ಪಾಕಿಸ್ತಾನ ಸಂಘರ್ಷದಲ್ಲಿ ಭಾರತ ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ: ದೃಢಪಡಿಸಿದ ಉನ್ನತ ರಕ್ಷಣಾ ಅಧಿಕಾರಿ

Date:

ಮೇ ತಿಂಗಳಲ್ಲಿ ಪಾಕಿಸ್ತಾನದೊಂದಿಗಿನ ಘರ್ಷಣೆಯಲ್ಲಿ ಅನಿರ್ದಿಷ್ಟ ಸಂಖ್ಯೆಯ ಯುದ್ಧ ವಿಮಾನಗಳನ್ನು ಕಳೆದುಕೊಂಡಿರುವುದಾಗಿ ಭಾರತೀಯ ಸೇನೆ ಮೊದಲ ಬಾರಿಗೆ ದೃಢಪಡಿಸಿದೆ. ಆದರೆ ನಾಲ್ಕು ದಿನಗಳ ಸಂಘರ್ಷ ಪರಮಾಣು ಯುದ್ಧದ ಹಂತಕ್ಕೆ ಬಂದಿರಲಿಲ್ಲ ಎಂದೂ ಹೇಳಿದೆ.

- Advertisement -

ಈ ಬಗ್ಗೆ ಬ್ಲೂಮ್‌ಬರ್ಗ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಭಾರತೀಯ ಸಶಸ್ತ್ರ ಪಡೆಗಳ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, “ಜೆಟ್ ಪತನಗೊಂಡಿದೆಯೇ ಎಂಬುದಕ್ಕಿಂತ ಜೆಟ್‌ಗಳನ್ನು ಏಕೆ ಪತನಗೊಳಿಸಲಾಗಿದೆ ಎಂಬುದು ಮುಖ್ಯ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಭಾರತ-ಪಾಕಿಸ್ತಾನ ಸಂಘರ್ಷ | ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆ

ಆರು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂಬ ಪಾಕಿಸ್ತಾನ ಹೇಳಿಕೊಂಡಿದೆ. ಆದರೆ ಈ ಹೇಳಿಕೆ ‘ಸಂಪೂರ್ಣವಾಗಿ ತಪ್ಪು’ ಎಂದೂ ಉನ್ನತ ರಕ್ಷಣಾ ಅಧಿಕಾರಿ ಅನಿಲ್ ಚೌಹಾಣ್ ಹೇಳಿದ್ದಾರೆ. ಆದರೆ ಭಾರತ ಎಷ್ಟು ಜೆಟ್‌ಗಳನ್ನು ಕಳೆದುಕೊಂಡಿದೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಲು ನಿರಾಕರಿಸಿದರು. “ಯಾವ ತಪ್ಪಿನಿಂದಾಗಿ ಜೆಟ್ ವಿಮಾನ ಪತನಗೊಂಡಿತು ಎಂಬುದು ಮುಖ್ಯವೇ ಹೊರತು, ಎಷ್ಟು ಪತನವಾಗಿದೆ ಎಂಬುದಲ್ಲ” ಎಂದು ಹೇಳಿದ್ದಾರೆ.

“ನಾವು ಮಾಡಿದ ಯುದ್ಧತಂತ್ರದ ತಪ್ಪನ್ನು ಅರ್ಥಮಾಡಿಕೊಳ್ಳಲು, ಅದನ್ನು ಸರಿಪಡಿಸಲು, ಎರಡು ದಿನಗಳ ನಂತರ ಅದನ್ನು ಮತ್ತೆ ಕಾರ್ಯಗತಗೊಳಿಸಲು ನಮಗೆ ಸಾಧ್ಯವಾಗುತ್ತಿರುವುದು ಒಳ್ಳೆಯ ವಿಚಾರ. ಎಲ್ಲಾ ಜೆಟ್‌ಗಳನ್ನು ಮತ್ತೆ ಹಾರಿಸಲು ಸಾಧ್ಯವಾಗುತ್ತದೆ” ಎಂದು ಜನರಲ್ ಚೌಹಾಣ್ ಹೇಳಿದರು.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕಾ ದಾಳಿ ನಡೆಸಿ 26 ಮಂದಿಯನ್ನು ಕೊಂದಿದೆ. ಇದಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕಾ ನೆಲೆಗಳ ಮೇಲೆ ದಾಳಿ ನಡೆಸಿ 100ಕ್ಕೂ ಅಧಿಕ ಉಗ್ರರನ್ನು ಹತ್ಯೆ ಮಾಡಿದೆ.

ಇದಾದ ಬಳಿಕ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಹೆಚ್ಚಾಗಿದೆ. ದಾಳಿ, ಪ್ರತಿದಾಳಿ ಹೆಚ್ಚಾಗುತ್ತಿದ್ದಂತೆ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...