‘ಮಿರ್ಜಾಪುರ’ ವೆಬ್​ ಸೀರೀಸ್​ ನೋಡಿ ಗೆಳತಿಯ ಕತ್ತು ಸೀಳಿ ಕೊಂದ ವಿದ್ಯಾರ್ಥಿ!

Date:

‘ಮಿರ್ಜಾಪುರ’ ವೆಬ್​ ಸೀರೀಸ್​ ನೋಡಿ ವಿದ್ಯಾರ್ಥಿಯೋರ್ವ ತನ್ನ ಗೆಳತಿಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಈ ಸಂಬಂಧ ವಿದ್ಯಾರ್ಥಿ ಮತ್ತು ಆತನಿಗೆ ಸಹಾಯ ಮಾಡಿದ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಆರೋಪಿಗಳನ್ನು ಮೋಹಿತ್ ಸೈನಿ ಮತ್ತು ಓಂಕಾರ್ ಶರ್ಮಾ ಎಂದು ಗುರುತಿಸಲಾಗಿದೆ. ಡಿಸೆಂಬರ್ 25ರಂದು ಅಂಜಲಿ ಎಂಬ ಯುವತಿಯ ಶವ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು. ಅಂದಿನಿಂದ ಇಬ್ಬರು ಕೂಡಾ ತಲೆಮರೆಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ಬೆಂಗಳೂರು | ಕೂಲಿ ಕಾರ್ಮಿಕನ ಕತ್ತು ಸೀಳಿ ಬರ್ಬರ ಕೊಲೆ

ಬಿಕಾಂ ಮೊದಲನೇ ವರ್ಷದ ವಿದ್ಯಾರ್ಥಿ ಹಾಗೂ ಫುಟ್ಬಾಲ್ ಆಟಗಾರರಾಗಿರುವ ಮೋಹಿತ್ ಕಳೆದ ಎರಡು ವರ್ಷಗಳಿಂದ ಅಂಜಲಿ ಜೊತೆ ಲಿವ್‌ಇನ್ ಸಂಬಂಧ ಹೊಂದಿದ್ದರು. ಆದರೆ ಅಂಜಲಿಗೆ ಬೇರೆ ಸಂಬಂಧವು ಇದೆ ಎಂದುಕೊಂಡ ಮೋಹಿತ್ ಆಕೆಯನ್ನು ಕೊಲ್ಲಬೇಕು ಎಂದು ನಿರ್ಧರಿಸಿದ ಎಂದು ವರದಿಯಾಗಿದೆ.

“ಮೋಹಿತ್ ತನ್ನ ಗೆಳತಿಯನ್ನು ಕೊಂದಿದ್ದಾನೆ. ಆಕೆ ಬೇರೊಬ್ಬನೊಂದಿಗೆ ವಿವಾಹವಾಗಿದ್ದಾಳೆ ಎಂದು ತಿಳಿದ ಬಳಿಕ ಕೊಲೆ ಮಾಡಿದ್ದಾನೆ. ಶವವನ್ನು ಅರಣ್ಯ ಪ್ರದೇಶದಲ್ಲಿ ಎಸೆದು ಮತ್ತು ಅಪರಾಧಕ್ಕೆ ಸಹಾಯ ಮಾಡಿದ ತನ್ನ ಸ್ನೇಹಿತನೊಂದಿಗೆ ಪರಾರಿಯಾಗಿದ್ದನು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹೆಣ್ಣು ಮಗು ಬೇಡವೆಂದು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ತಾಯಿ

ಈ ಬಗ್ಗೆ ಮಾಹಿತಿ ಹಂಚಿಕೊಂಡ ಗ್ರಾಮಾಂತರ ಎಸ್‌ಪಿ ಕುನ್ವರ್ ಆಕಾಶ್ ಸಿಂಗ್, ಆರೋಪಿಯು ಪ್ರಸಿದ್ಧ ವೆಬ್ ಸೀರೀಸ್ ಮಿರ್ಜಾಪುರವನ್ನು ವೀಕ್ಷಿಸಿದ ನಂತರ ಕೊಲೆ ಮಾಡಿದ್ದಾನೆ. ತನ್ನ ಗೆಳತಿಯ ಕತ್ತು ಸೀಳಿದ್ದಾನೆ. ಅಂಜಲಿ ಇನ್ನೂ ತನ್ನ ಪತಿಯೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂದು ತಿಳಿದುಬಂದ ಬಳಿಕ ಈ ಕೃತ್ಯ ಎಸಗಿದ್ದಾನೆ” ಎಂದು ಮಾಹಿತಿ ನೀಡಿದ್ದಾರೆ.

ಮಿರ್ಜಾಪುರ ವೆಬ್ ಸೀರೀಸ್ ನೋಡಿದ ಬಳಿಕ ಅಂಜಲಿಯ ಕತ್ತು ಸೀಳಿ ಕೊಲ್ಲುವ ನಿರ್ಧಾರ ಮಾಡಿರುವುದಾಗಿ ಮೋಹಿತ್ ಪೊಲೀಸರಿಗೆ ತಿಳಿಸಿದ್ದಾನೆ. ಸದ್ಯ ಇಬ್ಬರೂ ಆರೋಪಿಗಳು ಜೈಲಿನಲ್ಲಿದ್ದಾರೆ. ಈ ಬಗ್ಗೆ ಅಧಿಕ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...

ಮಣಿಪುರ ಹಿಂಸಾಚಾರ | 12 ಗಂಟೆಗಳಲ್ಲಿ 9 ಸಾವು; ಶಾಂತಿ ಕಾಪಾಡಲು ಸಿಎಂ ಮನವಿ

ಈಶಾನ್ಯ ರಾಜ್ಯ ಮಣಿಪುರದ ಮಲೆನಾಡು ಭಾಗಗಳಲ್ಲಿ ಕಳೆದ ಕೆಲ ಗಂಟೆಗಳಲ್ಲಿ ಮರುಕಳಿಸಿದ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಲಾಗಿತ್ತು: ಧೃವ್ ರಾಠಿ ಆರೋಪ

ಸಿಜೆಪಿ ಪ್ರತಿಭಟನೆಗೂ ಮುನ್ನ ಶನಿವಾರ ಮುಂಜಾನೆ ಖ್ಯಾತ ಯೂಟ್ಯೂಬರ್‌ ಧೃವ್ ರಾಠಿ...