ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿ ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವಿನ ಸಂಘರ್ಷದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಇಸ್ರೇಲ್ ಹಾಗೂ ಹಮಾಸ್ ಹೋರಾಟಗಾರ ನಡುವಿನ ಸಂಘರ್ಷದಲ್ಲಿ ಇಲ್ಲಿಯವರೆಗೆ ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಸಮಯದಲ್ಲಿ ಭಾರತ ಇಸ್ರೇಲ್‌ನೊಂದಿಗೆ ನಿಂತಿದೆ ಎಂದು ಪ್ರಧಾನಿ ಮೋದಿ ನೆತನ್ಯಾಹು ಅವರಿಗೆ ಭರವಸೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಜಾತಿ ಗಣತಿಯು ಅಲ್ಪಸಂಖ್ಯಾತರ ‘ಎಕ್ಸ್-ರೇ’: ರಾಹುಲ್ ಗಾಂಧಿ
ಇಸ್ರೇಲ್‌ನಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಕುರಿತು ಅಪ್ಡೇಟ್ ಒದಗಿಸಿದ್ದಕ್ಕಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್‌ನೊಂದಿಗೆ ದೃಢವಾಗಿ ನಿಂತಿದ್ದಾರೆ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸಂಘರ್ಷದಲ್ಲಿ ಇಸ್ರೇಲ್‌ನಲ್ಲಿ ಕನಿಷ್ಠ 900 ಜನರು ಸಾವನ್ನಪ್ಪಿದ್ದಾರೆ ಮತ್ತು 2,600 ಜನರು ಗಾಯಗೊಂಡಿದ್ದಾರೆ. ಏತನ್ಮಧ್ಯೆ, ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, ಇಸ್ರೇಲಿ ವೈಮಾನಿಕ ದಾಳಿಯಲ್ಲಿ 143 ಮಕ್ಕಳು ಮತ್ತು 105 ಮಹಿಳೆಯರು ಸೇರಿದಂತೆ 704 ಜನರು ಸಾವನ್ನಪ್ಪಿದ್ದಾರೆ ಮತ್ತು 4,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.