ಜಾಗತಿಕ ಹಸಿವು ಸೂಚ್ಯಂಕ | ಹಸಿದವರ ದೇಶವಾದ ಭಾರತ; ಪಾಕಿಸ್ತಾನಕ್ಕಿಂತ ಕೆಳಕ್ಕೆ ಕುಸಿತ

Date:

2023ನೇ ಸಾಲಿನ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತವು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಶ್ರೀಲಂಕಾಕ್ಕಿಂತ ಕೆಳಗೆ ಕುಸಿದಿದ್ದು, 111ನೇ ಸ್ಥಾನಕ್ಕೆ ಇಳಿದಿದೆ.

ಸೂಚ್ಯಂಕದಲ್ಲಿ ನೆರೆ ರಾಷ್ಟ್ರಗಳಾದ ಪಾಕಿಸ್ತಾನ 102ನೇ ಸ್ಥಾನ, ಬಾಂಗ್ಲಾದೇಶ 81ನೇ ಸ್ಥಾನ, ನೇಪಾಳ 69ನೇ ಸ್ಥಾನ ಮತ್ತು ಶ್ರೀಲಂಕಾ 60ನೇ ಸ್ಥಾನ ಪಡೆದಿವೆ.

ಒಟ್ಟು 125 ರಾಷ್ಟ್ರಗಳನ್ನು ಒಳಗೊಂಡ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಲಾಗಿದೆ. ಆದರೆ ಪಟ್ಟಿಯಲ್ಲಿರುವ ದತ್ತಾಂಶಗಳನ್ನು ಕೇಂದ್ರ ಸರಕಾರ ನಿರಾಕರಿಸಿದ್ದು, ಇದು ತಿರುಚಲಾದ ಮಾಹಿತಿಯಿಂದ ಕೂಡಿದೆ ಎಂದು ಆರೋಪಿಸಿದೆ. 2022ನೇ ಸಾಲಿನಲ್ಲಿ 121 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 107ನೇ ಸ್ಥಾನದಲ್ಲಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ: ಮನೆ ಮುಂದೆ ನೀರು ಚೆಲ್ಲಬೇಡಿ ಎಂದದ್ದಕ್ಕೆ ದಲಿತ ವ್ಯಕ್ತಿಯ ಗುಂಡಿಕ್ಕಿ ಕೊಲೆ

ಹಸಿವು ಸೂಚ್ಯಂಕದಲ್ಲಿ ಭಾರತ 28.7 ಅಂಕ ಪಡೆದಿದೆ. ಇದು ಗಂಭೀರ ಮಟ್ಟದ ಹಸಿವನ್ನು ಸೂಚಿಸುತ್ತದೆ. ಇನ್ನು ದೇಶದಲ್ಲಿ ನ್ಯೂನಪೋಷಣೆ ಪ್ರಮಾಣ ಶೇ 16.6ರಷ್ಟಿದೆ. ಐದು ವರ್ಷಕ್ಕಿಂತ ಒಳಗಿನವರ ಮರಣ ಪ್ರಮಾಣ ಶೇ 3.1 ಇದೆ. 15 ರಿಂದ 24 ವರ್ಷದ ಒಳಗಿನ ಮಹಿಳೆಯರಲ್ಲಿನ ಅನೀಮಿಯಾ ಸಮಸ್ಯೆ ಶೇ 58.1ರಷ್ಟಿದೆ ಎಂದು ವರದಿಯಲ್ಲಿ ತಿಳಿಸಿದೆ.

ಇದಲ್ಲದೇ ಹಸಿವು ಸೂಚ್ಯಂಕ ವರದಿಯಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ಕುರಿತು ಅಂಕಿ-ಅಂಶ ನೀಡಲಾಗಿದೆ. ಇದರಲ್ಲಿ ಭಾರತದಲ್ಲಿ ಅತ್ಯಧಿಕ ಪ್ರಮಾಣ, ಅಂದರೆ ಶೇ 18.7 ದಾಖಲಾಗಿದೆ. ಈ ಮೂಲಕ ಭಾರತದ ಮಕ್ಕಳ ಎತ್ತರ ಮತ್ತು ತೂಕದ ಹೋಲಿಕೆಯಲ್ಲಿ ‘ಅಪೌಷ್ಟಿಕತೆ’ ಮಿತಿ ಮೀರುತ್ತಿರುವುದಾಗಿ ಆತಂಕ ವ್ಯಕ್ತವಾಗಿದೆ.

ಇದಲ್ಲದೆ, 2017 ರಿಂದ, ಜಾಗತಿಕ ಹಸಿವು ಸೂಚ್ಯಂಕ ಅಂಕಗಳ ಲೆಕ್ಕಾಚಾರದಲ್ಲಿ ಬಳಸುವ ಸೂಚಕಗಳಲ್ಲಿ ಒಂದಾದ ಅಪೌಷ್ಟಿಕತೆಯ ಹರಡುವಿಕೆಯು ಹೆಚ್ಚುತ್ತಿದೆ. ಅಪೌಷ್ಟಿಕತೆಯ ಸಂಖ್ಯೆಯು 572 ಮಿಲಿಯನ್‌ನಿಂದ ಸುಮಾರು 735 ಮಿಲಿಯನ್‌ಗೆ ಏರಿದೆ ಎಂದು ಸೂಚ್ಯಂಕ ವರದಿ ಹೇಳಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ...

ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ...

ಭಾರತದ ಯುವಕರದು ವಿರಾಟ್ ಕೊಹ್ಲಿ ರೀತಿಯ ಮನಸ್ಥಿತಿ: ರಘುರಾಂ ರಾಜನ್

ಬೃಹತ್ ಸಂಖ್ಯೆಯ ಭಾರತದ ಯುವಕರು ವಿದೇಶಗಳಿಗೆ ಹೋಗಿ ಅಲ್ಲಿ ತಮ್ಮ ಉದ್ಯಮವನ್ನು...