ನಾಲ್ಕನೇ ದಿನಕ್ಕೆ ಕಾಲಿಟ್ಟ INDIA ಒಕ್ಕೂಟದ ಪ್ರತಿಭಟನೆ; CEC ಗ್ಯಾನೇಶ್‌ ಕುಮಾರ್‌ ರಾಜೀನಾಮೆಗೆ ಪಟ್ಟು

Date:

CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಒಕ್ಕೂಟದ ನಾಯಕರು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ‘ಮತ ಕಳ್ಳತನ’ (Vote Chori) ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸಮರ ಸಾರಿರುವ ಒಕ್ಕೂಟದ ನಾಯಕರು ಗುರುವಾರ ದೆಹಲಿಯ ರಾಜಘಾಟ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ತಾವೆಲ್ಲರೂ ಗಾಂಧಿ ಸ್ಮಾರಕದ ಬಳಿ ಜಮಾಯಿಸಿ ಸತ್ಯಾಗ್ರಹ ನಡೆಸಿದೆವು ಎಂದು ನಾಯಕರು ತಿಳಿಸಿದ್ದು, ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಘೋಷಿಸಿದ್ದರು.

- Advertisement -

ಗುರುವಾರದಂದು ಕಾನಾಟ್ ಪ್ಲೇಸ್‌ನ ಮೋಟ್ಸ್ ರೆಸ್ಟೋರೆಂಟ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಏರ್ಪಡಿಸಿದ್ದ ಮಧ್ಯಾಹ್ನದ ಭೋಜನ ಕೂಟದ ಬಳಿಕ ‘ಇಂಡಿಯಾ’ ಒಕ್ಕೂಟದ ನಾಯಕರು ರಾಜಘಾಟ್‌ಗೆ ಬಸ್‌ಗಳಲ್ಲಿ ತೆರಳಿದರು. ಮೊದಲ ದಿನ (ಅಕ್ಟೋಬರ್ 6) ಚುನಾವಣಾ ಆಯುಕ್ತರ ಕಚೇರಿ ಬಳಿ ಮತ್ತು ಎರಡನೇ ದಿನ ಜಂತರ್ ಮಂತರ್ ಕಡೆಗೆ ತೆರಳದಂತೆ ಪೊಲೀಸರು ಬಲವಂತವಾಗಿ ತಡೆದಿದ್ದರು ಎಂದು ರಾಹುಲ್ ಗಾಂಧಿ ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅಪರಾಧಿಕ ಸಂಚಿನ ಮೂಲಕ ದೇಶವನ್ನು ಅಪಹರಿಸಿದ್ದಾರೆ. ಇವರು ಸಂವಿಧಾನವನ್ನು ನಾಶಪಡಿಸಿ ಮತಗಳನ್ನು ಕದ್ದಿದ್ದಾರೆ ಮತ್ತು ಇವರನ್ನು ಖಂಡಿತವಾಗಿಯೂ ಕಾನೂನಿನ ಕಟಕಟೆಗೆ ತರಲಾಗುವುದು ಎಂದು ರಾಹುಲ್ ಗಾಂಧಿ ಗುಡುಗಿದರು. ಬಿಜೆಪಿ ಸರ್ಕಾರವು ನಮ್ಮ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರಮುಖರಾದ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ವಿವೇಕ್ ತಂಖಾ, ಮಾಣಿಕ್ಕಂ ಟಾಗೋರ್, ಜೊತಿಮಣಿ, ರಾಜೀವ್ ಶುಕ್ಲಾ, ದೀಪೇಂದರ್ ಹೂಡಾ ಹಾಗೂ ಹಿಮಾಚಲ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳಾದ ಸುಖವಿಂದರ್ ಸಿಂಗ್ ಸುಖು ಮತ್ತು ಎ. ರೇವಂತ್ ರೆಡ್ಡಿ ಉಪಸ್ಥಿತರಿದ್ದರು. ಹಾಗೆಯೇ ತೃಣಮೂಲ ಕಾಂಗ್ರೆಸ್‌ನ ಅಭಿಷೇಕ್ ಬ್ಯಾನರ್ಜಿ, ಮೇನಕಾ ಗುರುಸ್ವಾಮಿ, ಸಮೀರುಲ್ ಇಸ್ಲಾಂ, ಸಮಾಜವಾದಿ ಪಕ್ಷದ ರಾಜೀವ್ ರೈ, ಮೊಹಿಬುಲ್ಲಾ ನದ್ವಿ, ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್, ಸಿಪಿಐನ ಪಿ. ಸಂತೋಷ್ ಮತ್ತು ಆರ್‌ಜೆಡಿಯ ಸುಧಾಕರ್ ಸಿಂಗ್ ಸೇರಿದಂತೆ ವಿವಿಧ ಪಕ್ಷಗಳ ಪ್ರಮುಖ ನಾಯಕರು ಮತ್ತು ಸುಮಾರು 300ಕ್ಕೂ ಹೆಚ್ಚು ಸಂಸತ್ ಸದಸ್ಯರು ಭಾಗವಹಿಸಿದ್ದರು.

ಇದನ್ನೂ ಓದಿ: ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ ಗಟ್ಟಿಗಿತ್ತಿ ಪ್ರಿಯಾಂಕಾ!

