ರಾಘವ ಛಡ್ಡಾ ಬಿಜೆಪಿಗೆ ಸೇರುವುದು ನಿಶ್ಚಿತವೇ; ಆಪ್‌ ನಾಯಕರ ದೂರುಗಳೇನು?  

Date:

ರಾಜ್ಯಸಭೆಯಲ್ಲಿ ಆಪ್‌ನ ಉಪನಾಯಕ ಸ್ಥಾನದಿಂದ ರಾಘವ ಛಡ್ಡಾ ಅವರನ್ನು ಕೆಳಗಿಳಿಸಿದ ನಂತರ, ಪಕ್ಷದ ಹಿರಿಯ ನಾಯಕಿ, ಮಾಜಿ ಮುಖ್ಯಮಂತ್ರಿ ಅತಿಶಿ ಅವರು ಛಡ್ಡಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಾಘವ ಛಡ್ಡಾ ಅವರು ಪ್ರಧಾನಿ ಮೋದಿ ಹಾಗೂ ಬಿಜೆಪಿಗೆ ಹೆದರಿದ್ದಾರೆಯೇ?” ಎಂದು ಅತಿಶಿ ಬಹಿರಂಗವಾಗಿ ಪ್ರಶ್ನಿಸಿದ್ದು, ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ.

- Advertisement -

ಬಿಜೆಪಿಗೆ ಹೆದರಿದರೇ ರಾಘವ ಛಡ್ಡಾ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆಪ್ ನಾಯಕಿ ಅತಿಶಿ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ಹಲವು ಆಪ್‌ ನಾಯಕರು, ರಾಘವ ಛಡ್ಡಾ ಅವರು ಕೇಂದ್ರ ಸಂಸ್ಥೆಗಳು ಮತ್ತು ಬಿಜೆಪಿಗೆ ಹೆದರಿ ಪಕ್ಷದ ನಿಲುವುಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ಇತರ ವಿರೋಧ ಪಕ್ಷದ  ನಾಯಕರಂತೆ ನೀವೂ ಬಿಜೆಪಿಗೆ ಹೆದರಿ ಅವರೊಂದಿಗೆ ಕೈ ಜೋಡಿಸುತ್ತೀರಾ?” ಎಂದು ಅತಿಶಿ ನೇರವಾಗಿ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ವಿಡಿಯೋ ಸಂದೇಶದ ಮೂಲಕ ತಿರುಗೇಟು ನೀಡಿರುವ ರಾಘವ ಛಡ್ಡಾ, “ನನ್ನನ್ನು ಮೌನಗೊಳಿಸಲಾಗಿದೆ, ಆದರೆ ನಾನು ಸೋತಿಲ್ಲ” ಎಂದು ಹೇಳಿದ್ದಾರೆ. ಸಂಸತ್ತಿನಲ್ಲಿ ತಾವು ಕೇವಲ ಸಾಮಾನ್ಯ ಜನರ ಸಮಸ್ಯೆಗಳನ್ನು ಎತ್ತಿದ ಕಾರಣಕ್ಕೆ ತಮ್ಮ ಧ್ವನಿಯನ್ನು ಅಡಗಿಸಲಾಗುತ್ತಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ರಾಘವ ಛಡ್ಡಾ ವಿರುದ್ಧ ಆಪ್ ಮಾಡಿರುವ 5 ದೂರುಗಳೇನು ?

1. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದಾಗ ಮತ್ತು ಆಪ್ ನಾಯಕರು ಬೀದಿಗಿಳಿದು ಹೋರಾಟ ಮಾಡಿದ್ದರು. ರಾಘವ ಛಡ್ಡಾ ಕಣ್ಣಿನ ಶಸ್ತ್ರಚಿಕಿತ್ಸೆಯ ಕಾರಣ ನೀಡಿ ಲಂಡನ್‌ನಲ್ಲಿ ಉಳಿದುಕೊಂಡಿದ್ದರು. ಬಂಧನದ ಭೀತಿಯಿಂದಲೇ ಅವರು ದೇಶದಿಂದ ದೂರ ಉಳಿದಿದ್ದರು ಎಂಬುದು ಪಕ್ಷದ ನಾಯಕರ ಗಂಭೀರ ಆರೋಪ.

2. ಎಲ್‌ಪಿಜಿ (LPG) ಬಿಕ್ಕಟ್ಟಿನ ಬಗ್ಗೆ ಮೌನದ ಬಗ್ಗೆಯೂ ಆಪ್‌ ನಾಯಕರು ಛಡ್ಡಾ ವಿರುದ್ಧ ಆಕ್ರೋಶ  ಹೊರ ಹಾಕಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಅಮೆರಿಕ ಇಸ್ರೇಲ್‌ ಹಾಗೂ ಇರಾನ್‌ ದೇಶಗಳ ನಡುವಿನ ಯುದ್ಧದ ಕಾರಣದಿಂದ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಮತ್ತು ಬೆಲೆ ಏರಿಕೆ ಉಂಟಾಗಿದೆ. ಈ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವಂತೆ ಪಕ್ಷ ಸೂಚಿಸಿತ್ತು. ಆದರೆ ಛಡ್ಡಾ ಈ ಬಗ್ಗೆ ಮಾತನಾಡಲು ನಿರಾಕರಿಸಿದರು ಎಂದು ಅತಿಶಿ ದೂರಿದ್ದಾರೆ.

