ಅಕ್ರಮ ವಲಸೆಗಾರರ ಮೇಲೆ ಭಾರಿ ದಂಡ, ಜೈಲು ಶಿಕ್ಷೆ ವಿಧಿಸಲು ಕೇಂದ್ರ ನಿರ್ಧಾರ

Date:

Advertisements

ಅಧಿಕೃತ ಪಾಸ್‌ಪೋರ್ಟ್‌ ಅಥವಾ ವೀಸಾ ಇಲ್ಲದೇ ಅಕ್ರಮವಾಗಿ ಭಾರತವನ್ನು ಪ್ರವೇಶಿಸುವ ವಿದೇಶಿಯರಿಗೆ ಐದು ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಲು ಭಾರತ ಚಿಂತನೆ ನಡೆಸಿದೆ.

ನಕಲಿ ಪಾಸ್‌ಪೋರ್ಟ್ ಅಥವಾ ಪ್ರವಾಸದ ದಾಖಲೆಯೊಂದಿಗೆ ಭಾರತವನ್ನು ಪ್ರವೇಶಿಸುವುದು, ಭಾರತದಲ್ಲಿ ತಂಗುವುದು ಅಥವಾ ಭಾರತದಿಂದ ನಿರ್ಗಮಿಸಿದಲ್ಲಿ ಎರಡರಿಂದ ಏಳು ವರ್ಷ ವರೆಗೆ ಜೈಲು ಶಿಕ್ಷೆ ಹಾಗೂ ಒಂದು ಲಕ್ಷದಿಂದ ಹತ್ತು ಲಕ್ಷ ರೂಪಾಯಿವರೆಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ.

ವಲಸೆ ಮತ್ತು ವಿದೇಶಿಯರ ಮಸೂದೆ-2025ನ್ನು ಪ್ರಸಕ್ತ ಲೋಕಸಭಾ ಅಧಿವೇಶನದಲ್ಲೇ ಮಂಡಿಸಲು ಸಿದ್ಧತೆ ನಡೆದಿದ್ದು, ವಲಸೆ ಮತ್ತು ವಿದೇಶಿಯರನ್ನು ನಿಯಂತ್ರಿಸುವ ವಿದೇಶಿಯರ ಕಾಯ್ದೆ-1946 ಪಾಸ್ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ-1920, ವಿದೇಶಿಯರ ನೋಂದಣಿ ಕಾಯ್ದೆ-1939 ಮತ್ತು ಇಮಿಗ್ರೇಶನ್ (ಕ್ಯಾರಿಯರ್ಸ್ ಲಯಾಬಿಲಿಟಿ) ಕಾಯ್ದೆ-2000 ಹೀಗೆ ನಾಲ್ಕು ಕಾಯ್ದೆಗಳ ವಿವಿಧ ನಿಬಂಧನೆಗಳು ಒಂದರ ಮೇಲೊಂದು ವ್ಯಾಪಿಸುವ ಹಿನ್ನೆಲೆಯಲ್ಲಿ ಇವುಗಳ ಬದಲಾಗಿ ಒಂದೇ ಸಮಗ್ರ ಶಾಸನ ಜಾರಿಗೊಳಿಸಲು ಉದ್ದೇಶಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚೀನಾಕ್ಕೆ ತಲೆನೋವಾಗಿರುವ ಜನಸಂಖ್ಯೆ- ಭಾರತ ಕಲಿಯಬೇಕಿರುವ ಪಾಠಗಳು!

ಸದ್ಯಕ್ಕೆ ಮೌಲಿಕ ಪಾಸ್ಪೋರ್ಟ್ ಅಥವಾ ಪ್ರಯಾಣದ ದಾಖಲೆ ಇಲ್ಲದೇ ಭಾರತವನ್ನು ಪ್ರವೇಶಿಸುವ ವಿದೇಶಿಯರಿಗೆ ಐದು ವರ್ಷ ಜೈಲು ಮತ್ತು ದಂಡ ವಿಧಿಸಬಹುದಾಗಿದೆ. ನಕಲಿ ದಾಖಲೆಗಳ ಮೂಲಕ ಭಾರತಕ್ಕೆ ಪ್ರವೇಶ ಪಡೆಯುವವರಿಗೆ 8 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.

ಹೊಸ ಮಸೂದೆಯ ಅನ್ವಯ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳು, ಇಂತಹ ವರ್ಗದ ವಿದೇಶಿಯರಿಗೆ ನಿರ್ದಿಷ್ಟಪಡಿಸಿದ ನೋಂದಣಿ ಅಧಿಕಾರಿ ಜತೆಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ವಿವರಗಳನ್ನು ಹಂಚಿಕೊಳ್ಳಬೇಕಾಗುತ್ತದೆ. ಈ ನಿಬಂಧನೆಯು ಎಲ್ಲ ಆಸ್ಪತ್ರೆಗಳು, ನರ್ಸಿಂಗ್‌ಹೋಮ್‌ಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಹಾಗೂ ಅವರ ಅವರಣದಲ್ಲಿರುವ ವಸತಿ ವ್ಯವಸ್ಥೆಗಳಿಗೂ ಅನ್ವಯಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X