SIR ಪ್ರಕ್ರಿಯೆಯಲ್ಲಿ ಅಕ್ರಮ: ದೆಹಲಿ ಇಸಿ ಕಚೇರಿ ಮುತ್ತಿಗೆಗೆ ‘ಇಂಡಿಯಾ’ ಒಕ್ಕೂಟ ಕರೆ, ಗ್ಯಾನೇಶ್ ಕುಮಾರ್‌ಗೆ ಸಂಕಷ್ಟ

Date:

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ಹಾಗೂ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿರುವ ‘ಇಂಡಿಯಾ’ ಮೈತ್ರಿಕೂಟ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 7ರಂದು ದೆಹಲಿಯಲ್ಲಿರುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಧಾನ ಕಚೇರಿಯ ಮುಂದೆ ಜಂಟಿ ಬೃಹತ್ ಧರಣಿ ಹಾಗೂ ಮುತ್ತಿಗೆ ಚಳವಳಿ ನಡೆಸಲು ನಿರ್ಧರಿಸಿದೆ.

- Advertisement -

ವಿರೋಧ ಪಕ್ಷಗಳ ನಾಯಕರು ನಡೆಸಿದ ಉನ್ನತ ಮಟ್ಟದ ಸಭೆಯ ನಂತರ ಈ ಜಂಟಿ ಪ್ರತಿಭಟನೆಯ ನಿರ್ಧಾರವನ್ನು ಪ್ರಕಟಿಸಲಾಗಿದೆ. ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಆರ್‌ಜೆಡಿ, ಜೆಎಂಎಂ ಹಾಗೂ ಎನ್‌ಸಿಪಿ ಸೇರಿದಂತೆ ಮೈತ್ರಿಕೂಟದ ಪ್ರಮುಖ ಘಟಕ ಪಕ್ಷಗಳು ಈ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ದೇಶಾದ್ಯಂತ ನಡೆಯುತ್ತಿರುವ ‘SIR’ ಪ್ರಕ್ರಿಯೆಯ ನೆಪದಲ್ಲಿ ವಿರೋಧ ಪಕ್ಷಗಳ ಬೆಂಬಲಿತ ಮತದಾರರ ಹಾಗೂ ನಿರ್ದಿಷ್ಟ ಸಮುದಾಯಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕಾನೂನುಬಾಹಿರವಾಗಿ ಕೈಬಿಡಲಾಗುತ್ತಿದೆ ಎಂದು ‘ಇಂಡಿಯಾ’ ಒಕ್ಕೂಟ ಆರೋಪಿಸಿದೆ. ಪಾರದರ್ಶಕತೆ ಇಲ್ಲದೆ ಕೋಟ್ಯಂತರ ಮತದಾರರ ಹಕ್ಕನ್ನು ಕಸಿಯಲಾಗುತ್ತಿದೆ ಎಂಬುದು ವಿಪಕ್ಷಗಳ ಪ್ರಮುಖ ದೂರಾಗಿದೆ.

ಚುನಾವಣಾ ಆಯೋಗವು ಸ್ವತಂತ್ರವಾಗಿ ಕೆಲಸ ಮಾಡುವಲ್ಲಿ ವಿಫಲವಾಗಿದ್ದು, ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ವಿಪಕ್ಷ ನಾಯಕರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯಲು ವಿಫಲರಾಗಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಮೈತ್ರಿಕೂಟ ಆಗ್ರಹಿಸಿದೆ.

ಅಕ್ಟೋಬರ್ 7ರ ದೆಹಲಿ ಇಸಿ ಕಚೇರಿ ಮುತ್ತಿಗೆ ಕಾರ್ಯಕ್ರಮ ಮಾತ್ರವಲ್ಲದೆ, ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ‘ಪ್ರಜಾಪ್ರಭುತ್ವ ಉಳಿಸಿ’ ರ‍್ಯಾಲಿಗಳನ್ನು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಧರಣಿಗಳನ್ನು ನಡೆಸಲು ನಿರ್ಧರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ...

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...