ತಮಿಳುನಾಡು | ಪ್ರಧಾನಿ ಮೋದಿ ರೋಡ್‌ ಶೋ ವೇಳೆ ಶಾಲಾ ಮಕ್ಕಳನ್ನು ಬಳಸಿಕೊಂಡ ಬಿಜೆಪಿ: ತನಿಖೆಗೆ ಆದೇಶ

Date:

ಪ್ರಧಾನಿ ನರೇಂದ್ರ ಮೋದಿಯವರು ಮಾ.18ರಂದು ತಮಿಳುನಾಡಿನ ಪ್ರವಾಸದ ವೇಳೆ ಕೊಯಂಬತ್ತೂರಿನಲ್ಲಿ ಆಯೋಜಿಸಿದ್ದ ರೋಡ್ ಶೋ ವೇಳೆ ಶಾಲಾ ಮಕ್ಕಳನ್ನು ಬಳಸಿಕೊಂಡಿರುವುದು ಈಗ ಸದ್ಯ ವಿವಾದಕ್ಕೆ ಕಾರಣವಾಗಿದೆ. ಇದು ಸುದ್ದಿಯಾಗುತ್ತಿದ್ದಂತೆಯೇ ಜಿಲ್ಲಾಡಳಿತವು ತನಿಖೆಗೆ ಆದೇಶಿಸಿದೆ.

ಈ ಬಗ್ಗೆ ವರದಿ ಮಾಡಿದ್ದ ದಿ ಹಿಂದೂ, ಚುನಾವಣಾ ಪ್ರಚಾರದಲ್ಲಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಬಾರದು ಎಂಬ ನಿಷೇಧವಿದೆ. ಇದರ ಹೊರತಾಗಿಯೂ ಸುಮಾರು 50 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳನ್ನು ಕೊಯಂಬತ್ತೂರಿನಲ್ಲಿ ಸೋಮವಾರ ನಡೆದ ಪ್ರಧಾನಿ ಮೋದಿಯವರ ರೋಡ್‌ಶೋನಲ್ಲಿ ಬಳಸಿಕೊಳ್ಳಲಾಗಿತ್ತು. ಶಾಲಾ ಮಕ್ಕಳು ತಮ್ಮ ಶಿಕ್ಷಕರೊಂದಿಗೆ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಹಾಜರಾಗುವಂತೆ ಶಾಲೆಯಿಂದ ನಿರ್ದೇಶನ ನೀಡಲಾಗಿತ್ತು” ಎಂದು ತಿಳಿಸಿದೆ.

ಈ ವರದಿ ಪ್ರಕಟಗೊಂಡ ಬೆನ್ನಲ್ಲೇ ಸೋಷಿಯಲ್ ಮೀಡಿಯಾದ ಮೂಲಕ ಮಾಹಿತಿ ನೀಡಿರುವ ಕೊಯಂಬತ್ತೂರು ಜಿಲ್ಲಾಧಿಕಾರಿ ಕ್ರಾಂತಿ ಕುಮಾರ್ ಪಟಿ, “ಈ ಬಗ್ಗೆ ನಾವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸಲು ಆದೇಶಿಸಿದ್ದೇವೆ. ಎಆರ್‌ಎ ಅವರು ಮುಖ್ಯ ಶಿಕ್ಷಣಾಧಿಕಾರಿ ಮತ್ತು ಕಾರ್ಮಿಕ ಇಲಾಖೆ ಜಂಟಿ ಆಯುಕ್ತರಿಂದ ವರದಿ ಕೇಳಿದ್ದಾರೆ. ವಿಚಾರಣೆಯ ಫಲಿತಾಂಶಗಳ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಲ್ಲದೇ, ಈ ಬೆಳವಣಿಗೆಯ ಬಗ್ಗೆ ಸಹಾಯಕ ಚುನಾವಣಾಧಿಕಾರಿ ಪಿ ಸುರೇಶ್‌ ಪ್ರತಿಕ್ರಿಯಿಸಿದ್ದು, “ಈ ರೀತಿಯ ಪದ್ಧತಿಗಳು ನೀತಿ ಸಂಹಿತೆಯ ಉಲ್ಲಂಘನೆಯಾಗಿವೆ. ತನಿಖೆ ಪೂರ್ಣಗೊಂಡ ನಂತರ ವರದಿಗಳನ್ನು ಮುಂದಿನ ಕ್ರಮಕ್ಕಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದಿದ್ದಾರೆ.

