“ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಪರಿಚಯಿಸಲಾಗುವುದು” ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದಾರೆ.
ಬಜೆಟ್ ಭಾಷಣದ ವೇಳೆ ಆದಾಯ ತೆರಿಗೆಯ ಬಗ್ಗೆ ಉಲ್ಲೇಖಿಸಿದ ಅವರು, “ಹೊಸ ಆದಾಯ ತೆರಿಗೆ ಮಸೂದೆಯನ್ನು ಮುಂದಿನ ವಾರ ಮಂಡನೆ ಮಾಡಲಾಗುತ್ತದೆ. ಈ ಮಸೂದೆ ಕೆವೈಸಿ ನಿಯಮಗಳ ಸರಳೀಕರಣ ಮಾಡುತ್ತದೆ” ಎಂದು ಭರವಸೆ ನೀಡಿದ್ದಾರೆ.
#UnionBudget2025 | "I propose to introduce the New Income Tax Bill next week," says FM Nirmala Sitharaman in Parliament pic.twitter.com/yfHIjzyMxu
— ANI (@ANI) February 1, 2025
“ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ರಾಜ್ಯಗಳಿಗೆ ಮುಂದಿನ 15 ವರ್ಷಕ್ಕೆ 1.5 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಲಾಗುವುದು. ಆಟಿಕೆಗಳಿಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಯನ್ನು ನಿರ್ಮಿಸುವ ಯೋಜನೆಯನ್ನು ಜಾರಿಗೆ ತರುತ್ತೇವೆ. ಕ್ಲಸ್ಟರ್‌ಗಳು, ಕೌಶಲ್ಯಗಳು ಮತ್ತು ಉತ್ಪಾದನಾ ಪರಿಸರ ವ್ಯವಸ್ಥೆಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತೇವೆ. ಇದು ‘ಮೇಡ್ ಇನ್ ಇಂಡಿಯಾ’ ಬ್ರ್ಯಾಂಡ್ ಅನ್ನು ಪ್ರತಿನಿಧಿಸುವ ಉತ್ತಮ ಗುಣಮಟ್ಟದ, ವಿಶಿಷ್ಟ, ನವೀನ ಮತ್ತು ಸುಸ್ಥಿರ ಆಟಿಕೆಗಳನ್ನು ರಚಿಸಲು ಸಹಾಯ ಮಾಡುತ್ತದೆ” ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
“ಉಡಾನ್ ಯೋಜನೆಗೆ ಯಶಸ್ವಿಯಾದ ಹಿನ್ನೆಲೆಯಲ್ಲಿ 120 ಸ್ಥಳಗಳಿಗೆ ಹೆಚ್ಚುವರಿ ಸಂಪರ್ಕ ಕಲ್ಪಿಸಲಾಗುವುದು. ಮುಂದಿನ ಹತ್ತು ವರ್ಷದಲ್ಲಿ ನಾಲ್ಕು ಕೋಟಿ ಜನರಿಗೆ ಇದು ಅನುಕೂಲವಾಗಲಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ. ಬಿಹಾರದಲ್ಲಿ ಗ್ರೀನ್ ಫಿಲ್ಡ್ ವಿಮಾನ ನಿಲ್ದಾಣ ಆರಂಭ ಮಾಡುತ್ತೇವೆ” ಎಂದು ಕೇಂದ್ರ ಹಣಕಾಸು ಸಚಿವೆ ತಿಳಿಸಿದ್ದಾರೆ.
ಬಜೆಟ್‌ನಲ್ಲಿ ಬಿಹಾರಕ್ಕೆ ಪ್ರಾಶಸ್ತ್ಯ ನೀಡಿದ ಮೋದಿ ಸರ್ಕಾರ
ಐಐಟಿ ಪಾಟ್ನಾ ಸೇರಿದಂತೆ ಐದು ಐಐಟಿಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೋದಿ ಸರ್ಕಾರ ಘೋಷಿಸಿದೆ. ಆ ಮೂಲಕ ಎನ್‌ಡಿಎ ಮೈತ್ರಿ ಪಕ್ಷಗಳಿರುವ ರಾಜ್ಯಕ್ಕೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ.
