ಪಾಕ್‌ಗೆ ‘ಮಧ್ಯಸ್ಥಿಕೆ’ ಹಿರಿಮೆ ದೊರೆಯಲು ಮೋದಿ ವೈಫಲ್ಯವೇ ಕಾರಣ: ಕಾಂಗ್ರೆಸ್

Date:

ಯುದ್ಧ ನಡೆಸುವ ದೇಶಗಳ ನಡುವೆ ಶಾಂತಿ ಒಪ್ಪಂದ ಮಾತುಕತೆಗಾಗಿ ಮಧ್ಯಸ್ಥಿಕೆ ವಹಿಸಿಕೊಳ್ಳುವುದು ಅತಿ ಜವಾಬ್ದಾರಿಯುತ ಮತ್ತು ಘನತೆಯುತವಾದ ಕಾರ್ಯ. ಈ ಮಧ್ಯಸ್ಥಿಕೆ ಕಾರ್ಯವನ್ನು ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ಯಾವುದೇ ಅರ್ಹತೆ ಹೊಂದಿರದ ಪಾಕಿಸ್ತಾನ ವಹಿಸುತ್ತಿದೆ. ಈ ವಿಚಾರದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಕಾಂಗ್ರೆಸ್ ಟೀಕಿಸಿದೆ. “ಮೋದಿ ಸರ್ಕಾರದ ರಾಜತಾಂತ್ರಿಕತೆ ವೈಫಲ್ಯಗಳಿಂದಾಗಿ ಅರ್ಹವಲ್ಲದ ದೇಶ ಪಾಕಿಸ್ತಾನ ಮಧ್ಯಸ್ಥಿಕೆ ಸ್ಥಾನವನ್ನು ಗಳಿಸಿದೆ” ಎಂದು ಕಾಂಗ್ರೆಸ್ ಹೇಳಿದೆ.

- Advertisement -

“ಪಶ್ಚಿಮ ಏಷ್ಯಾದಲ್ಲಿ ಪ್ರಸ್ತುತ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ನಡೆಯುವ ಮಾತುಕತೆಯಲ್ಲಿ ಪಾಕಿಸ್ತಾನವು ಮಧ್ಯಸ್ಥಿಕೆ ವಹಿಸಿರುವುದು ಭಾರತಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಇದು ಪ್ರಾದೇಶಿಕ ರಾಜತಾಂತ್ರಿಕತೆಗೆ ಆಗಿರುವ ಹಿನ್ನಡೆ. ಇದನ್ನು ಮುಚ್ಚಿಹಾಕಲು ಚಾಣಾಕ್ಷ ಮತ್ತು ದೀರ್ಘ ಅನುಭವಿ ವಿದೇಶಾಂಗ ಸಚಿವರು (ಜೈಶಂಕರ್) ತಮ್ಮಿಂದಾದ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಮೋದಿಯವರನ್ನು ‘ವಿಶ್ವಗುರು’ ಮಾಡಲು ಹೊರಟು ಸೋತ ಪಪ್ಪುಗಳು!

“ಪಾಕಿಸ್ತಾನವನ್ನು ಈ ಪಾತ್ರಕ್ಕೆ ಸೂಕ್ತವೆಂದು ಪರಿಗಣಿಸಲಾಗುತ್ತಿರುವುದು ನಿಜಕ್ಕೂ ಸರಿಯಲ್ಲ” ಎಂದು ಹೇಳಿರುವ ಕಾಂಗ್ರೆಸ್ ನಾಯಕರು ಯಾಕೆ ಎಂದು ಕಾರಣವನ್ನೂ ನೀಡಿದ್ದಾರೆ. “ಪಾಕಿಸ್ತಾನ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಭಾರತ ಮತ್ತು ಇತರ ದೇಶಗಳಲ್ಲಿ ಭಯೋತ್ಪಾದನೆಯನ್ನು ಸಂಘಟಿಸಿದೆ. ದಶಕಗಳಿಂದ ಒಸಾಮಾ ಬಿನ್ ಲಾಡೆನ್ ಮತ್ತು ಇತರ ಭಯಾನಕ ಜಾಗತಿಕ ಭಯೋತ್ಪಾದಕರಿಗೆ ಆಶ್ರಯ ನೀಡಿದೆ”

