ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ: ಪ್ರತ್ಯೇಕ ಸ್ಮಾರಕಕ್ಕೆ ಕೊನೆಗೂ ಅವಕಾಶ

Date:

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. ದೆಹಲಿಯಲ್ಲಿರುವ ನಿಗಮ್ ಬೋಧ ಘಾಟ್‌ನಲ್ಲಿ ಬೆಳಗ್ಗೆ 11:45 ಕ್ಕೆ ಅವರ ಅಂತ್ಯಕ್ರಿಯೆ ನಡೆಯಲಿದೆ.

- Advertisement -

ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಸುವ ಬಗ್ಗೆ ಕೇಂದ್ರ ಗೃಹ ಇಲಾಖೆಯು ರಕ್ಷಣಾ ಇಲಾಖೆಗೆ ಪತ್ರ ಬರೆದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಸಕಲ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸದ್ಯ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಿಂದ ದೆಹಲಿಯಲ್ಲಿರುವ ಎಐಸಿಸಿ ಕಚೇರಿಗೆ ತರಲಾಗಿದ್ದು 8:30 ರಿಂದ 9:30 ರ ವರೆಗೂ ಸಾರ್ವಜನಿಕರು ಮತ್ತು ಕಾರ್ಯಕರ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 9:30 ಬಳಿಕ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆ ಆರಂಭವಾಗಲಿದೆ.

ಪ್ರತ್ಯೇಕ ಸ್ಮಾರಕಕ್ಕೆ ಅವಕಾಶ

Advertisements

ತಡರಾತ್ರಿಯಲ್ಲಿ ನಡೆದ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರಕ್ಕೆ ಪ್ರತ್ಯೇಕ ಸ್ಥಳ ನೀಡಲು ಕೇಂದ್ರವು ಒಪ್ಪಿಗೆ ನೀಡಿದೆ. ಡಿ.27ರ ತಡರಾತ್ರಿಯಲ್ಲಿ ಪ್ರತ್ಯೇಕ ಸ್ಮಾರಕ ವಿಚಾರವಾಗಿ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅಂತ್ಯಕ್ರಿಯೆಯನ್ನು ಪ್ರತ್ಯೇಕ ಸ್ಮಾರಕ ಸ್ಥಳದಲ್ಲಿ ನಡೆಸಬೇಕೆಂಬ ಕಾಂಗ್ರೆಸ್‌ನ ಮನವಿಯನ್ನು ಕೇಂದ್ರವು ಆರಂಭದಲ್ಲಿ ನಿರಾಕರಿಸಿತು. ಕೇಂದ್ರದ ನಿರ್ಧಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಭಾರತದ ಮೊದಲ ಸಿಖ್ ಪ್ರಧಾನಿಗೆ ಉದ್ದೇಶಪೂರ್ವಕ ಅವಮಾನ” ಎಂದು ಟ್ವೀಟ್‌ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿಸಿಟಿವಿ ಅಳವಡಿಸಿ, ಸೆಕ್ಯುರಿಟಿ ನೇಮಿಸಿದರಷ್ಟೇ ಮಹಿಳಾ ಸುರಕ್ಷತೆ ಸಾಧ್ಯವೇ?

ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಅತಿ ಗಣ್ಯರಿಗೆ ಮೀಸಲಾದ ಸ್ಥಳದಲ್ಲಿ ಗೌರವ ಸಂಪ್ರದಾಯಗಳೊಂದಿಗೆ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನಡೆಸುವಂತೆ ಮನವಿ ಮಾಡಿದರು.

ಈ ಬೆಳವಣಿಗೆ ನಂತರ ತಡರಾತ್ರಿಯಲ್ಲಿ ಕೇಂದ್ರ ಗೃಹ ಸಚಿವಾಲಯವು, ಕಾಂಗ್ರೆಸ್ ಮುಖ್ಯಸ್ಥರಿಂದ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಸರ್ಕಾರಕ್ಕೆ ಸಲ್ಲಿಸಿದ ಮನವಿಯನ್ನು ಸ್ವೀಕರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...