ಜಮ್ಮು ಕಾಶ್ಮೀರ | ಪೂಂಚ್‌ನಲ್ಲಿ ಪಾಕಿಸ್ತಾನ ಶೆಲ್‌ ದಾಳಿ: ಭಾರತೀಯ ಯೋಧ ಮೃತ

Date:

ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆ ಉದ್ದಕ್ಕೂ ಪಾಕಿಸ್ತಾನ ಸೇನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ 5ನೇ ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಶರ್ಮಾ ಗುರುವಾರ ಮೃತಪಟ್ಟಿದ್ದಾರೆ.

- Advertisement -

ಇದೇ ಸಂದರ್ಭದಲ್ಲಿ ಪಾಕಿಸ್ತಾನದ ಸೇನೆಯು ಭಾರತದ ಅಡಿಯಲ್ಲಿರುವ ಪೂಂಚ್ ಪ್ರದೇಶದಲ್ಲಿ ಜನ ವಾಸವಾಗಿರುವ ಪ್ರದೇಶಗಳು, ರಸ್ತೆಗಳ ಮೇಲೆ ದಾಳಿ ನಡೆಸಿದೆ. ಈ ಶೆಲ್ ದಾಳಿಯಿಂದ 15 ಮಂದಿ ನಾಗರಿಕರು ಮೃತಪಟ್ಟಿದ್ದು, 43 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಎಲ್‌ಒಸಿಯ ಪ್ರದೇಶವಾಗಿರುವ ಪೂಂಚ್ ಮತ್ತು ರಾಜೌರಿ, ತಂಗ್ದಾರ್ ಪ್ರದೇಶಗಳಲ್ಲಿನ ಜನವಸತಿಯ ಪ್ರದೇಶಗಳ ಹಲವೆಡೆ ಶೆಲ್ ದಾಳಿ ನಡೆಸಿರುವ ಪಾಕಿಸ್ತಾನವು, ನಾಗರಿಕರನ್ನು ಗುರಿಯಾಗಿಸಿರುವುದಾಗಿ ವರದಿಯಾಗಿದೆ.

ಬುಧವಾರ ತಡರಾತ್ರಿ ಆರಂಭವಾದ ಶೆಲ್ ದಾಳಿಯು ಭಾರತದ ಮುಂಚೂಣಿ ಠಾಣೆಗಳು ಮತ್ತು ಹತ್ತಿರದ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆದಿದೆ. ಮೋರ್ಟರ್ ಗುಂಡುಗಳು ಮತ್ತು ಫಿರಂಗಿ ಗುಂಡಿನ ದಾಳಿಗಳು ಹಳ್ಳಿಗಳ ಬಳಿ ಅಪಾಯಕಾರಿಯಾಗಿ ಬಿದ್ದವು. ಭಾರತದ ಇತ್ತೀಚಿನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಿಗೆ ಪ್ರತಿಕ್ರಿಯೆಯಾಗಿ ಈ ಕೃತ್ಯವನ್ನು ಸ್ಪಷ್ಟ ಕದನ ವಿರಾಮ ಉಲ್ಲಂಘನೆ ಮತ್ತು ಉದ್ದೇಶಪೂರ್ವಕ ಪ್ರಚೋದನೆ ಎಂದು ಭಾರತೀಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!

ದಾಳಿಯಲ್ಲಿ ಮಾರಣಾಂತಿಕವಾಗಿ ಗಾಯಗೊಂಡಾಗ ಯೋಧ ಮುಂಚೂಣಿಯ ಸ್ಥಾನಗಳಲ್ಲಿ ಸಕ್ರಿಯ ಕರ್ತವ್ಯದಲ್ಲಿದ್ದರು. ಭಾರತೀಯ ಸೇನೆಯ ಪ್ರಕಾರ, ಶರ್ಮಾ ಕೊನೆಯವರೆಗೂ ಧೈರ್ಯದಿಂದ ಹೋರಾಡಿದರು. ಪ್ರತಿಕೂಲ ಆಕ್ರಮಣದ ವಿರುದ್ಧ ದೇಶದ ಗಡಿಯನ್ನು ರಕ್ಷಿಸಿದರು.

ಹುತಾತ್ಮರಾದ 32 ವರ್ಷದ ಜವಾನ್ ದಿನೇಶ್ ಕುಮಾರ್ ಶರ್ಮಾ, ಹರಿಯಾಣದ ಪಲ್ವಾಲ್‌ನ ಮೊಹಮ್ಮದ್‌ಪುರ ಗ್ರಾಮದವರು. ಅವರು ಪಾಕಿಸ್ತಾನದ ಆಕ್ರಮಣ ನೆಡಿಸುವ ಅತೀ ಸೂಕ್ಷ್ಮ ಪ್ರದೇಶವಾದ ಎಲ್‌ಒಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...