ಅಮಾನವೀಯ ಕೃತ್ಯ | ಪತ್ನಿಯನ್ನು ಕಟ್ಟಿಹಾಕಿ, ಥಳಿಸಿ, ಮೂತ್ರ ಕುಡಿಸಿದ ವಿಕೃತ ಪತಿ

Date:

ಮಹಿಳೆಯೊಬ್ಬರನ್ನು ಆಕೆಯ ವಿಕೃತ ಪತಿ ಕೈಕಾಲುಗಳನ್ನು ಕಟ್ಟಿಹಾಕಿ, ತಲೆ ಬೋಳಿಸಿ, ಮುಖಕ್ಕೆ ಇಂಜಿನ್ ಆಯಿಲ್ ಮಸಿ ಬಳಿದು, ಕ್ರೂರವಾಗಿ ಹಲ್ಲೆ ನಡೆಸಿ, ಮಕ್ಕಳು ಭಯದಿಂದ ನೋಡುತ್ತಿರುವಾಗಲೇ ಬಲವಂತವಾಗಿ ಮೂತ್ರ ಕುಡಿಸಿರುವ ಆಘಾತಕಾರಿ ಘಟನೆ ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಪತಿಯನ್ನು ಜಿತೇಂದ್ರ ಘಾಸಿಯಾ ಎಂದು ಗುರುತಿಸಲಾಗಿದೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಸಂತ್ರಸ್ತ ಮಹಿಳೆಯನ್ನು ತಾರಾ ಎಂದು ಹೆಸರಿಲಾಗಿದೆ. ತಾರಾ ಮತ್ತು ಜಿತೇಂದ್ರ ಸುಮಾರು 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ನಾಲ್ಕು ಮಕ್ಕಳಿದ್ದಾರೆ. ಆರಂಭದಲ್ಲಿ ದಾಂಪತ್ಯ ಚೆನ್ನಾಗಿಯೇ ಇತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಇಬ್ಬರ ನಡುವೆಯೂ ಕಲಹಗಳು ಹೆಚ್ಚಾಗಿದ್ದವು. ಆರೋಪಿ ಜಿತೇಂದ್ರ ನಿರಂತರವಾಗಿ ತಾರಾ ಮೇಲೆ ದೌರ್ಜನ್ಯ ಎಸಗುತ್ತಿದ್ದನು. ಇತ್ತೀಚೆಗೆ, ಆತನನ್ನು ತೊರೆದು ತಾರಾ ತನ್ನ ಮಕ್ಕಳೊಂದಿಗೆ ಪ್ರತ್ಯೇಕವಾಗಿ ಬದುಕುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಆಕೆಯ ಎಲ್ಲಿದ್ದಾರೆ ಎಂಬುದನ್ನು ಪತ್ತೆ ಹಚ್ಚಿದ ಜಿತೇಂದ್ರ, ಜೂನ್ 14 ರಂದು ಆಕೆಯಿದ್ದ ಮನೆಗೆ ನುಗ್ಗಿ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ-ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಸಂತ್ರಸ್ತ ಮಹಿಳೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅವರ ದೂರಿನಲ್ಲಿ; “ನನ್ನನ್ನು ಹುಡುಕಿಕೊಂಡು ಬಂದ ಪತಿ, ಮನೆಯ ಹೊರಗೆ ನಿಂತು ಅವಾಚ್ಯವಾಗಿ ನಿಂದಿಸಲು ಆರಂಭಿಸಿದನು ಬಳಿಕ, ಮನೆಗೆ ನುಗ್ಗಿ, ಹಗ್ಗದಿಂದ ನನ್ನು ಕೈಕಾಲುಗಳನ್ನು ಕಟ್ಟಿಹಾಕಿ ಕ್ರೂರವಾಗಿ ಹಲ್ಲೆ ನಡೆಸಿದನು. ನನ್ನ ಕೂದಲನ್ನು ಕತ್ತರಿಸಿ, ತಲೆ ಬೋಳಿಸಿದ್ದಾನೆ, ನನ್ನ ಮುಖಕ್ಕೆ ಮಸಿ ಮತ್ತು ಇಂಜಿನ್ ಆಯಿಲ್ ಬಳಿದು, ಬಲವಂತವಾಗಿ ಮೂತ್ರ ಕುಡಿಸಿದ್ದಾನೆ. ನನ್ನನ್ನು ಜೀವಂತವಾಗಿ ಸುಟ್ಟುಹಾಕುವುದಾಗಿ ಬೆದರಿಕೆ ಹಾಕಿದ್ದಾನೆ” ಎಂದು ವಿವರಿಸಿದ್ದಾರೆ.

ಅಲ್ಲದೆ, “ತನ್ನ ಮಕ್ಕಳಿಗೆ ನನಗೆ ಕಪಾಳಕ್ಕೆ ಹೊಡೆಯುವಂತೆ ಬೆದರಿಕೆ ಹಾಕಿ, ಹೊಡೆಸಿದ್ದಾನೆ” ಎಂದು ಸಂತ್ರಸ್ತೆ ದೂರಿದ್ದಾರೆ.

“ನನ್ನ ಪತಿ ನಿರಂತರವಾಗಿ ನನ್ನ ನಡತೆಯ ಕುರಿತು ಶಂಕಿಸುತ್ತಿದ್ದನು. ಇದೇ ಶಂಕೆಯ ಮೇಲೆ ನಿರಂತರವಾಗಿ ಹಲ್ಲೆ ನಡೆಸುತ್ತಿದ್ದನು. ವರದಕ್ಷಿಣೆಗೂ ಬೇಡಿಕೆ ಇಟ್ಟಿದ್ದನು. ನನಗೆ ನ್ಯಾಯ ಬೇಕು. ಆತನಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಆಕೆ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ವಿಶ್ವದ ಪ್ರತಿ ಐವರು ನಾವಿಕರಲ್ಲೊಬ್ಬರು ಭಾರತೀಯರು: ‘ಸಾಗರ ಯೋಧ’ರ ಕಣ್ಣೀರಿನ ಕಥನ ಬಲ್ಲಿರಾ?

ಮಹಿಳೆಯ ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 85, 115(2), 296 ಹಾಗೂ 351(2) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಕೊರಿಯಾ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಸುರೇಶ ಚೌಬೆ ಮಾತನಾಡಿ, “ಮಹಿಳೆ ಮೊದಲು ಪೊಲೀಸರನ್ನು ಸಂಪರ್ಕಿಸಿದಾಗ, ಆಕೆ ಪ್ರಮುಖವಾಗಿ ತನ್ನ ಪತಿ ಮದ್ಯ ಸೇವಿಸಿ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡುತ್ತಿರುವ ಬಗ್ಗೆ ದೂರು ನೀಡಿದ್ದರು. ಆದರೆ, ವಿಡಿಯೋ ಬೆಳಕಿಗೆ ಬಂದ ನಂತರ, ಆತ ಇನ್ನೂ ಭೀಕರ ಕ್ರೌರ್ಯ ಎಸಗಿರುವುದು ಕಂಡುಬಂದಿದೆ. ಈಗ, ಹೆಚ್ಚುವರಿ ಕಾನೂನು ಸೆಕ್ಷನ್‌ಗಳನ್ನು ಸೇರಿಸಲಾಗುತ್ತಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ರಿಮಾಂಡ್‌ಗೆ ಒಪ್ಪಿಸಲಾಗುವುದು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...