ಜನಸಂಖ್ಯೆಯಲ್ಲಿ ಚೀನಾ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಭಾರತ

Date:

  • 2050ರಲ್ಲಿ ಭಾರತದ ಜನಸಂಖ್ಯೆ 166.08 ಕೋಟಿ ಆಗಿರುತ್ತದೆ
  • ಚೀನಾದಲ್ಲಿ 20 ಕೋಟಿ ಜನರು 65 ವರ್ಷ ಮೇಲ್ಪಟ್ಟವರು

ವಿಶ್ವದಲ್ಲಿಯೇ ಭಾರತ ಈಗ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಿದೆ.

- Advertisement -

ವಿಶ್ವಸಂಸ್ಥೆ ನೀಡಿರುವ ವರದಿಯಲ್ಲಿ, ಜನಸಂಖ್ಯೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಿದೆ. ವರದಿಯ ಪ್ರಕಾರ, ಈಗ ಭಾರತದ ಜನಸಂಖ್ಯೆ 142.86 ಕೋಟಿ ಆಗಿದೆ. ಚೀನಾ 142.57 ಕೋಟಿ ಜನಸಂಖ್ಯೆಯೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

2022ರಲ್ಲಿ ಚೀನಾದ 142.06 ಕೋಟಿಗೆ ಹೋಲಿಸಿದರೆ, ಭಾರತದ ಜನಸಂಖ್ಯೆಯು 141.02 ಕೋಟಿ ಇತ್ತು. 2050ರಲ್ಲಿ ಭಾರತದ ಜನಸಂಖ್ಯೆಯು 166.08 ಕೋಟಿ ಆಗಿರುತ್ತದೆ ಎಂದು ಅಂದಾಜಿಸಲಾಗಿದೆ.

ಒಂದು ವರ್ಷದಲ್ಲಿ ಭಾರತದ ಜನಸಂಖ್ಯೆ ಶೇ.1.56ರಷ್ಟು ಹೆಚ್ಚಾಗಿದೆ. ಭಾರತದ ಶೇ. 25ರಷ್ಟು ಜನರ ವಯಸ್ಸು 0-14 ವರ್ಷ, 10-19 ವರ್ಷ ವಯೋಮಾನದ ಶೇ.18 ಜನರಿದ್ದಾರೆ. 10-24 ವರ್ಷ ವಯಸ್ಸಿನ ಜನರ ಸಂಖ್ಯೆ ಶೇ. 26. ಭಾರತದಲ್ಲಿ 15-64 ವರ್ಷಗಳ ನಡುವೆ ಸುಮಾರು ಶೇ. 68 ಜನರಿದ್ದಾರೆ. ಅಂದರೆ ಭಾರತವು ಅತಿ ಹೆಚ್ಚು ಯುವಕರನ್ನು ಹೊಂದಿದೆ. ಇತ್ತೀಚಿನ ವರದಿಯು ಭಾರತದ ಒಟ್ಟು ಫಲವತ್ತತೆ ದರ 2.0 ಎಂದು ಅಂದಾಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಭಾರತದ ಚಿತ್ರಣವನ್ನು ಬದಲಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಭಾರತೀಯ ಪುರುಷನ ಸರಾಸರಿ ಜೀವಿತಾವಧಿ 71 ವರ್ಷ, ಮಹಿಳೆಯರ ಜೀವಿತಾವಧಿ 74 ವರ್ಷ. ಈ ವರದಿಯನ್ನು 1978ರಿಂದ ಪ್ರಕಟಿಸಲಾಗುತ್ತಿದೆ. ಈಗ ವಿಶ್ವದ ಜನಸಂಖ್ಯೆ 800 ಕೋಟಿ ದಾಟಿದೆ ಎಂದು ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಯ (ಯುಎನ್‌ಎಪ್‌ಪಿಎ) ಭಾರತದ ಪ್ರತಿನಿಧಿ ತಿಳಿಸಿದ್ದಾರೆ.

ಚೀನಾದಲ್ಲಿ ಒಂದು ಮಗುವಿನ ನೀತಿ ರದ್ದುಗೊಳಿಸಿ, ಮೂರು ಮಕ್ಕಳಿಗೆ ಅವಕಾಶ ನೀಡಿದ ನಂತರ ಜನಸಂಖ್ಯೆಯು ನಿರೀಕ್ಷೆಯಂತೆ ಹೆಚ್ಚಾಗಲಿಲ್ಲ. ಇಲ್ಲಿ 20 ಕೋಟಿ ಜನರು 65 ವರ್ಷ ಮೇಲ್ಪಟ್ಟವರಿದ್ದಾರೆ.

ಚೀನಾ ತನ್ನ ವೃದ್ಧರ ಜನಸಂಖ್ಯೆಯಿಂದ ತೊಂದರೆಗೀಡಾಗಿದೆ. ಅಲ್ಲಿ ಜನಸಂಖ್ಯೆ ಹೆಚ್ಚಿಸಲು ಸರ್ಕಾರ ಜನರಿಗೆ  ಹೊಸ ಯೋಜನೆಗಳನ್ನು ನೀಡುತ್ತಿದೆ. ಆದರೆ, ಅಲ್ಲಿಯ ಜನರು ಒಂದಕ್ಕಿಂತ ಹೆಚ್ಚು ಮಕ್ಕಳಿಗೆ ಜನ್ಮ ನೀಡುತ್ತಿಲ್ಲ. ಈಗ ಅವಿವಾಹಿತರು ಸಹ ಅಲ್ಲಿ ಮಗುವಿಗೆ ಜನ್ಮ ನೀಡಬಹುದು, ಮದುವೆಯಾದ ದಂಪತಿಯ ಮಗುವಿಗೆ ಸಿಗುವ ಎಲ್ಲಾ ಸೌಲಭ್ಯಗಳು ಅವರಿಗೆ ಸಿಗುತ್ತವೆ. ಅಲ್ಲಿ ಒಂದು ಕಾಲದಲ್ಲಿ ಜನರ ಸಂಖ್ಯೆ ನಿಯಂತ್ರಿಸಲು ಹಲವು ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿತ್ತು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...