ಭಾರತ ಕೇವಲ ಹಿಂದೂಗಳಿಗಲ್ಲ, ಎಲ್ಲರಿಗೂ ಸೇರಿದ್ದು: ನಿತಿನ್ ಗಡ್ಕರಿ

Date:

ಭಾರತವು ಕೇವಲ ಹಿಂದೂಗಳಿಗೆ ಮಾತ್ರ ಸೀಮಿತವಾದ ದೇಶವಲ್ಲ, ಅದು ಎಲ್ಲಾ ಭಾರತೀಯರಿಗೂ ಸೇರಿದ್ದು ಎಂದು ಕೇಂದ್ರ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ನಿತಿನ್ ಗಡ್ಕರಿ ಅವರು ಪ್ರತಿಪಾದಿಸಿದ್ದಾರೆ. ಅಲ್ಲದೆ, ಭಾರತೀಯ ಜನತಾ ಪಕ್ಷವು ಯಾವುದೇ ಸಮುದಾಯದ ವಿರುದ್ಧವಿಲ್ಲ; ಎಲ್ಲಾ ಧರ್ಮ, ಜಾತಿ ಮತ್ತು ಸಮುದಾಯಗಳನ್ನು ಒಟ್ಟಾಗಿ ಕರೆದೊಯ್ಯಲು ಬಯಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

- Advertisement -

ಶನಿವಾರ ನಾಗ್ಪುರದಲ್ಲಿ ಆಯೋಜಿಸಲಾಗಿದ್ದ ‘ಡಾ. ಶ್ಯಾಮಪ್ರಸಾದ್ ಮುಖರ್ಜಿ ಉಪನ್ಯಾಸ ಸರಣಿ’ಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಆದರ್ಶಗಳೊಂದಿಗೆ ಎಲ್ಲಾ ಧರ್ಮದ ಜನರನ್ನು ಬೆಸೆಯುವ ಮೂಲಕ ಭಾರತವನ್ನು ‘ವಿಶ್ವಗುರು’ವನ್ನಾಗಿ ಮಾಡಬೇಕು ಎಂದು ಕರೆ ನೀಡಿದರು. ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ, ಆ ಹಾದಿಯಲ್ಲೇ ಬಿಜೆಪಿ ಮುನ್ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ನೆಹರು ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ:ಇದೇ ವೇಳೆ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಗಡ್ಕರಿ, ಅವರು ‘ತುಷ್ಟೀಕರಣ’ದ ನೀತಿಯನ್ನು ಅಳವಡಿಸಿಕೊಂಡಿದ್ದರು ಎಂದು ಆರೋಪಿಸಿದರು.

“ಸ್ವಾತಂತ್ರ್ಯದ ಸಂದರ್ಭದಲ್ಲಿ ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳು ಸೃಷ್ಟಿಯಾದವು. ಅದರ ಇತಿಹಾಸ ಮತ್ತು ನಾವು ಇಂದಿಗೂ ಅನುಭವಿಸುತ್ತಿರುವ ಪರಿಣಾಮಗಳು ಎಲ್ಲರಿಗೂ ತಿಳಿದಿದೆ. ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಜಾತ್ಯತೀತತೆಯ ಹೆಸರಿನಲ್ಲಿ ತುಷ್ಟೀಕರಣದ ಮೊರೆ ಹೋಯಿತು. ಇದರಿಂದಾಗಿ ಧರ್ಮಗಳ ನಡುವೆ ಬಿರುಕು ಉಂಟಾಗಿ, ಜಾತೀಯತೆ ಹಾಗೂ ಕೋಮುವಾದಕ್ಕೆ ಕಾರಣವಾಯಿತು,” ಎಂದು ಟೀಕಿಸಿದರು. ಜೊತೆಗೆ, ಬಿಜೆಪಿಯ ಪೂರ್ವಾಶ್ರಮವಾದ ಜನಸಂಘದ ಬಗ್ಗೆ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ತಪ್ಪು ಕಲ್ಪನೆಗಳನ್ನು ಹರಡಿತ್ತು ಎಂದು ದೂರಿದರು.

“ನಾವು ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧವಿಲ್ಲ. ಎಲ್ಲರಿಗೂ ಸಮಾನ ಹಕ್ಕಿದೆ, ಸುಶಾಸನ (ಉತ್ತಮ ಆಡಳಿತ) ಮತ್ತು ಅಭಿವೃದ್ಧಿಯೇ ನಮ್ಮ ಪಕ್ಷದ ಧ್ಯೇಯ. ಡಾ. ಮುಖರ್ಜಿ, ಪಂಡಿತ್ ದೀನದಯಾಳ್ ಉಪಾಧ್ಯಾಯ ಹಾಗೂ ಅಟಲ್ ಬಿಹಾರಿ ವಾಜಪೇಯಿ ಅವರ ಮೌಲ್ಯಗಳೇ ಬಿಜೆಪಿಯ ಪರಂಪರೆ ಮತ್ತು ಬಂಡವಾಳ,” ಎಂದು ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...