ಸ್ವಾತಂತ್ರ್ಯ ದಿನಾಚರಣೆ | ಭಾರತ ನಿರ್ಧರಿಸಿದೆ, ರಕ್ತ ಮತ್ತು ನೀರು ಒಟ್ಟಿಗೆ ಹರಿಯದು: ನರೇಂದ್ರ ಮೋದಿ

Date:

ಭಾರತ ನಿರ್ಧರಿಸಿದೆ, ರಕ್ತ ಮತ್ತು ನೀರು ಒಟ್ಟಿಗೆ ಹರಿಯದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿ ದೇಶವನ್ನುದ್ದೇಶಿಸಿ ಮಾತನಾಡಿದರು.

- Advertisement -

ರಾಜಘಾಟ್‌ನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆಗೆ ಆಗಮಿಸಿ ಮೋದಿ ಧ್ವಜಾರೋಹಣ ಮಾಡಿದರು. ಇನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, “ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಮತ್ತು ವೀಕ್ಷಿತ ಭಾರತವನ್ನು ನಿರ್ಮಿಸಲು ಈ ದಿನವು ನಮಗೆ ಸ್ಫೂರ್ತಿ ನೀಡಲಿ. ಜೈ ಹಿಂದ್” ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಯುದ್ಧದ ಪರಿಣಾಮಗಳು ಯುದ್ಧಭೂಮಿಗೆ ಮಾತ್ರ ಸೀಮಿತವಾಗುವುದಿಲ್ಲ…

ಇನ್ನು ಕೆಂಪು ಕೋಟೆಯಲ್ಲಿ ಭಾಷಣ ಮಾಡಿದ ಪ್ರಧಾನಿ ಮೋದಿ, “ಭಾರತವು ಇನ್ನು ಮುಂದೆ ಪರಮಾಣು ಬೆದರಿಕೆಗಳನ್ನು ಸಹಿಸುವುದಿಲ್ಲ ಎಂದು ನಿರ್ಧರಿಸಿದೆ. ನಾವು ಯಾವುದೇ ಬ್ಲ್ಯಾಕ್‌ಮೇಲ್‌ಗೆ ಬಲಿಯಾಗುವುದಿಲ್ಲ” ಎಂದು ಹೇಳಿದರು.

“ಪಾಕಿಸ್ತಾನದಲ್ಲಿ ನಮ್ಮ ಸಶಸ್ತ್ರ ಪಡೆಗಳು ಮಾಡಿದ ವಿನಾಶವು ವಿಸ್ತಾರವಾಗಿದೆ, ಪ್ರತಿದಿನ ಹೊಸ ದಾಳಿಗಳನ್ನು ನಡೆಸಲಾಗುತ್ತಿದೆ. ಏಪ್ರಿಲ್ 22 (ಪಹಲ್ಗಾಮ್ ದಾಳಿ) ನಂತರ, ಭಯೋತ್ಪಾದಕರಿಗೆ ತಕ್ಕ ಪ್ರತಿಕ್ರಿಯೆ ನೀಡಲು ನಾವು ಸಶಸ್ತ್ರ ಪಡೆಗಳಿಗೆ ಮುಕ್ತ ಅವಕಾಶವನ್ನು ನೀಡಿದ್ದೇವೆ” ಎಂದು ತಿಳಿಸಿದರು.

“ಭಾರತ ಈಗ ನಿರ್ಧರಿಸಿದೆ, ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ. ಸಿಂಧೂ ಜಲ ಒಪ್ಪಂದವು ಅನ್ಯಾಯ ಎಂಬುದನ್ನು ಜನರು ಅರಿತುಕೊಂಡಿದ್ದಾರೆ. ಸಿಂಧೂ ನದಿ ಒಪ್ಪಂದದಿಂದಾಗಿ ಶತ್ರುಗಳ ಭೂಮಿಗೆ ನೀರು ಹರಿಯುತ್ತಿದೆ. ಆದರೆ ನಮ್ಮ ಸ್ವಂತ ರೈತರು ಬಳಲುತ್ತಿದ್ದಾರೆ. ಕಳೆದ ಏಳು ದಶಕಗಳಿಂದ ನಮ್ಮ ರೈತರಿಗೆ ಅಪಾರ ನಷ್ಟವನ್ನುಂಟುಮಾಡಿರುವ ಇದು ಯಾವ ರೀತಿಯ ಒಪ್ಪಂದ” ಎಂದು ಪ್ರಶ್ನಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...