ಪ್ರತಿಭಟನೆಯ ಮುಂದಿನ ಹಂತವಾಗಿ ರಾಷ್ಟ್ರಪತಿ ಭವನದಲ್ಲಿ ಹೋರಾಟ ನಡೆಸಲು ಒಕ್ಕೂಟ ನಿರ್ಧರಿಸಿದೆ. ರಾಷ್ಟ್ರಪತಿಯವರ ಭೇಟಿಗಾಗಿ ಅಕ್ಟೋಬರ್ 2ರಂದೇ ಮನವಿ ಮಾಡಲಾಗಿದ್ದು, ಅಕ್ಟೋಬರ್ 5ರಂದು ಎಲ್ಲಾ ಒಕ್ಕೂಟದ ನಾಯಕರ ಹೆಸರುಗಳನ್ನು ನೀಡಲಾಗಿತ್ತು. ಅಕ್ಟೋಬರ್ 7, 8 ಮತ್ತು 9ರಂದು ಭೇಟಿಗೆ ಸಮಯ ಕೋರಲಾಗಿದ್ದು, ಇಲ್ಲಿಯವರೆಗೆ ರಾಷ್ಟ್ರಪತಿ ಭವನದಿಂದ ಯಾವುದೇ ಅಧಿಕೃತ ಸ್ಪಂದನೆ ದೊರೆತಿಲ್ಲ. ಒಂದು ವೇಳೆ ರಾಷ್ಟ್ರಪತಿಯವರು ಭೇಟಿಗೆ ಅವಕಾಶ ನೀಡಿದರೆ ಆಯ್ದ ಸಂಸದರ ನಿಯೋಗ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದೆ. ಇಲ್ಲದಿದ್ದರೆ ಸಂಸತ್ ಭವನದಿಂದ ರಾಷ್ಟ್ರಪತಿ ಭವನದವರೆಗೆ ಬೃಹತ್ ಮೆರವಣಿಗೆ ನಡೆಸಿ ಅಲ್ಲಿಯೇ ಪ್ರತಿಭಟನೆ ಮುಂದುವರಿಸಲು ನಾಯಕರು ತೀರ್ಮಾನಿಸಿದ್ದಾರೆ. ಅಕ್ಟೋಬರ್ 6ರಂದು ಸಂಸತ್ತಿನ ಮಕರ ದ್ವಾರದಿಂದ ಚುನಾವಣಾ ಆಯುಕ್ತರ ಕಚೇರಿವರೆಗೆ ಮತ್ತು ಅಕ್ಟೋಬರ್ 7ರಂದು ಜನಪಥದಿಂದ ಜಂತರ್ ಮಂತರ್ ವರೆಗೆ ವಿಪಕ್ಷಗಳು ಪ್ರತಿಭಟನಾ ಮೆರವಣಿಗೆ ನಡೆಸಿದ್ದವು ಎಂಬುದು ಗಮನಾರ್ಹ.

ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ TMCಯ     ಅಭಿಷೇಕ್ ಬ್ಯಾನರ್ಜಿ, ಸಮಾಜವಾದಿ ಪಕ್ಷ, ಎಡಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳ ಪ್ರಮುಖ ಮುಖಂಡರು ಕೈಜೋಡಿಸಿರುವುದು ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯ ವಿರುದ್ಧ ಬಲವಾದ ಒಕ್ಕೂಟದ ಹೋರಾಟದ ಸುಳಿವು ನೀಡಿದೆ. ಪೊಲೀಸರ ತಡೆ ಹಾಗೂ ನಿರ್ಬಂಧಗಳ ನಡುವೆಯೂ ರಾಜಘಾಟ್‌ನಲ್ಲಿ ಗಾಂಧೀಜಿಯವರ ಸಮಾಧಿಯ ಬಳಿ ಸತ್ಯಾಗ್ರಹ ನಡೆಸಿರುವುದು ಗಾಂಧೀವಾದಿ ತತ್ವದ ಮೂಲಕ ಸರ್ಕಾರದ ಗಮನ ಸೆಳೆದಿದೆ. ಮುಂಬರುವ ಸಂಸತ್ ಅಧಿವೇಶನಗಳಲ್ಲಿ ಅಥವಾ ಕಲಾಪಗಳಲ್ಲಿ ಈ ವಿವಾದವು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ರಾಷ್ಟ್ರಪತಿ ಭವನದ ಕಡೆಯಿಂದ ಸಕಾರಾತ್ಮಕ ಸ್ಪಂದನೆ ಸಿಗದಿದ್ದರೆ ವಿಪಕ್ಷಗಳು ದೇಶಾದ್ಯಂತ ಜನಸಾಮಾನ್ಯರ ಮಟ್ಟದಲ್ಲಿ ಈ ಅಭಿಯಾನವನ್ನು ವಿಸ್ತರಿಸುವ ಮುನ್ಸೂಚನೆಯನ್ನು ಈ ಹೋರಾಟ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ, ಅಸ್ಸಾಂನಲ್ಲಿ ಉಪಚುನಾವಣೆ ಮತ ಎಣಿಕೆ ಆರಂಭ

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಪುದುಚೇರಿಯ ಐದು ವಿಧಾನಸಭಾ ಕ್ಷೇತ್ರಗಳು...