3. ಚುನಾವಣಾ ಆಯೋಗದ ವಿರುದ್ಧದ ನಿರ್ಣಯಕ್ಕೆ ಸಹಿ ಹಾಕಿಲ್ಲ ಎನ್ನುವ ಆರೋಪವೂ ಕೂಡ ಅವರ ಮೇಲಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಅಕ್ರಮಗಳು ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯ ವಿರುದ್ಧ ತೃಣಮೂಲ ಕಾಂಗ್ರೆಸ್ (TMC) ತಂದಿದ್ದ ದೋಷಾರೋಪ(Impeachment) ನಿರ್ಣಯಕ್ಕೆ ಬೆಂಬಲ ಸೂಚಿಸಲು ಮತ್ತು ಸಹಿ ಹಾಕಲು ರಾಘವ ಛಡ್ಡಾ ಹಿಂದೇಟು ಹಾಕಿದ್ದರು ಎಂದು ಆಪ್‌ ಆರೋಪಿಸಿದೆ.

4. ಗಂಭೀರ ವಿಚಾರಗಳ ಬದಲು ಸಣ್ಣ ಪುಟ್ಟ ವಿಷಯಗಳನ್ನು ಪ್ರಸ್ತಾಪಸಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ಅವರ ಬಿಜೆಪಿ ಮೇಲಿನ ಮೃಧು ಧೋರಣೆಯನ್ನು ತೋರಿಸುತ್ತದೆ. ಇನ್ನು, ಗುಜರಾತ್‌ನಲ್ಲಿ ಆಪ್ ಕಾರ್ಯಕರ್ತರ ಮೇಲಿನ ಪ್ರಕರಣಗಳು, ಜಿಎಸ್‌ಟಿ ಅನುದಾನದಂತಹ ಪ್ರಮುಖ ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವ ಬದಲು, ವಿಮಾನ ನಿಲ್ದಾಣಗಳಲ್ಲಿ ‘ಸಮೋಸಾ’ ಬೆಲೆ, ಮೊಬೈಲ್ ರೀಚಾರ್ಜ್‌ನಂತಹ ವಿಷಯಗಳನ್ನು ಪ್ರಸ್ತಾಪಿಸಿ ವೈಯಕ್ತಿಕ ಪ್ರಚಾರ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಟೀಕಿಸಿದ್ದಾರೆ.

ಇದನ್ನೂ ಓದಿ : ಸ್ನೂಪ್‌ಗೇಟ್ ರಹಸ್ಯ: ಸುಪ್ರೀಂ ಕೋರ್ಟ್‌ನಲ್ಲಿ ಬಲವಂತವಾಗಿ ಹೂತುಹೋಯ್ತಾ ಮೋದಿಯ ‘ಆ’ ಸಿಡಿ ಪ್ರಕರಣದ ಸತ್ಯ?

5. ಪಕ್ಷದ ನಿಲುವಿಗೆ ವಿರುದ್ಧವಾದ ನಡೆದುಕೊಂಡಿದ್ದಾರೆ ಎನ್ನುವ ಗಂಭೀರ ಆರೋಪ ಅವರನ್ನು ರಾಜ್ಯಸಭೆಯ ಆಪ್‌ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದಾಗಲಿಂದ ಕೇಳಿ ಬರುತ್ತಿದೆ. ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರತಿಭಟಿಸಿ ಸಭಾತ್ಯಾಗ (Walkout) ಮಾಡುವಂತಹ ನಿರ್ಧಾರಗಳನ್ನು ತೆಗೆದುಕೊಂಡಾಗ, ಛಡ್ಡಾ ಅಂತರ ಕಾಯ್ದುಕೊಂಡರು ಎಂಬುದು ಆಪ್ ನಾಯಕರ ಮತ್ತೊಂದು ಪ್ರಮುಖ ದೂರು.

ಒಟ್ಟಾರೆಯಾಗಿ, ರಾಘವ ಛಡ್ಡಾ ಮತ್ತು ಆಮ್ ಆದ್ಮಿ ಪಕ್ಷದ ಉನ್ನತ ನಾಯಕರ ನಡುವಿನ ಈ ಬಿರುಕು ಇದೀಗ ಸಂಪೂರ್ಣವಾಗಿ ಬಹಿರಂಗವಾಗಿದೆ. ಒಂದು ಕಡೆ ಛಡ್ಡಾ ಅವರು ತಮ್ಮ ಬೆಂಬಲಿಗರೊಂದಿಗೆ ಸ್ವತಂತ್ರ ನಿಲುವುಗಳನ್ನು ಸಮರ್ಥಿಸಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ಆಪ್ ನಾಯಕರು ಅವರನ್ನು ಪಕ್ಷ ವಿರೋಧಿ ನಡೆ ಎಂದು ಆರೋಪಿಸುತ್ತಿದ್ದಾರೆ. ಈ ನಡುವೆ ಛಡ್ಡಾ ಬಿಜೆಪಿಗೆ ಸೇರ್ಪಡೆಯಾಗುತ್ತಾರಾ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಪಕ್ಷದ ಹಿರಿಯ ನಾಯಕರ ಜೊತೆ ಸಮನ್ವಯ ಸಾಧಿಸಿ ