ದೇಶದಲ್ಲಿ ಎರಡು ತಿಂಗಳ ಕಚ್ಚಾ ತೈಲ ಸಂಗ್ರಹವಿದೆ, ಇಂಧನ ಕೊರತೆಯಿಲ್ಲ: ಕೇಂದ್ರ ಸರ್ಕಾರ

Date:

ದೇಶದಲ್ಲಿ ಕಚ್ಚಾ ತೈಲ ದಾಸ್ತಾನುಗಳು ಸಮರ್ಪಕವಾಗಿದೆ. ಸರ್ಕಾರವು ಮುಂದಿನ ಎರಡು ತಿಂಗಳಿಗೆ ಸಾಕಷ್ಟು ಸರಬರಾಜು ಹೊಂದಿದೆ. ಇಂಧನ ಕೊರತೆಯಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಹೇಳಿದರು.

- Advertisement -

ಇಂಧನ ಕೊರತೆಯ ಬಗ್ಗೆ ದೇಶದಲ್ಲಿ ಆತಂಕ ಹೆಚ್ಚಾಗಿದೆ. ಈ ಬಗ್ಗೆ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಜಾತಾ ಶರ್ಮಾ, “ನಮ್ಮ ಸಂಸ್ಕರಣಾಗಾರಗಳು ಅತ್ಯುನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ. ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಯಾವುದೇ ಕೊರತೆ ಉಂಟಾಗಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಇನ್ನು ಜಾಗತಿಕ ಬೆಲೆ ಏರಿಕೆಯ ಬಗ್ಗೆ ಉಲ್ಲೇಖಿಸುತ್ತಾ, “ಸುಮಾರು ಎರಡು ತಿಂಗಳ ಹಿಂದೆ, ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ $70 ವ್ಯಾಪ್ತಿಯಲ್ಲಿ ವಹಿವಾಟು ನಡೆಸುತ್ತಿತ್ತು. ಇಂದು ಅದು ಬ್ಯಾರೆಲ್‌ಗೆ $100 ದಾಟಿದೆ. ತೀವ್ರ ಏರಿಕೆಯ ಹೊರತಾಗಿಯೂ ದೇಶೀಯ ಗ್ರಾಹಕರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ” ಎಂದು ಒತ್ತಿ ಹೇಳಿದರು.

“2022ರ ಏಪ್ರಿಲ್ 6ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲಾಗಿಲ್ಲ. 2024ರ ಮಾರ್ಚ್‌ನಲ್ಲಿ ಎರಡು ರೂಪಾಯಿ ಬೆಲೆ ಇಳಿಸಲಾಗಿದೆ. ಸದ್ಯ ಅದು ಜಾರಿಯಲ್ಲಿದೆ. ಅಂತಾರಾಷ್ಟ್ರೀಯ ಬೆಲೆ ಏರಿಳಿತಗಳಿಂದ ದೇಶೀಯ ಗ್ರಾಹಕರನ್ನು ರಕ್ಷಿಸಲು, ಬೆಲೆಗಳಲ್ಲಿ ಯಾವುದೇ ಏರಿಕೆಯಾಗದಂತೆ ಸರ್ಕಾರ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ” ಎಂದೂ ಹೇಳಿದರು.

ಪಶ್ಚಿಮ ಏಷ್ಯಾದಲ್ಲಿ (ಇಸ್ರೇಲ್-ಇರಾನ್) ನಡೆಯುತ್ತಿರುವ ಉದ್ವಿಗ್ನತೆಯಿಂದಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸೃಷ್ಟಿಯಾಗಿದೆ. ಈಗಾಗಲೇ ಎಲ್‌ಪಿಜಿ ಸಿಲಿಂಡರ್ ಕೊರತೆಯಿಂದಾಗಿ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅಕ್ರಮವಾಗಿ ದುಪ್ಪಟ್ಟು ಹಣಕ್ಕೆ ಸಿಲಿಂಡರ್ ಮಾರಾಟ ದಂಧೆಯೂ ನಡೆಯುತ್ತಿದೆ. ಬೆಂಗಳೂರಿನಲ್ಲಿ ಎಲ್‌ಪಿಜಿ ಬಂಕ್‌ಗಳಲ್ಲಿ ಕಿಲೋಮೀಟರ್‌ಗಟ್ಟಲೇ ಆಟೋಗಳು ಕ್ಯೂ ನಿಂತಿರುವ ದೃಶ್ಯಗಳು ಕಂಡುಬರುತ್ತಿವೆ. ಬೆಳಗ್ಗಿನ ಜಾವ 4-6 ಗಂಟೆಗಳಿಂದಲೇ ಚಾಲಕರು ಎಲ್‌ಪಿಜಿಗಾಗಿ ಕಾಯುತ್ತಿದ್ದಾರೆ.

ಇದನ್ನು ಓದಿದ್ದೀರಾ? ಇರಾನ್ ಯುದ್ಧ | ಜಗತ್ತು ತೈಲ ಬಿಕ್ಕಟ್ಟು ಎದುರಿಸುತ್ತಿದ್ದರೆ, ಚೀನಾ ನೆಮ್ಮದಿಯಾಗಿದೆ; ಕಾರಣವೇನು?

ಇವೆಲ್ಲವುದರ ನಡುವೆ “ಪಶ್ಚಿಮ ಏಷ್ಯಾದಲ್ಲಿನ ಯುದ್ಧದಿಂದಾಗಿ ಜಾಗತಿಕವಾಗಿ ಎದುರಾಗಬಹುದಾದ ದೀರ್ಘಕಾಲದ ಸವಾಲುಗಳನ್ನು ಎದುರಿಸಲು ಭಾರತೀಯರು ಕೋವಿಡ್ ಸಮಯದಲ್ಲಿ ತೋರಿದ ಒಗ್ಗಟ್ಟಿನಂತೆಯೇ ಸಿದ್ಧರಾಗಿರಬೇಕು. ಯುದ್ಧದಿಂದಾಗಿ ತೈಲ ಮತ್ತು ರಸಗೊಬ್ಬರಗಳ ಬೆಲೆಯಲ್ಲಿ ವ್ಯತ್ಯಯ ಉಂಟಾಗಬಹುದು. ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಹೇಗೆ ಪರಿಸ್ಥಿತಿಯನ್ನು ನಿಭಾಯಿಸಲಾಯಿತೋ, ಅದೇ ರೀತಿ ಈಗಲೂ ಸರ್ಕಾರವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

ಪ್ರಧಾನಿ ಮೋದಿ ಅವರ ಈ ಹೇಳಿಕೆಯು ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಕೋವಿಡ್‌ನಂತೆಯೇ ಸಮಸ್ಯೆ ಉಂಟಾಗಬಹುದು ಎಂದು ಜನರು ಅಗತ್ಯ ವಸ್ತುಗಳನ್ನು ಹೆಚ್ಚುವರಿ ಖರೀದಿಸಲು ಮುಂದಾಗಿದ್ದಾರೆ. ಪೆಟ್ರೋಲ್ ಕೂಡಾ ಅಗತ್ಯಕ್ಕಿಂತ ಅಧಿಕ ಸಂಗ್ರಹಿಸಲು ಶುರು ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...