ಹದಗೆಟ್ಟ ರಾಜತಾಂತ್ರಿಕ ಸಂಬಂಧ; ಕೆನಡಾದಲ್ಲಿರುವ ಭಾರತೀಯ ನಾಗರಿಕರಿಗೆ ಸಲಹಾ ಸೂಚಿ ಜಾರಿ

Date:

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದ್ದಿರುವ ಸಾಧ್ಯತೆ ಇದೆ ಎಂದು ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ ಆರೋಪಿಸಿದ ಬೆನ್ನಲ್ಲೇ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧ ಹದಗೆಟ್ಟಿದೆ. ಈ ನಡುವೆ ಭಾರತ ಸರ್ಕಾರ ಕೆನಡಾ ದೇಶದಲ್ಲಿರುವ ಭಾರತೀಯ ಪ್ರಜೆಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಸಲಹಾಸೂಚಿಯನ್ನು ಭಾರತೀಯ ವಿದೇಶಾಂಗ ಇಲಾಖೆ ಜಾರಿಗೊಳಿಸಿದೆ.

ಹೆಚ್ಚಾಗುತ್ತಿರುವ ಭಾರತ ವಿರೋಧಿ ಚಟುವಟಿಕೆಗಳು ಮತ್ತು ಕೆನಡಾದಲ್ಲಿ ರಾಜಕೀಯವಾಗಿ ಮನ್ನಣೆ ಪಡೆದ ದ್ವೇಷದ ಅಪರಾಧಗಳು ಹಿಂಸಾಚಾರಕ್ಕೆ ದಾರಿ ಮಾಡಿಕೊಡುವ ಕಾರಣ ಕೆನಡಾ ದೇಶದಲ್ಲಿರುವ ಎಲ್ಲ ಭಾರತದ ಪ್ರಜೆಗಳು, ವಿದ್ಯಾರ್ಥಿಗಳು ಹಾಗೂ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಂಡಿರುವವರು ಅತ್ಯಂತ ಜಾಗರೂಕರಾಗಿರುವಂತೆ ಒತ್ತಾಯಿಸಲಾಗಿದೆ.

ಇತ್ತೀಚೆಗೆ, ಬೆದರಿಕೆಗಳು ವಿಶೇಷವಾಗಿ ಭಾರತೀಯ ರಾಜತಾಂತ್ರಿಕರು ಮತ್ತು ಭಾರತ ವಿರೋಧಿ ಕಾರ್ಯಸೂಚಿಯನ್ನು ವಿರೋಧಿಸುವ ಭಾರತೀಯ ಸಮುದಾಯದ ವಿಭಾಗಗಳನ್ನು ಗುರಿಯಾಗಿಸಿಕೊಂಡಿವೆ. ಆದ್ದರಿಂದ ಕೆನಡಾದಲ್ಲಿ ಇಂತಹ ಘಟನೆಗಳನ್ನು ಕಂಡಿರುವ ಪ್ರದೇಶಗಳು ಮತ್ತು ಸಂಭಾವ್ಯ ಸ್ಥಳಗಳಿಗೆ ಪ್ರಯಾಣಿಸುವುದನ್ನು ತಪ್ಪಿಸಲು ಭಾರತೀಯ ಪ್ರಜೆಗಳಿಗೆ ಸಲಹೆ ನೀಡಲಾಗುತ್ತದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ | ದೇವರ ನಿಂದನೆ ಆರೋಪ: ದಲಿತ ವೃದ್ಧರ ತಲೆ ಮೇಲೆ ಚಪ್ಪಲಿ ಇಟ್ಟು ಕ್ಷಮೆ ಕೇಳುವಂತೆ ಅವಮಾನಿಸಿದ ಗ್ರಾಮಸ್ಥರು

ಕೆನಡಾದಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ನಮ್ಮ ರಾಯಭಾರಿ/ಕನ್ಸುಲೇಟ್ ಜನರಲ್ ಕೆನಡಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದನ್ನು ಮುಂದುವರಿಸುತ್ತಾರೆ. ಕೆನಡಾದಲ್ಲಿ ಕ್ಷೀಣಿಸುತ್ತಿರುವ ಭದ್ರತಾ ವಾತಾವರಣವನ್ನು ಗಮನದಲ್ಲಿಟ್ಟುಕೊಂಡು, ವಿಶೇಷವಾಗಿ ಭಾರತೀಯ ವಿದ್ಯಾರ್ಥಿಗಳು ತೀವ್ರ ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ.

ಭಾರತೀಯ ಪ್ರಜೆಗಳು ಮತ್ತು ಕೆನಡಾದಲ್ಲಿರುವ ಭಾರತದ ವಿದ್ಯಾರ್ಥಿಗಳು ತಮ್ಮ ವೆಬ್‌ಸೈಟ್‌ಗಳು ಅಥವಾ MADAD ಪೋರ್ಟಲ್ madad.gov.in ಮೂಲಕ ಒಟ್ಟಾವಾದಲ್ಲಿನ ಭಾರತದ ರಾಯಭಾರ ಕಚೇರಿ ಅಥವಾ ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಯಾವುದೇ ತುರ್ತು ಅಥವಾ ಅಹಿತಕರ ಘಟನೆಯ ಸಂದರ್ಭದಲ್ಲಿ ಕೆನಡಾದಲ್ಲಿರುವ ಭಾರತೀಯ ನಾಗರಿಕರೊಂದಿಗೆ ಉತ್ತಮ ಸಂಪರ್ಕ ಸಾಧಿಸಲು ಭಾರತದ ರಾಯಭಾರ ಕಚೇರಿ ಮತ್ತು ಕಾನ್ಸುಲೇಟ್ ಜನರಲ್ ಅನ್ನು ನೋಂದಣಿ ಸಕ್ರಿಯಗೊಳಿಸುತ್ತದೆ ಎಂದು ತಿಳಿಸಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರಾದ ಅರಿಂದಮ್ ಬಾಗ್ಚಿ ಅವರು ಸಲಹೆಯನ್ನು ಹಂಚಿಕೊಳ್ಳಲು ಟ್ವಿಟರ್‌ ಮೂಲಕ ಟ್ಯಾಗ್‌ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಅಲೆ | ಬಿಜೆಪಿಗೆಷ್ಟು ನಷ್ಟ – ಕಾಂಗ್ರೆಸ್‌ಗೆ ಎಷ್ಟು ಲಾಭ?

ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ....

ಪಪುವಾ ನ್ಯೂಗಿನಿಯಾ ಭೂಕುಸಿತ: 2,000ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ

ಇಂಡೋನೇಷ್ಯಾದ ಪಶ್ಚಿಮ ಭಾಗದಲ್ಲಿರುವ ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ 2,000ಕ್ಕೂ ಹೆಚ್ಚು ಜನರು...

ರಾಜ್‌ಕೋಟ್‌ ಗೇಮ್‌ ಝೋನ್‌ ಅಗ್ನಿ ಅವಘಡ: ಇಬ್ಬರು ಪೊಲೀಸರು ಸೇರಿ ಐವರು ಅಧಿಕಾರಿಗಳ ಅಮಾನತು

ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್‌ಕೋಟ್ ಗೇಮ್‌ ಝೋನ್‌...

ರೆಮಲ್ ಚಂಡಮಾರುತಕ್ಕೆ ಕೋಲ್ಕತ್ತಾದಲ್ಲಿ ಓರ್ವ ಬಲಿ, ಬಂಗಾಳದಲ್ಲಿ ಭಾರೀ ಹಾನಿ

ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರೀ ಹಾನಿ ಉಂಟು ಮಾಡಿದ್ದು, ಚಂಡಮಾರುತದಿಂದ...