ಹಾಗೆಯೇ, “ಇತರ ದೇಶಗಳು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಲು ಸಹಾಯ ಮಾಡಲು ಪರಮಾಣು ಪ್ರಸರಣ ನಿಷೇಧ ಕಾನೂನುಗಳನ್ನು ಪಾಕಿಸ್ತಾನ ಉಲ್ಲಂಘಿಸಿದೆ. ಎಕ್ಯೂ ಖಾನ್ ಜಾಲದ ಪಾತ್ರವನ್ನು ಆಗಿನ ಅಧ್ಯಕ್ಷ ಮುಷರಫ್ ಸ್ವತಃ ದಾಖಲಿಸಿದ್ದಾರೆ, ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನವು ಅಫ್ಘಾನಿಸ್ತಾನದಲ್ಲಿ ಆಸ್ಪತ್ರೆಗಳು ಮತ್ತು ವಸತಿ ಪ್ರದೇಶದ ಮೇಲೆ ನಿರ್ದಯವಾಗಿ ಬಾಂಬ್ ದಾಳಿ ನಡೆಸಿದೆ. ಬಲೂಚಿಸ್ತಾನ್, ಖೈಬರ್ ಪಖ್ತುನಾಖ್ವ ಮತ್ತು ಇತರ ಪ್ರಾಂತ್ಯಗಳು ಸೇರಿದಂತೆ ವಿವಿಧ ಪ್ರಾಂತ್ಯಗಳಲ್ಲಿ ತನ್ನದೇ ಆದ ನಾಗರಿಕರು ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಯುದ್ಧ ನಡೆಸಿದ್ದಾರೆ” ಎಂದೂ ಉಲ್ಲೇಖಿಸಿದ್ದಾರೆ.

“ಪಾಕಿಸ್ತಾನವನ್ನು ಮಧ್ಯಸ್ಥಿಕೆ ವಹಿಸುವ ಪಾತ್ರಕ್ಕಾಗಿ ಪರಿಗಣಿಸಬಹುದು ಎಂಬುದು ಪ್ರಧಾನಿ ಮೋದಿಯವರ ರಾಜತಾಂತ್ರಿಕತೆಯ ಸಾರವಾಗಿದ್ದು ಅದು ಅತ್ಯಂತ ಖಂಡನೀಯ. ಮುಂಬೈನಲ್ಲಿ 26/11 ಭಯೋತ್ಪಾದಕ ದಾಳಿಯನ್ನು ನಡೆಸಿದ ನಂತರ ಪಾಕಿಸ್ತಾನವು ಏಕಾಂಗಿಯಾಗಿತ್ತು ಎಂಬುದನ್ನು ನೆನಪಿಡಿ. ಏಕೆಂದರೆ ಡಾ. ಮನಮೋಹನ್ ಸಿಂಗ್ ಅವರ ಸರ್ಕಾರವು ಪಾಕಿಸ್ತಾನದ ದುಷ್ಕೃತ್ಯದ ಪಾತ್ರವನ್ನು ಜಗತ್ತಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಯಿತು” ಎಂದು ತಿಳಿಸಿದ್ದಾರೆ.

“ಇದಕ್ಕೆ ವ್ಯತಿರಿಕ್ತವಾಗಿ, ಏಪ್ರಿಲ್ 22, 2025 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಸಮರ್ಥಿಸುತ್ತಾ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರ ಕೋಮುವಾದಿ ಮತ್ತು ವಿಷಕಾರಿ ಹೇಳಿಕೆ ನೀಡಿದ್ದಾರೆ. ಆದರೂ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನವನ್ನು ಪ್ರತ್ಯೇಕಿಸಲು ನಮಗೆ ಸಾಧ್ಯವಾಗಿಲ್ಲ. ಮೇ 10, 2025 ರ ನಂತರವೇ, ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಅವರ ತಂಡದ ನೆಚ್ಚಿನ ವ್ಯಕ್ತಿ ಎಂಬುದು ಸ್ಪಷ್ಟವಾಗಿದೆ” ಎಂದು ಮೋದಿ ಸರ್ಕಾರವನ್ನು ಟೀಕಿಸಿದರು.

“ಭಾರತವು ದಲ್ಲಾಳಿ ರಾಷ್ಟ್ರವಲ್ಲ ಎಂದು ವಿದೇಶಾಂಗ ಸಚಿವರು ನಿನ್ನೆ ರಾತ್ರಿ ಹೇಳಿದ್ದಾರೆ. ಅದೇನೇ ಇರಲಿ, ನಮ್ಮ ರಾಜತಾಂತ್ರಿಕತೆ, ಸಂಪರ್ಕ ಮತ್ತು ನಿರೂಪಣಾ ನಿರ್ವಹಣೆಯಲ್ಲಿನ ಬೃಹತ್ ವೈಫಲ್ಯಗಳು ಈ ಹಿಂದೆ ಚೂರು ಚೂರಾಗಿದ್ದ ಪಾಕಿಸ್ತಾನ ದೇಶವನ್ನು ದಲ್ಲಾಳಿ (ಮಧ್ಯಸ್ಥಿಕೆ ವಹಿಸುವ) ದೇಶವನ್ನಾಗಿ ಮಾಡಿವೆ ಎಂಬುದು ಸತ್ಯ. ಅದು ನಮ್ಮ ರಾಜತಾಂತ್ರಿಕ ದಾಖಲೆಗೆ ಸ್ವಯಂ ಘೋಷಿತ ವಿಶ್ವಗುರು ಅವರ ಅನನ್ಯ ಕೊಡುಗೆ” ಎಂದು ಜೈರಾಮ್ ರಮೇಶ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...