ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರಂತರವಾಗಿ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಪತ್ರಿಕೆಗಳಲ್ಲಿ ಕ್ಷಮಾಪಣೆ ಪ್ರಕಟಿಸಿರುವ ರಾಮ್‌ದೇವ್ ಅವರನ್ನು ಈಗ ಸುಪ್ರೀಂ ಪ್ರಶ್ನಿಸಿದೆ.
ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ನಡೆಸಿದೆ. ಈ ವಿಚಾರಣೆಯ ಸಂದರ್ಭದಲ್ಲಿ ಪತಂಜಲಿ ಆಯುರ್ವೇದ್, “67 ಪತ್ರಿಕೆಗಳಲ್ಲಿ ಕ್ಷಮೆಯಾಚನೆಯನ್ನು ಪ್ರಕಟಿಸಲಾಗಿದೆ. ನ್ಯಾಯಾಲಯದ ಬಗ್ಗೆ ನನಗೆ ಗೌರವವಿದೆ. ತಪ್ಪುಗಳು ಪುನರಾವರ್ತನೆ ಆಗಲ್ಲ” ಎಂದು ಹೇಳಿದೆ.
J Kohli: Cut the actual newspaper clippings and keep them handy. For you to photocopy by enlarging, it may not impress us. I want to see the actual size of the ad#SupremeCourt #Patanjali
— Live Law (@LiveLawIndia) April 23, 2024
ಇದನ್ನು ಓದಿದ್ದೀರಾ? ನೀವು ಅಷ್ಟೊಂದು ಮುಗ್ಧರೇನಲ್ಲ; ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ತಪರಾಕಿ
ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್, “ದಿನಪತ್ರಿಕೆಯಲ್ಲಿ ಕ್ಷಮಾಪಣೆಯನ್ನು ನಿಮ್ಮ ಜಾಹೀರಾತಿನಷ್ಟು ಗಾತ್ರದಲ್ಲೇ ಪ್ರಕಟಿಸಲಾಗಿದೆಯೇ” ಎಂದು ಪ್ರಶ್ನಿಸಿದೆ.
“ನೀವು ದಿನಪತ್ರಿಕೆಯಲ್ಲಿ ನೀಡಿದ ಕ್ಷಮಾಪಣೆಯನ್ನು ಕತ್ತರಿಸಿ ನೀವೇ ಇಟ್ಟುಕೊಳ್ಳಿ. ಅದನ್ನು ದೊಡ್ಡದಾಗಿಸಿ ಫೋಟೊಕಾಪಿ ಮಾಡಿಕೊಳ್ಳಿ. ಅದು ನಮ್ಮನ್ನು ಮೆಚ್ಚಿಸಲಾರದು. ನಾನು ಜಾಹೀರಾತಿನ ನಿಜವಾದ ಗಾತ್ರವನ್ನು ನೋಡಲು ಬಯಸುತ್ತೇನೆ” ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ಹೇಳಿದ್ದಾರೆ.
Your honour, my honour! https://t.co/iB5ZcWTHOz
— Tanishq Punjabi (@tanishqq9) April 23, 2024
ಇದನ್ನು ಓದಿದ್ದೀರಾ? ಪತಂಜಲಿ ಜಾಹೀರಾತು ವಿವಾದ | ರಾಮ್‌ದೇವ್ ವಿರುದ್ಧ ಸುಪ್ರೀಂ ವಾಗ್ದಾಳಿ, ಕ್ಷಮಾಪಣೆ ತಿರಸ್ಕರಿಸಿದ ಕೋರ್ಟ್
“ನಮ್ಮ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ಹೇಳಿಕೆ ನೀಡಿದ ನಂತರವೂ ಜಾಹೀರಾತುಗಳನ್ನು ಪ್ರಕಟಿಸಿ ಮತ್ತು ಪತ್ರಿಕಾಗೋಷ್ಠಿ ನಡೆಸಿದ ತಪ್ಪಿಗೆ ಪತಂಜಲಿ ಕ್ಷಮೆಯಾಚಿಸಿದೆ. ಜಾಹೀರಾತಿಗೆ 10 ಲಕ್ಷ ರೂಪಾಯಿ ವೆಚ್ಚವಾಗಿದೆ” ಎಂದು ಪತಂಜಲಿ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿಕೊಂಡಿದೆ.
ಬಾಬಾ ರಾಮದೇವ್ ಮತ್ತು ಅವರ ಪಾಲುದಾರ ಆಚಾರ್ಯ ಬಾಲಕೃಷ್ಣ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿದ್ದರು. ಈ ಪ್ರಕರಣದ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಲಾಗಿದೆ.