ಮಧ್ಯಂತರ ತಡೆಯಾಜ್ಞೆಗೆ ವಿರೋಧ: ಸುಪ್ರೀಂನಲ್ಲಿ ವಕ್ಫ್ ಕಾಯ್ದೆ ಸಮರ್ಥಿಸಿಕೊಂಡ ಕೇಂದ್ರ

Date:

ವಕ್ಫ್‌ ತಿದ್ದುಪಡಿ ಕಾನೂನುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ವಕ್ಫ್‌ ಕಾನೂನುಗಳ ಅನುಷ್ಠಾನದ ಮೇಲೆ ಯಾವುದೇ ತಾತ್ಕಾಲಿಕ ಅಥವಾ ಭಾಗಶಃ ತಡೆಯನ್ನು ವಿರೋಧಿಸುವುದಾಗಿ ತಿಳಿಸಿದೆ.

- Advertisement -

ಇಂದು ಮಧ್ಯಾಹ್ನ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡಿದ ಅರ್ಜಿಯಲ್ಲಿ, ಸರ್ಕಾರದ ಇಂತಹ ಪ್ರಕರಣಗಳಲ್ಲಿ ಕಾನೂನಿನ ಸ್ಥಿರವಾದ ನಿಲುವು ಏನೆಂದರೆ, ನ್ಯಾಯಾಲಯಗಳಿಗೆ ವಿಧಿವಿಧಾನದ ನಿಬಂಧನೆಗಳನ್ನು, ನೇರವಾಗಿ ಅಥವಾ ಪರೋಕ್ಷವಾಗಿ ತಡೆಯಲು ಅಧಿಕಾರವಿಲ್ಲ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಸಂಸತ್ತಿನಿಂದ ರಚಿತವಾದ ಕಾನೂನುಗಳಿಗೆ ಸಾಂವಿಧಾನಿಕತೆಯ ಸಿದ್ಧಾಂತ ಅನ್ವಯಿಸುತ್ತದೆ ಮತ್ತು ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯು ಅಧಿಕಾರದ ಸಮತೋಲನದ ತತ್ವಕ್ಕೆ ವಿರುದ್ಧವಾಗಿದೆ” ಎಂದು ನ್ಯಾಯಾಲಯಕ್ಕೆ ಕೇಂದ್ರ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾಷಾ ವೈಷಮ್ಯ ಬಿತ್ತಿದ ಭಂಡರು, ಬಿತ್ತರಿಸಿದ ಬುದ್ಧಿಗೇಡಿಗಳು

ಸುಪ್ರೀಂ ಕೋರ್ಟ್ ವಕ್ಫ್‌ ಹೊಸ ಕಾನೂನುಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ. ಇದರಲ್ಲಿ ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಂ ಅಲ್ಲದ ಸದಸ್ಯರು ಇರಬೇಕು ಮತ್ತು ಕನಿಷ್ಠ ಐದು ವರ್ಷಗಳಿಂದ ಮುಸ್ಲಿಂ ಧರ್ಮವನ್ನು ಆಚರಿಸುವ ಮುಸ್ಲಿಮರಿಂದ ಮಾತ್ರ ದೇಣಿಗೆ ನೀಡಬಹುದು ಎಂಬ ನಿಯಮಗಳು ಸೇರಿವೆ.

ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳಲ್ಲಿ ಈ ಕಾನೂನುಗಳು ಹಲವು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಎಂದು ವಾದಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...