IPL ಫೈನಲ್ ಮುನ್ನ ಬೆಟ್ಟಿಂಗ್ ಹಾವಳಿ: ಆಮಿಷಕ್ಕೆ ಬಲಿಯಾಗಿ ಕೈ ಸುಟ್ಟುಕೊಳ್ಳಬೇಡಿ!

Date:

ಪ್ರತಿ ಸೀಸನ್‌ನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೇವಲ ಕ್ರಿಕೆಟ್ ಅಭಿಮಾನಿಗಳನ್ನು ಆಕರ್ಷಿಸುವುದಲ್ಲ. ಈ ಸಂದರ್ಭದಲ್ಲಿ ಸಾಕಷ್ಟು ಸೈಬರ್ ಅಪರಾಧಗಳು, ಬೆಟ್ಟಿಂಗ್ ಹಾವಳಿ ಹೆಚ್ಚಳವಾಗುತ್ತದೆ. ಈ ಬಾರಿಯೂ ಐಪಿಎಲ್‌ ಫೈನಲ್‌ಗೂ ಮುನ್ನ ಬೆಟ್ಟಿಂಗ್ ದಂದೆ ವಿಸ್ತರಿಸುತ್ತಿದೆ. ಲಕ್ಷಾಂತರ ಭಾರತೀಯರ ಹಣವನ್ನೇ ಗುರಿಯಾಗಿಸಿಕೊಂಡ ನಕಲಿ ವೆಬ್‌ಸೈಟ್‌ಗಳು ತಲೆ ಎತ್ತಿವೆ.

- Advertisement -

ಐಪಿಎಲ್ 2026ರ ಮಹತ್ವದ ಫೈನಲ್ ಪಂದ್ಯವು ಮೇ 31ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ತಂಡಗಳ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ನಡುವೆ ಬೆಟ್ಟಿಂಗ್ ದಂದೆ ಬಿರುಸಿನಲ್ಲಿ ಸಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಆನ್​ಲೈನ್​ ಬೆಟ್ಟಿಂಗ್, ಗೇಮಿಂಗ್ ಆ್ಯಪ್​​ಗೆ ಕಡಿವಾಣ: ಶೀಘ್ರವೇ ಹೊಸ ಮಾನದಂಡ

ವೇಗವಾಗಿ ಮತ್ತು ಸುಲಭವಾಗಿ ಹಣ ಗಳಿಸಬಹುದೆಂಬ ಆಸೆಯಿಂದಾಗಿ ಜನರು ಬೆಟ್ಟಿಂಗ್ ಹಾವಳಿಯಲ್ಲಿ ಸಿಲುಕುತ್ತಿದ್ದಾರೆ. ತಮ್ಮ ಕಷ್ಟದ ದುಡಿಮೆಯನ್ನು ಇದರಲ್ಲಿ ತೊಡಗಿಸಿ ಬೀದಿಗೆ ಬೀಳುತ್ತಿದ್ದಾರೆ. ಇಂತಹ ಜನರನ್ನೇ ಗುರಿಯಾಗಿಸಿಕೊಂಡು ಈಗ ಬೆಟ್ಟಿಂಗ್ ಜಾಲ ವಿಸ್ತರಿಸಿಕೊಳ್ಳುತ್ತಿದೆ.

ಇನ್ನು ಇತ್ತೀಚೆಗೆ ಕ್ಲೌಡ್‌ಸೆಕ್ ಬಿಡುಗಡೆ ಮಾಡಿದ ವರದಿ ಪ್ರಕಾರ ಪ್ರತಿ ಐಪಿಎಲ್ ಸೀಸನ್‌ನಲ್ಲಿ ಬಳಕೆದಾರರನ್ನು ಅಕ್ರಮ ಬೆಟ್ಟಿಂಗ್ ಸೈಟ್‌ಗಳಿಗೆ ಆಕರ್ಷಿತರಾಗಿ ಹಣ ಕಳೆದುಕೊಳ್ಳುವುದು ಸಾಮಾನ್ಯವಾಗುತ್ತಿದೆ. ಬೆಟ್ಟಿಂಗ್ ಮಾಡಲೆಂದು ಸೈಟ್ ತೆರೆದವರು ಬಳಿಕ ಬೆದರಿಕೆಗೆ, ಬ್ಲ್ಯಾಕ್‌ಮೇಲ್‌ಗೆ ಗುರಿಯಾಗುತ್ತಿದ್ದಾರೆ.

ವಿದೇಶಿ ಮೂಲದ ಮತ್ತು ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳು, ವೆಬ್‌ಸೈಟ್‌ಗಳು ಯಾವುದೇ ಅಡೆತಡೆಯಿಲ್ಲದೆ ಲಭ್ಯವಿರುವುದರಿಂದ ಜನರು ಸುಲಭವಾಗಿ ಮೊಬೈಲ್ ಮೂಲಕವೇ ಹಣ ಪಣಕ್ಕಿಡುತ್ತಿದ್ದಾರೆ. ಟೆಲಿಗ್ರಾಮ್, ವಾಟ್ಸಾಪ್ ಗ್ರೂಪ್‌ಗಳು ಮತ್ತು ಇನ್‌ಸ್ಟಾಗ್ರಾಮ್‌ಗಳಲ್ಲಿ “ಫಿಕ್ಸ್ಡ್ ಬೆಟ್ಟಿಂಗ್ ಟಿಪ್ಸ್” ನೀಡುವುದಾಗಿ ನಂಬಿಸಿ ಜನರನ್ನು ವಂಚಿಸುವ ದೊಡ್ಡ ಜಾಲವೇ ಸೃಷ್ಟಿಯಾಗಿದೆ. ಕೆಲವು ಗೇಮಿಂಗ್ ಆ್ಯಪ್‌ಗಳಿಗೆ ಪ್ರಮುಖ ವ್ಯಕ್ತಿಗಳು ಪ್ರಚಾರ ನೀಡುವುದರಿಂದ, ಅದು ಕಾನೂನುಬದ್ಧ ಇರಬಹುದೆಂದು ಸಾಮಾನ್ಯ ಜನರು ಭ್ರಮಿಸುತ್ತಿದ್ದಾರೆ.

ಆದರೆ ಬೆಟ್ಟಿಂಗ್ ಜಾಲದಲ್ಲಿ ಸಿಲುಕುವ ಮುನ್ನ ಎಚ್ಚರವಾಗಿರಿ. ಆರಂಭದಲ್ಲಿ ಸಣ್ಣ ಮೊತ್ತ ಗೆದ್ದಂತೆ ಅನಿಸಿದರೂ, ಕೊನೆಗೆ ಲಕ್ಷಾಂತರ ರೂಪಾಯಿ ಸಾಲದ ಸುಳಿಗೆ ನೀವು ಸಿಲುಕಬಹುದು. ಇಂತಹ ಆನ್‌ಲೈನ್ ಆಮಿಷಗಳಿಗೆ ಬಲಿಯಾಗದಿರುವುದೇ ಇದಕ್ಕೆ ಏಕೈಕ ಪರಿಹಾರ. ಕ್ರಿಕೆಟ್ ಅನ್ನು ಕೇವಲ ಒಂದು ಕ್ರೀಡೆಯಾಗಿ ನೋಡಿ ಆನಂದಿಸಿ, ಜೀವನದ ದುಡಿಮೆಯನ್ನು ಪಣಕ್ಕಿಡಬೇಡಿ. ಆಮಿಷಕ್ಕೆ ಬಲಿಯಾಗಿ ಕೈ ಸುಟ್ಟುಕೊಳ್ಳಬೇಡಿ!

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...