ವಿಮಾನ ಹಾರಿಸಲು ಯೋಗ್ಯನಲ್ಲ, ಚಪ್ಪಲಿ ಹೊಲಿ: ಇಂಡಿಗೋದಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

Date:

“ನೀನು ವಿಮಾನ ಹಾರಿಸಲು ಯೋಗ್ಯನಲ್ಲ, ಚಪ್ಪಲಿ ಹೊಲಿ” ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಪೈಲಟ್‌ಗೆ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

- Advertisement -

ಈ ಸಂಬಂಧ ಪರಿಶಿಷ್ಟ ಜಾತಿಗೆ ಸೇರಿದ 35 ವರ್ಷದ ತರಬೇತಿ ಪಡೆಯುತ್ತಿರುವ ಪೈಲಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇಂಡಿಗೋ ಅಧಿಕಾರಿಗಳಾದ ತಪಸ್ ದೇ, ಮನೀಶ್ ಸಾಹ್ನಿ ಮತ್ತು ಕ್ಯಾಪ್ಟನ್ ರಾಹುಲ್ ಪಾಟೀಲ್ ವಿರುದ್ಧ ಎಸ್‌ಸಿ/ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ಜಾತಿ ನಿಂದನೆ ಪ್ರಕರಣ | ಬಿಜೆಪಿ ಶಾಸಕ ಮುನಿರತ್ನ ಜಾಮೀನು ಭವಿಷ್ಯ ನಾಳೆ ನಿರ್ಧಾರ

ದೂರುದಾರರು ಮೊದಲು ಬೆಂಗಳೂರಿನಲ್ಲಿ ಪೊಲೀಸರನ್ನು ಸಂಪರ್ಕಿಸಿದ್ದು, ಪೊಲೀಸರು ಝೀರೋ ಎಫ್‌ಐಆರ್(ಅಪರಾಧ ಎಲ್ಲಿ ನಡೆದರೂ ಯಾವುದೇ ಪೊಲೀಸ್ ಠಾಣೆಯಲ್ಲಿ ದಾಖಲಿಸಬಹುದಾದ ಎಫ್‌ಐಆರ್) ದಾಖಲಿಸಿದ್ದಾರೆ. ಈ ಎಫ್‌ಐಆರ್ ಅನ್ನು ಈಗ ಇಂಡಿಗೋ ಪ್ರಧಾನ ಕಚೇರಿ ಇರುವ ಗುರುಗ್ರಾಮಕ್ಕೆ ವರ್ಗಾಯಿಸಲಾಗಿದೆ.

ಈವರೆಗೂ ಈ ವಿಚಾರದ ಕುರಿತು ಇಂಡಿಗೋ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ವೆಬ್‌ಸೈಟ್‌ನಲ್ಲಿ, “ನಮ್ಮ ಉದ್ಯೋಗಿಗಳು, ಗ್ರಾಹಕರು ಯಾವುದೇ ಒಂದು ಲಿಂಗ, ಜನಾಂಗ, ಬಣ್ಣ, ಧರ್ಮ, ಜಾತಿ, ಮತ, ಜನಾಂಗೀಯತೆ, ಮೂಲ, ಭಾಷೆ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ, ಲೈಂಗಿಕ ದೃಷ್ಟಿಕೋನ, ವೈವಾಹಿಕ ಸ್ಥಿತಿ, ರಾಷ್ಟ್ರೀಯತೆ, ವಯಸ್ಸು, ಕುಟುಂಬದ ಸ್ಥಿತಿಗೆ ಸೀಮಿತವಾಗಿಲ್ಲ. ಎಲ್ಲರನ್ನೂ ನಮ್ಮ ಸಂಸ್ಥೆ ಒಳಗೊಂಡಿದೆ” ಎಂದು ಉಲ್ಲೇಖಿಸಲಾಗಿದೆ.

ಏಪ್ರಿಲ್ 28ರಂದು ಇಂಡಿಗೋದ ಗುರುಗ್ರಾಮ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಜಾತಿ ನಿಂದನೆ ಮಾಡಲಾಗಿದೆ ಎಂದು ದೂರಲಾಗಿದೆ. 30 ನಿಮಿಷಗಳ ಸಭೆಯಲ್ಲಿ, “ನೀವು ವಿಮಾನ ಹಾರಿಸಲು ಯೋಗ್ಯರಲ್ಲ, ಹಿಂತಿರುಗಿ ಚಪ್ಪಲಿಗಳನ್ನು ಹೊಲಿಯಿರಿ. ನೀವು ಇಲ್ಲಿ ಕಾವಲುಗಾರನಾಗಿ ಕೆಲಸ ಮಾಡಲೂ ಯೋಗ್ಯರಲ್ಲ” ಎಂದು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? 10 ಗಂಟೆ ಇಂಡಿಗೋ ವಿಮಾನ ವಿಳಂಬ: ಪೈಲಟ್ ಮೇಲೆ ಹಲ್ಲೆಗೈದ ಪ್ರಯಾಣಿಕ; ವಿಡಿಯೋ ವೈರಲ್

ರಾಜೀನಾಮೆ ನೀಡಲು ಒತ್ತಡ ಹೇರುವ ಉದ್ದೇಶದಿಂದ ಕಿರುಕುಳ ನೀಡಲಾಗಿದೆ. ತಾನು ಪರಿಶಿಷ್ಟ ಜಾತಿಗೆ ಸೇರಿದವನಾದ ಕಾರಣ ನನ್ನ ಜಾತಿ ಗುರುತನ್ನು ಅವಮಾನಿಸಿ ಅವಹೇಳನಕಾರಿ ಮಾತನಾಡಲಾಗಿದೆ ಎಂದು ದೂರದಾರ ಪೈಲಟ್ ಹೇಳಿದ್ದಾರೆ.

ಹಾಗೆಯೇ ಅನ್ಯಾಯವಾಗಿ ವೇತನ ಕಡಿತ ಮಾಡಲಾಗುತ್ತಿದೆ. ಬಲವಂತವಾಗಿ ಮರುತರಬೇತಿ ಮಾಡಿಸಲಾಗುತ್ತಿದೆ. ಅನಗತ್ಯವಾಗಿ ಎಚ್ಚರಿಕೆಯ ಪತ್ರಗಳನ್ನು ನೀಡಲಾಗುತ್ತಿದೆ ಎಂದೂ ದೂರುದಾರರು ತಿಳಿಸಿದ್ದಾರೆ. ಈ ವಿಚಾರವನ್ನು ಉನ್ನತ ಅಧಿಕಾರಿಗಳು ಮತ್ತು ಇಂಡಿಗೋದ ನೈತಿಕ ಸಮಿತಿಯೊಂದಿಗೆ ಪ್ರಸ್ತಾಪಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಿರುವುದಾಗಿ ದೂರುದಾರ ಪೈಲಟ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...