ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಪರಿಚಯ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Date:

“ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಪರಿಚಯಿಸಲಾಗುವುದು” ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದಾರೆ.

- Advertisement -

ಬಜೆಟ್ ಭಾಷಣದ ವೇಳೆ ಆದಾಯ ತೆರಿಗೆಯ ಬಗ್ಗೆ ಉಲ್ಲೇಖಿಸಿದ ಅವರು, “ಹೊಸ ಆದಾಯ ತೆರಿಗೆ ಮಸೂದೆಯನ್ನು ಮುಂದಿನ ವಾರ ಮಂಡನೆ ಮಾಡಲಾಗುತ್ತದೆ. ಈ ಮಸೂದೆ ಕೆವೈಸಿ ನಿಯಮಗಳ ಸರಳೀಕರಣ ಮಾಡುತ್ತದೆ” ಎಂದು ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ರಾಜ್ಯಗಳಿಗೆ ಮುಂದಿನ 15 ವರ್ಷಕ್ಕೆ 1.5 ಲಕ್ಷ ಕೋಟಿ ರೂ. ಬಡ್ಡಿ ರಹಿತ ಸಾಲ ನೀಡಲಾಗುವುದು. ಆಟಿಕೆಗಳಿಗಾಗಿ ರಾಷ್ಟ್ರೀಯ ಕ್ರಿಯಾ ಯೋಜನೆಯನ್ನು ನಿರ್ಮಿಸುವ ಯೋಜನೆಯನ್ನು ಜಾರಿಗೆ ತರುತ್ತೇವೆ. ಕ್ಲಸ್ಟರ್‌ಗಳು, ಕೌಶಲ್ಯಗಳು ಮತ್ತು ಉತ್ಪಾದನಾ ಪರಿಸರ ವ್ಯವಸ್ಥೆಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತೇವೆ. ಇದು ‘ಮೇಡ್ ಇನ್ ಇಂಡಿಯಾ’ ಬ್ರ್ಯಾಂಡ್ ಅನ್ನು ಪ್ರತಿನಿಧಿಸುವ ಉತ್ತಮ ಗುಣಮಟ್ಟದ, ವಿಶಿಷ್ಟ, ನವೀನ ಮತ್ತು ಸುಸ್ಥಿರ ಆಟಿಕೆಗಳನ್ನು ರಚಿಸಲು ಸಹಾಯ ಮಾಡುತ್ತದೆ” ಎಂದು ನಿರ್ಮಲಾ ಸೀತಾರಾಮನ್‌ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

“ಉಡಾನ್ ಯೋಜನೆಗೆ ಯಶಸ್ವಿಯಾದ ಹಿನ್ನೆಲೆಯಲ್ಲಿ 120 ಸ್ಥಳಗಳಿಗೆ ಹೆಚ್ಚುವರಿ ಸಂಪರ್ಕ ಕಲ್ಪಿಸಲಾಗುವುದು. ಮುಂದಿನ ಹತ್ತು ವರ್ಷದಲ್ಲಿ ನಾಲ್ಕು ಕೋಟಿ ಜನರಿಗೆ ಇದು ಅನುಕೂಲವಾಗಲಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ. ಬಿಹಾರದಲ್ಲಿ ಗ್ರೀನ್ ಫಿಲ್ಡ್ ವಿಮಾನ ನಿಲ್ದಾಣ ಆರಂಭ ಮಾಡುತ್ತೇವೆ” ಎಂದು ಕೇಂದ್ರ ಹಣಕಾಸು ಸಚಿವೆ ತಿಳಿಸಿದ್ದಾರೆ.

ಬಜೆಟ್‌ನಲ್ಲಿ ಬಿಹಾರಕ್ಕೆ ಪ್ರಾಶಸ್ತ್ಯ ನೀಡಿದ ಮೋದಿ ಸರ್ಕಾರ

ಐಐಟಿ ಪಾಟ್ನಾ ಸೇರಿದಂತೆ ಐದು ಐಐಟಿಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೋದಿ ಸರ್ಕಾರ ಘೋಷಿಸಿದೆ. ಆ ಮೂಲಕ ಎನ್‌ಡಿಎ ಮೈತ್ರಿ ಪಕ್ಷಗಳಿರುವ ರಾಜ್ಯಕ್ಕೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...