸಚಿವಾಲಯ ಆರಂಭಿಕ ಅನುಮೋದನೆ ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -

ಈ ಮಧ್ಯೆ ಫ್ರಾನ್ಸ್‌ ಸರ್ಕಾರ ಭಾರತೀಯ ಪೈಲಟ್‌ಗಳ ತರಬೇತಿಗೆ ಎರಡರಿಂದ ನಾಲ್ಕು ತಮ್ಮ ದೇಶದ ರಫೇಲ್‌ಗಳನ್ನು ರವಾನಿಸಲು ಒಪ್ಪಿಗೆ ನೀಡಿದೆ ಎಂದು ಶುಕ್ರವಾರ (ಜುಲೈ 14) ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ರಫೇಲ್‌ ಯುದ್ಧ ವಿಮಾನಗಳ ಖರೀದಿ ಒಪ್ಪಂದದ ಅನುಮೋದನೆಯು ಪ್ರಧಾನಿ ನರೇಂದ್ರ ಮೋದಿ ಅವರ ಫ್ರಾನ್ಸ್ ಭೇಟಿ ಹಿನ್ನೆಲೆ ನಡೆದಿದೆ.

ಫ್ರೆಂಚ್‌ ರಾಷ್ಟ್ರೀಯ ದಿನ ಹಾಗೂ ಬಾಸ್ಟಿಲ್‌ ದಿನದ ಸೇನಾ ಪಥಸಂಚಲನದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಎರಡು ದಿನಗಳ ಮಟ್ಟಿಗೆ ಜುಲೈ 13 ಮತ್ತು 14 ಫ್ರಾನ್ಸ್‌ಗೆ ಭೇಟಿ ನೀಡಿದ್ದಾರೆ.

ಇಂಡೊ-ಪೆಸಿಫಿಕ್ ವಲಯದಲ್ಲಿ ಸ್ಥಿರತೆ ಕಾಯ್ದುಕೊಳ್ಳುವ ಉದ್ದೇಶದಿಂದ ಪಾಶ್ಚಿಮಾತ್ಯ ರಾಷ್ಟ್ರಗಳ ಪೈಕಿ ಭಾರತದ ಅತ್ಯಂತ ಹಳೆಯ ರಾಜತಾಂತ್ರಿಕ ಪಾಲುದಾರ ದೇಶ ಫ್ರಾನ್ಸ್ ಜೊತೆ ಉನ್ನತ ರಕ್ಷಣಾ ಒಪ್ಪಂದದ ನಿರೀಕ್ಷೆ ಇದೆ ಎಂದು ವರದಿಯಾಗಿದೆ.

ನಾಲ್ಕು ತರಬೇತುದಾರರು ಸೇರಿದಂತೆ 26 ರಫೇಲ್ ಯುದ್ಧ ವಿಮಾನಗಳ ಖರೀದಿ ಮತ್ತು ಮಜಗಾನ್ ಡಾಕ್ ಶಿಪ್ಬಿಲ್ಡರ್ಸ್ ತಯಾರಿಸುವ ಮೂರು ಸ್ಕಾರ್ಪಿಯನ್ ದರ್ಜೆಯ ಜಲಾಂತರ್ಗಾಮಿ ನೌಕೆಗಳ ಖರೀದಿಗೆ ಫ್ರಾನ್ಸ್‌ ನೌಕಾಪಡೆಯೊಂದಿಗೆ ಒಪ್ಪಂದವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆಗಾಗಿ ಖರೀದಿಗೆ ಉದ್ದೇಶಿಸಲಾಗಿರುವ ರಫೇಲ್‌ನ ವಿಮಾನಗಳು ಕಳೆದ ವರ್ಷ ನಡೆದ ಪರೀಕ್ಷೆಗಳಲ್ಲಿ ಅಮೆರಿಕದ ಯುದ್ಧ ವಿಮಾನಗಳನ್ನು ಮೀರಿಸಿವೆ. ಒಪ್ಪಂದದ ಮೌಲ್ಯದ ವಿವರಗಳ ಬಗ್ಗೆ ಮಾಹಿತಿ ದೊರೆತಿಲ್ಲ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಂದ್ರಯಾನ 3 | ತಿರುಪತಿ ದೇವಸ್ಥಾನಕ್ಕೆ ಇಸ್ರೊ ವಿಜ್ಞಾನಿಗಳ ತಂಡ ಭೇಟಿ, ವಿಶೇಷ ಪೂಜೆ

ಭಾರತವು ನಾಲ್ಕು ದಶಕಗಳಿಂದ ಫ್ರೆಂಚ್ ಯುದ್ಧ ವಿಮಾನಗಳನ್ನು ಅವಲಂಬಿಸಿದೆ. 2015ರಲ್ಲಿ ರಫೇಲ್ ಖರೀದಿಗೂ ಮೊದಲು 1980ರ ದಶಕದಲ್ಲಿ ಮಿರಾಜ್ ಯುದ್ಧ ವಿಮಾನಗಳನ್ನು ಖರೀದಿಸಿತ್ತು. ವಾಯುಪಡೆಯಲ್ಲಿ ಈಗಲೂ ಇವುಗಳು ಬಳಕೆಯಲ್ಲಿವೆ.

2005ರಲ್ಲಿ ಭಾರತವು ಫ್ರಾನ್ಸ್‌ನಿಂದ ಆರು ಸ್ಕಾರ್ಪಿಯನ್ ದರ್ಜೆಯ ಡೀಸೆಲ್ ಜಲಾಂತರ್ಗಾಮಿ ನೌಕೆಗಳನ್ನು ₹718,800 ಕೋಟಿಗೆ (2.29 ಬಿಲಿಯನ್ ಅಮೆರಿಕ ಡಾಲರ್) ಖರೀದಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...