30 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಶ್ರಮ ಅಗತ್ಯ; ವಾರಕ್ಕೆ 80-90 ಗಂಟೆ ಕೆಲಸ ಮಾಡಬೇಕು: ನೀತಿ ಆಯೋಗ ಮಾಜಿ ಸಿಇಒ

Date:

2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಸಾಧನೆಯನ್ನು ಮಾಡಬೇಕಾದರೆ ಭಾರತೀಯರು ಅಧಿಕ ಶ್ರಮ ಅಗತ್ಯವಾಗಿದೆ. ನಾನು ಪರಿಶ್ರಮಪಟ್ಟು ಕೆಲಸ ಮಾಡುವುದರ ಮೇಲೆ ನಂಬಿಕೆ ಹೊಂದಿದ್ದೇನೆ. ವಾರಕ್ಕೆ 80 ಗಂಟೆಯಾಗಲಿ ಅಥವಾ 90 ಗಂಟೆಯಾಗಲಿ ಭಾರತೀಯರು ಕಠಿಣ ಶ್ರಮಪಡುವುದು ಅಗತ್ಯವಾಗಿದೆ” ಎಂದು ನೀತಿ ಆಯೋಗದ ಮಾಜಿ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.

- Advertisement -

ಪ್ರಸ್ತುತ ದೇಶದಲ್ಲಿ ಜನರ ಅದರಲ್ಲೂ ಮುಖ್ಯವಾಗಿ ಯುವಕರ ಉದ್ಯೋಗವಧಿ ಬಗ್ಗೆ ಅಧಿಕ ಚರ್ಚೆ ನಡೆಯುತ್ತಿದೆ. ಕೆಲವು ಕಾರ್ಪೋರೇಟ್ ಸಂಸ್ಥೆಗಳ ಮಾಲೀಕರುಗಳು ಯುವಕರು ವಾರಕ್ಕೆ 70 ಗಂಟೆ, 90 ಗಂಟೆ ಕೆಲಸ ಮಾಡಬೇಕು ಎಂಬ ಹೇಳಿಕೆಗಳನ್ನು ನೀಡಿ ತೀವ್ರ ವಾಗ್ದಾಳಿಗೆ ಗುರಿಯಾಗಿದ್ದಾರೆ. ಇವೆಲ್ಲವುದರ ನಡುವೆ ಇದೀಗ ನೀತಿ ಆಯೋಗದ ಮಾಜಿ ಸಿಇಒ ಕೂಡಾ ವಾರಕ್ಕೆ 80-90 ಗಂಟೆಗಳು ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿ ಕಾರ್ಮಿಕ ಸಂಘಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? 70 ಗಂಟೆ, 90 ಗಂಟೆ ಕೆಲಸ: ಉದ್ಯೋಗಿಗಳ ರಕ್ತ ಹೀರುವುದು ಲಾಭಕೋರ ಬಂಡವಾಳಿಗರ ಸಂಚು

“ಪ್ರಬಲವಾದ ಉದ್ಯೋಗ ನೀತಿಯಿಂದಾಗಿ ಜಪಾನ್, ದಕ್ಷಿಣ ಕೊರಿಯಾ ಮತ್ತು ಚೀನಾ ಆರ್ಥಿಕವಾಗಿ ಯಶಸ್ಸು ಕಂಡಿದೆ. ಭಾರತವೂ ಇದೇ ರೀತಿಯ ಮನಸ್ಥಿತಿ ಬೆಳೆಸುವ ಅಗತ್ಯವಿದೆ. ವಾರಕ್ಕೆ 80 ಆಗಲಿ ಅಥವಾ 90 ಗಂಟೆಯಾಗಲಿ ಭಾರತೀಯರು ಪರಿಶ್ರಮಪಟ್ಟು ಕೆಲಸ ಮಾಡಬೇಕು. 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 30 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಬೆಳೆಯುವುದು ನಿಮ್ಮ ಗುರಿಯಾಗಿದ್ದರೆ, ಮನರಂಜನೆ ಅಥವಾ ಸಿನಿಮಾ ಸ್ಟಾರ್‌ಗಳನ್ನು ಫಾಲೋ ಮಾಡುವುದರಿಂದ ಸಾಧಿಸಲು ಸಾಧ್ಯವಿಲ್ಲ” ಎಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಭಾರತವು 2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಬಹುದು ಎಂದು ಕೇಂದ್ರ ಸರ್ಕಾರವು ಅಂದಾಜಿಸಿದೆ. ಆದರೆ ಆ ಗುರಿ ತಲುಪಲು ಯುವಕರು ಮಿಷನ್‌ನಂತೆ ಕೆಲಸ ಮಾಡುವ ಅಗತ್ಯವಿದೆ ಎಂದು ಸ್ಪಷ್ಟಪಡಿಸುವ ಹೇಳಿಕೆಯನ್ನು ಅಮಿತಾಬ್ ಕಾಂತ್ ನೀಡಿದ್ದಾರೆ. ಈ ಗುರಿಯನ್ನು ತಲುಪಲು ಸರ್ಕಾರ ಯುವಕರ ಮೇಲೆ ಹೆಚ್ಚು ಒತ್ತಡ ಹೇರುವ, ಉದ್ಯೋಗ ಅವಧಿ ಹೆಚ್ಚಿಸುವಂತಹ ನೀತಿ ಜಾರಿ ಮಾಡುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? 70, 90 ಗಂಟೆ ಬಿಡಿ ವಾರಕ್ಕೆ 120 ಗಂಟೆ ಕೆಲಸ ಮಾಡಿ ಎಂದ ಎಲಾನ್‌ ಮಸ್ಕ್‌

ಇನ್ನು ಉದ್ಯೋಗ ಮತ್ತು ವೈಯಕ್ತಿಕ ಜೀವನದ ಸಮತೋಲನ ಬಗ್ಗೆ ಮಾತನಾಡಿದ ಅವರು, “ನಾನು ಪ್ರತಿದಿನ ಕೆಲಸ ಮಾಡುತ್ತೇನೆ, ವ್ಯಾಯಾಮ ಮಾಡುತ್ತೇನೆ. ಗೋಲ್ಫ್ ಆಟವಾಡುತ್ತೇನೆ. ಇವೆಲ್ಲವೂ ಮಾಡಿದರೂ ನಾನು ಅಧಿಕ ಕೆಲಸ ಮಾಡುತ್ತೇನೆ. ನಿಮಗಾಗಿ ದಿನಕ್ಕೆ ಒಂದುವರೆ ಗಂಟೆ ಇರಿಸಿ. ಅದನ್ನು ಬಿಟ್ಟು ಇನ್ನೂ 22.5 ಗಂಟೆ ಇರುತ್ತದೆ. ನಿಮ್ಮ ವೈಯಕ್ತಿಕ ಜೀವನ, ಉದ್ಯೋಗ ಜೀವನದ ಸಮತೋಲನ ಕಾಯ್ದುಕೊಳ್ಳಲು ಇಷ್ಟೊಂದು ಸಮಯ ಸಾಕಾಗುತ್ತದೆ. ಜನರು ಅತೀ ಅಧಿಕ ಕೆಲಸ ಮಾಡಬಾರದು ಎಂದು ಹೇಳುವುದನ್ನೇ ಫ್ಯಾಷನ್ ಮಾಡಿಕೊಳ್ಳಬೇಡಿ” ಎಂದರು.

ಈ ಹಿಂದೆ ಎಲ್‌&ಟಿ ಅಧ್ಯಕ್ಷ ಎಸ್‌ ಎನ್ ಸುಬ್ರಹ್ಮಣ್ಯ ಅವರು ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು, ಭಾನುವಾರವೂ ಕೆಲಸ ಮಾಡಬೇಕು ಎಂದು ಹೇಳುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಅದಕ್ಕೂ ಮುನ್ನ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ವಾರಕ್ಕೆ 70 ದಿನ ಕೆಲಸ ಮಾಡಬೇಕು ಎಂದು ಹೇಳಿ, ತನ್ನ ಹೇಳಿಕೆಯನ್ನು ಪದೇ ಪದೇ ಸಮರ್ಥಿಸಿಕೊಂಡು ವಿವಾದದಲ್ಲಿ ಸಿಲುಕಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...