ಎಐಎಡಿಎಂಕೆಯಲ್ಲಿ ಭಿನ್ನಮತ: ‘ಇಪಿಎಸ್’ ವಿರುದ್ಧ ಸಿಡಿದೆದ್ದ ಶಾಸಕರು, ವಿಜಯ್‌ ಬೆಂಬಲಿಸಲು ಒಲವು

Date:

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಅನುಭವಿಸಿದ ಹೀನಾಯ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ನಟ ವಿಜಯ್ ನೇತೃತ್ವದ ನೂತನ ಆಡಳಿತರೂಢ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡುವ ವಿಚಾರದಲ್ಲಿ ಎಐಎಡಿಎಂಕೆ ಶಾಸಕರು ಎರಡು ಬಣಗಳಾಗಿ ವಿಭಜನೆಗೊಂಡಿದ್ದು, ಪಕ್ಷದಲ್ಲಿ ಮತ್ತೊಂದು ಮಹತ್ವದ ಒಡಕು ಮೂಡುವ ಲಕ್ಷಣಗಳು ಗೋಚರಿಸುತ್ತಿವೆ.

- Advertisement -

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ (ಇಪಿಎಸ್) ನೇತೃತ್ವದಲ್ಲಿ ಅನೇಕ ಶಾಸಕಾಂಗ ಪಕ್ಷದ ಸಭೆಗಳು ನಡೆದಿವೆ. ವರದಿಗಳ ಪ್ರಕಾರ, ಸರ್ಕಾರ ರಚಿಸಲು ಟಿವಿಎಕೆ ಪಕ್ಷಕ್ಕೆ ಬೆಂಬಲ ನೀಡುವುದನ್ನು ಪಕ್ಷದ ಒಂದು ಬಣ ಬಲವಾಗಿ ವಿರೋಧಿಸುತ್ತಿದ್ದರೆ, ಮತ್ತೊಂದು ಬಣವು ಹೊರಗಿನಿಂದ ಬೆಂಬಲ ನೀಡುವ ಪ್ರಸ್ತಾಪ ಮುಂದಿಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಚುನಾವಣೆಯಲ್ಲಿನ ಪಕ್ಷದ ಕಳಪೆ ಸಾಧನೆಯ ಹಿನ್ನೆಲೆಯಲ್ಲಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ತಮ್ಮ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಕೆಲವು ಶಾಸಕರು ಒತ್ತಾಯಿಸಿದ್ದಾರೆ. ಹಿರಿಯ ಮುಖಂಡರು ಮತ್ತು ಮಾಜಿ ಸಚಿವರಾದ ಎಸ್.ಪಿ. ವೇಲುಮಣಿ ಹಾಗೂ ಸಿ.ವಿ. ಷಣ್ಮುಗಂ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಪಳನಿಸ್ವಾಮಿ ನೇತೃತ್ವದ ಸಭೆಗಳಿಗೆ ಗೈರುಹಾಜರಾಗುವ ಮೂಲಕ ಭಿನ್ನಮತವನ್ನು ಬಹಿರಂಗಪಡಿಸಿದ್ದಾರೆ. ವೇಲುಮಣಿ ಮತ್ತು ಷಣ್ಮುಗಂ ಬಣವು ಆಡಳಿತರೂಢ ಟಿವಿಎಕೆ ಪಕ್ಷವನ್ನು ಬೆಂಬಲಿಸಲು ಒಲವು ತೋರುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ಗಲ್ಲಾಪೆಟ್ಟಿಗೆಯಿಂದ ಮತಪೆಟ್ಟಿಗೆ; ಜೋಸೆಫ್ ವಿಜಯ್ ಎಂಬ ಹೀರೋವಿನ ಸೂಪರ್ ಡ್ಯೂಪರ್ ಹಿಟ್ ರಾಜಕೀಯ ಪ್ರವೇಶ!

ಎಐಎಡಿಎಂಕೆ ಈ ಬಾರಿಯ ಚುನಾವಣೆಯಲ್ಲಿ ಒಟ್ಟು 234 ಕ್ಷೇತ್ರಗಳ ಪೈಕಿ 167 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆದರೆ ಕೇವಲ 47 ಸ್ಥಾನಗಳನ್ನು ಗೆಲ್ಲುವಲ್ಲಿ ಮಾತ್ರ ಶಕ್ತವಾಗಿದೆ. ಪಕ್ಕದ ಪುದುಚೇರಿಯ ಐಷಾರಾಮಿ ರೆಸಾರ್ಟ್‌ನಲ್ಲಿ ಮೂರು ದಿನಗಳ ಕಾಲ ತಂಗಿದ್ದ ಶಾಸಕರು ಚೆನ್ನೈಗೆ ಮರಳಿದ್ದರು. ಆದರೆ, ಆ ಬಳಿಕ ಪಳನಿಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಟ್ಟು 47 ಶಾಸಕರ ಪೈಕಿ ಸುಮಾರು ಐವರು ಶಾಸಕರು ಗೈರುಹಾಜರಾಗಿದ್ದರು.

ಟಿವಿಎಕೆಗೆ ಬೆಂಬಲ ನೀಡುವ ಪ್ರಸ್ತಾಪವನ್ನು ಸದ್ಯಕ್ಕೆ ತಳ್ಳಿಹಾಕಿರುವ ಪಳನಿಸ್ವಾಮಿ, “ಟಿವಿಎಕೆ ನಾಯಕ ಸಿ. ಜೋಸೆಫ್ ವಿಜಯ್ ಅವರು ನೇರವಾಗಿ ನನ್ನನ್ನು ಸಂಪರ್ಕಿಸಬೇಕು. ಅಲ್ಲಿಯವರೆಗೆ ಇಂತಹ ಯಾವುದೇ ಪ್ರಸ್ತಾಪವನ್ನು ನಾನು ಪರಿಗಣಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ಮಾಜಿ ನಾಯಕ ಕೆ.ಸಿ. ಪಳನಿಸಾಮಿ, “ಪಕ್ಷದಲ್ಲಿ ಸ್ಪಷ್ಟವಾದ ಒಡಕು ಮೂಡಿದೆ. ಅನೇಕ ಶಾಸಕರು ನಾಯಕತ್ವ ಬದಲಾವಣೆಯನ್ನು ಬಯಸುತ್ತಿದ್ದಾರೆ. ಪಳನಿಸ್ವಾಮಿ ಅವರು ನಾಯಕರಾಗಿ ಮುಂದುವರಿದರೆ, ಕೆಲವು ಶಾಸಕರು ಟಿವಿಎಕೆಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಮುಂದಿನ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಲು ಅನುಕೂಲವಾಗುವಂತೆ ಪಳನಿಸ್ವಾಮಿ ಅವರು ಸ್ವಯಂಪ್ರೇರಿತವಾಗಿ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...