‘ಭಾರತದ ಜಿಡಿಪಿ 7.8% ಬೆಳೆದದ್ದು ನಿಜವೇ ಅಥವಾ ಕೇವಲ ಕಾಗದಕ್ಕೆ ಸೀಮಿತವೇ’: RBI ಮಾಜಿ ಗವರ್ನರ್ ರಘುರಾಮ್ ರಾಜನ್ ಪ್ರಶ್ನೆ

Date:

ಭಾರತದ ಆರ್ಥಿಕತೆಯು ನಿರೀಕ್ಷೆಗಿಂತಲೂ ವೇಗವಾಗಿ 7.8%ರಷ್ಟು ಪ್ರಗತಿ ಸಾಧಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ (MoSPI) ಈ ದತ್ತಾಂಶ ಕುರಿತು ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ತೀವ್ರ ಸಂಶಯ ವ್ಯಕ್ತಪಡಿಸಿದ್ದಾರೆ. ‘ದೇಶದ ಜಿಡಿಪಿ ನಿಜವಾಗಿಯೂ ಈ ವೇಗದಲ್ಲಿ ಬೆಳೆದಿರುವುದು ಸತ್ಯವೇ? ಅಥವಾ ಕಾಗದಕ್ಕೆ ಮಾತ್ರ ಸೀಮಿತವೇ’ ಎಂದಿದ್ದಾರೆ.

- Advertisement -

ಸುದ್ದಿ ಸಂಸ್ಥೆ ‘ಪಿಟಿಐ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಆರ್ಥಿಕ ಬೆಳವಣಿಗೆಯ ಅಂಕಿ-ಅಂಶಗಳು ನಿಜವೇ ಎಂಬ ಅನುಮಾನ ಪ್ರತಿಯೊಬ್ಬರಲ್ಲೂ ಮೂಡುತ್ತಿದ್ದು, ದತ್ತಾಂಶಗಳಲ್ಲಿ ಕೆಲವು ವ್ಯತ್ಯಾಸಗಳಿವೆ ಎಂಬುದು ಕಳವಳಕಾರಿ. ಆರ್ಥಿಕತೆ ಶರವೇಗದಲ್ಲಿ ಧಾವಿಸುತ್ತಿದ್ದರೆ ಉತ್ತಮ ಉದ್ಯೋಗಗಳು ಏಕೆ ಹುಟ್ಟುತ್ತಿಲ್ಲ, ಉದ್ಯಮಿಗಳು ಹೊಸ ಹೂಡಿಕೆಗೆ ಏಕೆ ಹಿಂಜರಿಯುತ್ತಿದ್ದಾರೆ ಹಾಗೂ ವಿದೇಶಿ ನೇರ ಹೂಡಿಕೆ (FDI) ನಿರೀಕ್ಷಿತ ಮಟ್ಟದಲ್ಲಿ ಏಕೆ ಬರುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಮತ್ತು ಪ್ರಸ್ತುತ ಇರುವ ವಲಯಗಳಲ್ಲಿ ಭಾರತದ ಮುನ್ನಡೆಯನ್ನು ಕಾಯ್ದುಕೊಳ್ಳಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿದೆಯೇ? ಸದ್ಯ ಭಾರತವು ಅತ್ಯಧಿಕ ಯುವಜನರನ್ನು ಹೊಂದಿರುವ ‘ಜನಸಂಖ್ಯಾ ಲಾಭಾಂಶ’ದ (Population Dividend) ಹಂತದಲ್ಲಿದೆ. ಈ ಅಮೂಲ್ಯ ಸಮಯದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸಲು ವಿಫಲವಾದರೆ, ದೇಶಕ್ಕೆ ದೊರೆತಿರುವ ಬೃಹತ್ ಅವಕಾಶವನ್ನು ಕೈಚೆಲ್ಲಿದಂತಾಗುತ್ತದೆ. ಖಾಸಗಿ ವಲಯವು ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸುತ್ತಿಲ್ಲ. ಇದರಿಂದಾಗಿ, ಇಂದು ಯುವಜನರು ಸಾರ್ವಜನಿಕ ಸೇವೆಯ ಆಸಕ್ತಿಗಿಂತ ಹೆಚ್ಚಾಗಿ ಸುರಕ್ಷಿತ ಉದ್ಯೋಗಕ್ಕಾಗಿ ಸಿವಿಲ್ ಸೇವೆಗಳ ಕಡೆಗೆ ಮುಖ ಮಾಡುತ್ತಿದ್ದಾರೆ” ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ರಘುರಾಮ್ ರಾಜನ್ ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆ ಹುಟ್ಟುಹಾಕಿದೆ. ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇನ್ಫೋಸಿಸ್ ಮಾಜಿ ಸಿಎಫ್‌ಒ, ಆರಿನ್ ಕ್ಯಾಪಿಟಲ್‌ನ ಅಧ್ಯಕ್ಷ ಮೋಹನ್‌ದಾಸ್ ಪೈ, “ದೇಶದ ಉದ್ಯೋಗ ಸೃಷ್ಟಿಯ ಕುರಿತು ಕಾಯಂ ಹಿತಾಸಕ್ತಿಗಳು ‘ಸುಳ್ಳು ನಿರೂಪಣೆ’ಯನ್ನು ಸೃಷ್ಟಿಸುತ್ತಿವೆ” ಎಂದು ಆರೋಪಿಸಿದ್ದಾರೆ.

“ಖಾಸಗಿ ಸಂಸ್ಥೆ ಇಪಿಎಫ್‌ಒ ನೀಡುತ್ತಿದ್ದ ಮಾಸಿಕ ಉದ್ಯೋಗ ದತ್ತಾಂಶದ ವರದಿಯನ್ನು ತಕ್ಷಣವೇ ಪುನರಾರಂಭಿಸಬೇಕು. ಈ ವರದಿಯು ವಯಸ್ಸು, ಲಿಂಗ, ಕೈಗಾರಿಕೆ ಹಾಗೂ ರಾಜ್ಯವಾರು ಉದ್ಯೋಗ ಸೃಷ್ಟಿಯ ನಿಖರ ಮಾಹಿತಿಯನ್ನು ನೀಡುತ್ತಿತ್ತು. ಇದು ಸ್ಥಗಿತಗೊಂಡಿರುವುದರಿಂದಲೇ ಇಂತಹ ಅಪಪ್ರಚಾರಗಳಿಗೆ ಜಾಗ ಸಿಗುತ್ತಿದೆ” ಎಂದು ಪ್ರಧಾನಿ ಕಚೇರಿಯನ್ನು ಮೋಹನ್‌ದಾಸ್ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...