ಪ್ರಧಾನಿಯ ರೋಡ್‌ ಶೋ ಸೋಮವಾರ ನಡೆದಾಗ ಹಲವಾರು ಶಾಲಾ ಮಕ್ಕಳು ಅದನ್ನು ವೀಕ್ಷಿಸಲು ಆಗಮಿಸಿದ್ದರು.ಇವರ ಪೈಕಿ 14 ವರ್ಷಕ್ಕಿಂತ ಕಿರಿಯ ಮಕ್ಕಳು ಹನುಮಂತನ ವೇಷ ಧರಿಸಿರುವುದು ಹಾಗೂ ಪಕ್ಷದ ಚಿಹ್ನೆ ಇರುವ ಕೇಸರಿ ಬಣ್ಣದ ಬಟ್ಟೆಗಳನ್ನು ಧರಿಸಿ ರೋಡ್‌ ಶೋ ಹಾದು ಹೋಗುವ ವಿವಿಧೆಡೆ ನಿಂತಿರುವುದು ಕಾಣಿಸಿದೆ.

ಇದನ್ನು ಓದಿದ್ದೀರಾ? ಉ. ಪ್ರದೇಶ | ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು!

ಅಲ್ಲದೇ, ಬಿಜೆಪಿ ಕಾರ್ಯಕರ್ತರು ಸಿದ್ಧಪಡಿಸಿದ್ದ ವೇದಿಕೆಗಳಲ್ಲಿ ಪ್ರದರ್ಶನ ನೀಡುತ್ತಿರುವ ವಿಡಿಯೋಗಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಬಾರದು ಎಂಬ ಸ್ಪಷ್ಟ ನಿರ್ದೇಶನವನ್ನು ಚುನಾವಣಾ ಆಯೋಗ ಹೊರಡಿಸಿದೆ. ಮಕ್ಕಳನ್ನು ಬಳಸಿಕೊಂಡರೆ ಅದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆಲಂಗಾಣ | 31 ವರ್ಷದ ವ್ಯಕ್ತಿಯ ಬರ್ಬರ ಹತ್ಯೆ

ಹೈದರಾಬಾದ್‌ನಲ್ಲಿ 31 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ....

ಬ್ಯಾಂಕ್‌ಗಳಿಗೆ 20 ಸಾವಿರ ಕೋಟಿ ರೂ. ವಂಚನೆ: ಏಮ್‌ಟೆಕ್ ಗ್ರೂಪ್ ಕಚೇರಿಗಳ ಮೇಲೆ ಇ.ಡಿ ದಾಳಿ

.ಡಿಸಾಲ ಪಡೆದು ಬ್ಯಾಂಕ್‌ಗಳಿಗೆ ಇಪ್ಪತ್ತು ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು...

ಭಾರತದ ಭವಿಷ್ಯಕ್ಕೆ ಮೋದಿ ಸರ್ಕಾರದ ‘ಕೊಳ್ಳಿ’

ಭಾರತದ ಭವಿಷ್ಯದ ವೈದ್ಯರ ಆಯ್ಕೆಯನ್ನು ನಿಯಂತ್ರಿಸುವ ಮೂಲಕ ಮೋದಿ ಆಡಳಿತವು ತನ್ನ...

ನೀಟ್ ಅಕ್ರಮ: ಹೈಕೋರ್ಟ್ ವಿಚಾರಣೆಗಳಿಗೆ ಸುಪ್ರೀಂ ತಡೆ, ಕೌನ್ಸೆಲಿಂಗ್ ಪ್ರಕ್ರಿಯೆ ಮುಂದುವರಿಕೆ

ನೀಟ್ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ಗಳಿಂದ ಸುಪ್ರೀಂ ಕೋರ್ಟ್‌ಗೆ ವಿಚಾರಣೆಗಳನ್ನು ವರ್ಗಾಯಿಸಬೇಕೆಂದು...