ಗುಜರಾತ್: ಕಳೆದ 3 ವರ್ಷಗಳಲ್ಲಿ 5 ವರ್ಷದೊಳಗಿನ 40 ಸಾವಿರಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಟಿಕತೆ

Date:

Advertisements

ಗುಜರಾತ್‌ ಮಾದರಿಯ ಅಸಲಿಯತ್ತು ದಿನದಿಂದ ದಿನಕ್ಕೆ ಬಯಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯ ತವರು ರಾಜ್ಯದಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯಿಂದ ಮಕ್ಕಳ ಸಾವಿನ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ.

ಪೌಷ್ಟಿಕಾಂಶ ಪುನರ್ವಸತಿ ಕೇಂದ್ರಗಳಿಗೆ ದಾಖಲಾದ ಮಕ್ಕಳ ಸಂಖ್ಯೆಯಲ್ಲಿ ಗುಜರಾತ್ ಈಗ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಮತ್ತು ಕಳೆದ ಮೂರು ವರ್ಷಗಳಲ್ಲಿ ಈ ಸಂಖ್ಯೆ ದ್ವಿಗುಣಗೊಂಡಿದೆ. ಇದು ಅತ್ಯಂತ ಕಳವಳಕಾರಿಯಾದ ಸಂಗತಿಯು ಹೌದು.

ಗುಜರಾತ್‌ ರಾಜ್ಯದಲ್ಲಿ ಐದು ವರ್ಷದೊಳಗಿನ ಸಾವಿರಾರು ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಈ ಪೈಕಿ 41,632 ಮಂದಿ ಕಳೆದ ಮೂರು ವರ್ಷಗಳಲ್ಲಿ ಪೌಷ್ಟಿಕಾಂಶ ಪುನರ್ವಸತಿ ಕೇಂದ್ರಕ್ಕೆ(ಎನ್‌ಆರ್‌ಸಿ) ದಾಖಲಾಗಿದ್ದಾರೆ ಎಂದು ಗುಜರಾತ್ ಸರ್ಕಾರ ಲೋಕಸಭೆಗೆ ನೀಡಿದ ಅಂಕಿಅಂಶಗಳಲ್ಲಿ ತಿಳಿಸಿವೆ.

Advertisements

ಶುಕ್ರವಾರ ಲೋಕಸಭೆಯಲ್ಲಿ ಸಂಸದರಾದ ಧನುಷ್ ಎಂ ಕುಮಾರ್ ಮತ್ತು ಸೆಲ್ವಂ ಜಿ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವಾಲಯ, 29 ರಾಜ್ಯಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳ ಪೌಷ್ಟಿಕಾಂಶ ಪುನರ್ವಸತಿ ಕೇಂದ್ರ (ಎನ್‌ಆರ್‌ಸಿ)ಗಳಲ್ಲಿ ದಾಖಲಾಗಿರುವ ತೀವ್ರವಾದ ಅಪೌಷ್ಟಿಕತೆಯಿಂದ ಬಳಲುತ್ತಿರುವ ಐದು ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳ ಸಂಖ್ಯೆ 1.04 ಲಕ್ಷ ಇದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಟ್ಟು ಅಂಗವೈಕಲ್ಯವಲ್ಲ; ಸ್ಮೃತಿ ಇರಾನಿ ಹೇಳಿಕೆ ಯಾರನ್ನು ಮೆಚ್ಚಿಸಲು?

ಗುಜರಾತ್‌ನಲ್ಲಿ ‘ತೀವ್ರ ತೀವ್ರ ಅಪೌಷ್ಟಿಕತೆ’ಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ 2020-21ರಲ್ಲಿ 9,606, 2021-22ರಲ್ಲಿ 13,048 ಮತ್ತು 2022-23ರಲ್ಲಿ 18,978, 2021-22ರಲ್ಲಿ ಅಂತಹ ಪ್ರಕರಣಗಳ ಸಂಖ್ಯೆ 1.32 ಲಕ್ಷ, 2022-23ರಲ್ಲಿ 1.89 ಲಕ್ಷ ಮತ್ತು 2023-24ರಲ್ಲಿ 56,000 (ಜೂನ್ 2023 ರವರೆಗೆ) ದಾಖಲಾಗಿದೆ.

ಈ ವರ್ಷ ಜೂನ್ 2023 ರವರೆಗೆ 5,694 ಮಕ್ಕಳನ್ನು ಪೌಷ್ಟಿಕಾಂಶ ಪುನರ್ವಸತಿ ಕೇಂದ್ರಗಳಿಗೆ ದಾಖಲಿಸಲಾಗಿದೆ. ಇದು ಗುಜರಾತ್‌ನಲ್ಲಿ ಅಪೌಷ್ಟಿಕತೆ ಪ್ರಮಾಣ ತೀರ ಹದಗೆಡುತ್ತಿರುವ ಪ್ರಮಾಣವನ್ನು ಸೂಚಿಸುತ್ತದೆ.

ಗುಜರಾತ್ ಕಾಂಗ್ರೆಸ್ ವಕ್ತಾರ ಹಿರೇನ್ ಬ್ಯಾಂಕರ್, “ಗುಜರಾತ್‌ನಲ್ಲಿ ಪ್ರತಿ ವರ್ಷ ಸರಾಸರಿ 12 ಲಕ್ಷ ಮಕ್ಕಳು ಜನಿಸುತ್ತಾರೆ. ಅದರಲ್ಲಿ 30,000 ಮಕ್ಕಳು ಮೃತಪಡುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ, ಸರ್ಕಾರದ ಅಂಕಿಅಂಶಗಳ ಪ್ರಕಾರ, 7,15,515 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಐದು ವರ್ಷದೊಳಗಿನ ಸಾವಿರಾರು ಮಕ್ಕಳನ್ನು ತಾಯಿಯ ಮಡಿಲಲ್ಲಿ ಬೆಳೆಸುವ ಬದಲು ಪೌಷ್ಟಿಕಾಂಶ ಪುನರ್ವಸತಿ ಕೇಂದ್ರಗಳಿಗೆ ಸೇರಿಸಬೇಕಾಗಿದೆ. ಇದು ಗುಜರಾತ್‌ಗೆ ಕಳವಳಕಾರಿ ವಿಷಯವಾಗಿದೆ” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಮಾಹಿತಿಯ ಪ್ರಕಾರ, ಮಕ್ಕಳ ಬೆಳವಣಿಗೆ ಕುಂಠಿತ ವಿಷಯದಲ್ಲಿ ಗುಜರಾತ್ ನಾಲ್ಕನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಶೇ 39 ರಷ್ಟು ಮಕ್ಕಳು ತಮ್ಮ ವಯಸ್ಸಿಗೆ ತಕ್ಕಷ್ಟು ತಕ್ಕ ತೂಕವನ್ನು ಹೊಂದಿರುವುದಿಲ್ಲ.

ಇದಲ್ಲದೆ, ಗುಜರಾತ್ ರಾಜ್ಯ ಕೃಶ ಮತ್ತು ಕಡಿಮೆ ತೂಕದ ಮಕ್ಕಳ ವಿಭಾಗದಲ್ಲಿ ಶೇ. 25.1 ಮತ್ತು ಶೇ. 39.7 ಸರಾಸರಿಯೊಂದಿಗೆ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ಆರೋಗ್ಯ ಮಾಪನಗಳ ವಿಷಯದಲ್ಲಿ ರಾಜ್ಯದ ಕಳಪೆ ಕಾರ್ಯಕ್ಷಮತೆಯನ್ನು ಪ್ರತಿಬಿಂಬಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X