ನೆರೆಮನೆಯವರಿಂದ ಜೀವ ಬೆದರಿಕೆ; ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ವ್ಯಕ್ತಿ: ವಿಡಿಯೋ ವೈರಲ್

Date:

ತನ್ನ ನೆರೆಮನೆಯವರಿಂದ ಜೀವ ಬೆದರಿಕೆಯಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿ ಓಡಾಡುತ್ತಿರುವ ಘಟನೆ ಇಂದೋರ್‌ನ ಹೀರಾ ನಗರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದ್ದು, ಸದ್ಯ ಈ ವ್ಯಕ್ತಿಯ ವಿಡಿಯೋ ವೈರಲ್ ಆಗುತ್ತಿದೆ.

- Advertisement -

ಸತೀಶ್ ಚೌಹಾಣ್ ಎಂಬ ವ್ಯಕ್ತಿ ತನ್ನ ಹೆಲ್ಮೆಟ್‌ಗೆ ಕ್ಯಾಮೆರಾ ಅಳವಡಿಸಿಕೊಂಡಿದ್ದಾರೆ. ಆಸ್ತಿ ವಿವಾದದ ಕುರಿತು ನೆರೆಮನೆಯವರಿಂದ ಜೀವ ಬೆದರಿಕೆಯಿದೆ ಮತ್ತು ನಿರಂತರ ಕಿರುಕುಳವಿದೆ. ಆದ್ದರಿಂದ ತನ್ನನ್ನು ಮತ್ತು ತನ್ನ ಕುಟುಂಬವನ್ನು ರಕ್ಷಿಸಿಕೊಳ್ಳಲು ಈ ರೀತಿ ವ್ಯವಸ್ಥೆ ಮಾಡಿಕೊಂಡಿದ್ದೇನೆ ಎಂದು ಸತೀಶ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಇದನ್ನು ಓದಿದ್ದೀರಾ? ಶೌಚಾಲಯದಲ್ಲೇ ಕುಳಿತು ಹೈಕೋರ್ಟ್‌ ಕಲಾಪದಲ್ಲಿ ಭಾಗವಹಿಸಿದ ಯುವಕ: ವಿಡಿಯೋ ವೈರಲ್

ಸದ್ಯ ಸತೀಶ್ ಕ್ಯಾಮೆರಾ ಅಳವಡಿಸಿದ ಹೆಲ್ಮೆಟ್ ಧರಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಸತೀಶ್, “ನನ್ನ ನೆರೆಮನೆಯವರು ಆಸ್ತಿಯನ್ನು ದೋಚಲು ಪ್ರಯತ್ನಿಸುತ್ತಿದ್ದಾರೆ. ನನಗೆ ಮತ್ತು ನನ್ನ ಕುಟುಂಬಕ್ಕೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪರಿಸ್ಥಿತಿ ಹದಗೆಟ್ಟಿದೆ. ಅದಕ್ಕೆ ಯಾವುದೇ ಸಂದರ್ಭ ಎದುರಾದರೂ ಅದು ಯಾವಾಗಲೂ ರೆಕಾರ್ಡ್ ಆಗುವಂತೆ ನನ್ನ ಹೆಲ್ಮೆಟ್‌ನಲ್ಲಿ ಕ್ಯಾಮೆರಾ ಅಳವಡಿಸಬೇಕಾಯಿತು. ನಮಗೆ ಏನಾದರೂ ಸಂಭವಿಸಿದರೆ ದೃಶ್ಯಗಳು ಸಾಕ್ಷಿಯಾಗುತ್ತದೆ” ಎಂದು ಸತೀಶ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಇನ್ನು “ಬಲಿರಾಮ್ ಚೌಹಾಣ್ ಮತ್ತು ಮುನ್ನಾ ಚೌಹಾಣ್ ವಿರುದ್ಧ ಪೊಲೀಸರಿಗೆ ಹಲವು ಲಿಖಿತ ದೂರುಗಳನ್ನು ಸಲ್ಲಿಸಿದ್ದೇನೆ. ಆದರೆ ಇಲ್ಲಿಯವರೆಗೆ ಯಾವುದೇ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ” ಎಂದು ಸತೀಶ್ ಹೇಳಿಕೊಂಡಿದ್ದಾರೆ.

ಸದ್ಯ ನಮ್ಮ ಸುರಕ್ಷತೆ ಮಾಡಬೇಕಾದವರಿಂದ ಸಹಾಯ ದೊರೆಯದೆ ಇದ್ದಾಗ ನಾಗರಿಕರು ತಮ್ಮ ಸುರಕ್ಷತೆಗೆ ತಾವೇ ವ್ಯವಸ್ಥೆ ಮಾಡಿಕೊಳ್ಳುತ್ತಾರೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟಿಕೊಂಡಿದೆ.

ಇದನ್ನು ಓದಿದ್ದೀರಾ? ಮಂಗಳೂರು | ರಥೋತ್ಸವದ ವೇಳೆ ಮುರಿದು ಬಿದ್ದ ಬಪ್ಪನಾಡು ದೇವಸ್ಥಾನದ ರಥ ! ವಿಡಿಯೋ ವೈರಲ್

ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಈ ಹಿಂದೆ ಘರ್ಷಣೆ ನಡೆಸಿದ್ದರು. ಇದರಿಂದಾಗಿ ತೀವ್ರ ವಾಗ್ವಾದ ನಡೆದಿದೆ. ನಾವು ಮಧ್ಯಸ್ಥಿಕೆ ವಹಿಸಲು ಪ್ರಯತ್ನಿಸಿದೆವು. ಆದರೆ ಇದೀಗ ಕ್ಯಾಮೆರಾ ಇರುವ ಹೆಲ್ಮೆಟ್ ಧರಿಸಿಕೊಂಡಿದ್ದಾರೆ ಎಂಬ ವಿಡಿಯೋ ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಸತೀಶ್ ತನ್ನ ಮನೆಯ ಹೊರಗೆ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದು ಇದು ಇನ್ನಷ್ಟು ವಾಗ್ವಾದ, ಗಲಾಟೆಗೆ ಕಾರಣವಾಗಿದೆ. ಈ ಸಿಸಿಟಿವಿಯಲ್ಲಿ ನೆರೆಮನೆಯವರ ಸ್ನಾನಗೃಹದ ದೃಶ್ಯ ಸೆರೆಯಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...