‘2ನೇ ಮದುವೆ’ ಆಗಿದ್ದಕ್ಕೆ ಐಪಿಎಸ್ ಅಧಿಕಾರಿಗೆ ಹಿಂಬಡ್ತಿ

Date:

ಮೊದಲನೇ ಪತ್ನಿಗೆ ವಿಚ್ಛೇದನವನ್ನೂ ನೀಡದೆ, 2ನೇ ವಿವಾಹವಾಗಿದ್ದ ಐಪಿಎಸ್‌ ಅಧಿಕಾರಿಗೆ ಹಿಂಬಡ್ತಿ ನೀಡಲಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

- Advertisement -

ರಾಜಸ್ಥಾನ ಕೇಡರ್‌ ಐಪಿಎಸ್ ಅಧಿಕಾರಿ ಪಂಕಜ್ ಕುಮಾರ್ ಚೌಧರಿ ಅವರಿಗೆ ಹಿಂಬಡ್ತಿ ನೀಡಲಾಗಿದ್ದು, ಮೂರು ವರ್ಷಗಳ ಕಾಲ ಯಾವುದೇ ಬಡ್ತಿ (ಪ್ರಮೋಷನ್) ನೀಡದಂತೆ ನಿರ್ಬಂಧಿಸಲಾಗಿದೆ. ಅವರನ್ನು ಲೆವೆಲ್ 11 ಸೀನಿಯರ್ ವೇತನ ಶ್ರೇಣಿಯಿಂದ ಲೆವೆಲ್ 10 ಜೂನಿಯರ್ ವೇತನ ಶ್ರೇಣಿಗೆ ಹಿಂಬಡ್ತಿ ನೀಡಲಾಗಿದೆ. ಲೆವೆಲ್ 10 ಶ್ರೇಣಿಯು ಹೊಸದಾಗಿ ನೇಮಕಗೊಂಡ ಐಪಿಎಸ್ ಅಧಿಕಾರಿಗಳನ್ನು ನಿಯೋಜಿಸುವ ಶ್ರೇಣಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ರಾಜಸ್ಥಾನದಲ್ಲಿ ಐಪಿಎಸ್ ಅಧಿಕಾರಿಗೆ ಹಿಂಬಡ್ತಿ ನೀಡಿರುವುದು ಇದೇ ಮೊದಲು ಎಂದು ವರದಿಯಾಗಿದೆ. ಚೌಧರಿ ಅವರ ಎರಡನೇ ಮದುವೆಯ ಬಗ್ಗೆ ತಿಳಿದ ನಂತರ ಉನ್ನತ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ ಎಂದು ವರದಿಗಳು ಹೇಳುತ್ತಿವೆ.

ಚೌದರಿ ಅವರು ಕೆಲವು ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿಗೆ ವಿಚ್ಛೇದನ ನೀಡದೆ, ಇನ್ನೊಬ್ಬ ಮಹಿಳೆಯನ್ನು ವಿವಾಹವಾಗಿದ್ದರು. ಈ ಕೌಟುಂಬಿಕ ಪ್ರಕರಣವು ಸುಮಾರು ನಾಲ್ಕು ವರ್ಷಗಳ ಹಿಂದೆ ಕೋರ್ಟ್‌ ಮೆಟ್ಟಿಲೇರಿತ್ತು. ಪ್ರಕರಣದಲ್ಲಿ ರಾಜಸ್ಥಾನ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ ಚೌದರಿ ಪರವಾಗಿಯೇ ತೀರ್ಪು ನೀಡಿದ್ದವು ಎಂದು ವರದಿಯಾಗಿದೆ.

ಆದಾಗ್ಯೂ, ಅಧಿಕಾರಿಗಳು ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಚೌಧರಿ 2009ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಜೈಪುರದಲ್ಲಿ ಸಮುದಾಯ ಪೊಲೀಸ್ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರಿಗೆ ಹಿಂಬಡ್ತಿ ನೀಡಲಾಗಿದ್ದು, ಅವರ ಹುದ್ದೆಯನ್ನು ಪೊಲೀಸ್ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಶ್ರೇಣಿ 10) ಎಂದು ಬದಲಾಯಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...