ಡಿ. 26ರಿಂದ ರೈಲು ಪ್ರಯಾಣ ಇನ್ನಷ್ಟು ತುಟ್ಟಿ: ಟಿಕೆಟ್ ದರ ಹೆಚ್ಚಿಸಿದ ಭಾರತೀಯ ರೈಲ್ವೆ

Date:

ಡಿಸೆಂಬರ್ 26ರಿಂದ ರೈಲು ಪ್ರಯಾಣ ಇನ್ನಷ್ಟು ತುಟ್ಟಿಯಾಗಲಿದೆ. ಭಾರತೀಯ ರೈಲ್ವೆ ಭಾನುವಾರ ಹೊಸ ದರವನ್ನು ಪ್ರಕಟಿಸಿದ್ದು, ಟಿಕೆಟ್ ದರ ಹೆಚ್ಚಿಸಿದೆ. ಇದರಿಂದಾಗಿ ಭಾರತೀಯ ರೈಲ್ವೆಯು 600 ಕೋಟಿ ರೂಪಾಯಿ ಆದಾಯ ಗಳಿಸುವ ನಿರೀಕ್ಷೆಯಿದೆ.

- Advertisement -

ಹೊಸ ಟಿಕೆಟ್ ಬೆಲೆ ರಚನೆಯ ಪ್ರಕಾರ ಪ್ರಯಾಣಿಕರು ಸಾಮಾನ್ಯ ದರ್ಜೆಯಲ್ಲಿ 215 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣ ಮಾಡುವುದಾದರೆ ಪ್ರತಿ ಕಿ.ಮೀ.ಗೆ 1 ಪೈಸೆ ಮತ್ತು ಮೇಲ್/ಎಕ್ಸ್‌ಪ್ರೆಸ್ ನಾನ್-ಎಸಿ ಮತ್ತು ಎಸಿ ಕ್ಲಾಸ್‌ಗಳಲ್ಲಿ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚುವರಿ ಪಾವತಿಸಬೇಕಾಗುತ್ತದೆ. 215 ಕಿ.ಮೀ.ಗಿಂತ ಕಡಿಮೆ ಪ್ರಯಾಣಕ್ಕೆ ಟಿಕೆಟ್ ಬೆಲೆ ಹೆಚ್ಚಳವಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಕೊಂಕಣ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

ಇನ್ನು 500 ಕಿ.ಮೀ. ನಾನ್-ಎಸಿ ಪ್ರಯಾಣದ ಪ್ರಯಾಣಿಕರು ಹೆಚ್ಚುವರಿಯಾಗಿ ರೂ. 10 ಪಾವತಿಸಬೇಕಾಗುತ್ತದೆ. ಕಡಿಮೆ ಮತ್ತು ಮಧ್ಯಮ ಆದಾಯದ ಕುಟುಂಬಗಳಿಗೆ ಸಮಸ್ಯೆಯಾಗದಿರಲಿ ಎಂದು ರೈಲ್ವೆ ಉಪನಗರ ಮತ್ತು ಮಾಸಿಕ ಸೀಸನ್ ಟಿಕೆಟ್‌ಗಳ ದರವನ್ನು ಹೆಚ್ಚಿಸಿಲ್ಲ ಎಂದು ರೈಲ್ವೆ ಹೇಳಿಕೊಂಡಿದೆ. ರೈಲ್ವೆ ಸಚಿವಾಲಯದ ಪ್ರಕಾರ, 2025ರ ಜುಲೈನಲ್ಲಿ ದರ ಹೆಚ್ಚಳ ಮಾಡಿ ಈವೆರೆಗೆ ರೂ. 700 ಕೋಟಿ ಆದಾಯವನ್ನು ಗಳಿಸಲಾಗಿದೆ.

ಭಾರತದಲ್ಲಿ ರೈಲ್ವೆ ಸೇವೆಯು ಬಡ ಮತ್ತು ಮಧ್ಯಮ ವರ್ಗದ ಜನರ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದೆ. ಹಾಗಾಗಿ ಈ ಸಾರಿಗೆ ವ್ಯವಸ್ಥೆಯ ಟಿಕೆಟ್ ದರ ಏರಿಕೆ ಮಾಡಿರುವುದು ನೇರವಾಗಿ ಬಡ, ಮಧ್ಯಮ ವರ್ಗದ ಜನರ ಮೇಲೆ ಪ್ರಭಾವ ಬೀರುತ್ತದೆ. 2018ರಿಂದ ಸರಕು ಸಾಗಣೆ ರೈಲುಗಳ ದರಗಳನ್ನು ಬದಲಾಯಿಸಲಾಗಿಲ್ಲ. ಆದರೆ ರೈಲ್ವೆ ಆದಾಯವನ್ನು ಪಡೆಯುವ ನಿಟ್ಟಿನಲ್ಲಿ ಪ್ರಯಾಣಿಕರ ಶುಲ್ಕವನ್ನು ಹೆಚ್ಚಿಸುವುದು ಸರಿಯಲ್ಲ ಎಂದು ಟೀಕಿಸಲಾಗುತ್ತಿದೆ.

“ರೈಲು, ಟೆಲಿಕಾಂ, ವಿಮಾನಯಾನ, ಮೆಟ್ರೋ ದರ, ಮನೆ ಬಾಡಿಗೆ ಹೆಚ್ಚಾಗುತ್ತಿದೆ. ಆದರೆ ನಮ್ಮ ಆದಾಯ ಮಾತ್ರ ಹೆಚ್ಚಾಗುತ್ತಿಲ್ಲ. ಇದು ಬೇಸರದ ಸಂಗತಿಯಾದರೂ ನಿಜ ವಿಷಯ” ಎಂದು ನೆಟ್ಟಿಗರು ಹೇಳಿದ್ದಾರೆ. “ಇಷ್ಟು ಟಿಕೆಟ್ ದರ ಏರಿಸಿದರೂ ಸೇವೆಯಲ್ಲಿ ಯಾವ ಬದಲಾವಣೆಯಿದೆ? 3ಎಸಿ ಅನ್ನು ಸ್ಲಿಪರ್ ಕ್ಲಾಸ್‌ನಂತೆ ಮಾಡಲಾಗಿದೆ, ಸ್ಲಿಪರ್ ಕ್ಲಾಸ್ ಜನರಲ್ ಬೋಗಿಯಾಗಿದೆ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...

ಸೊಹ್ರಾಬುದ್ದೀನ್ ಪ್ರಕರಣ: ಅಮಿತ್ ಶಾ ಬಿಡುಗಡೆ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ತೀವ್ರ ಕುತೂಹಲ ಕೆರಳಿಸಿರುವ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...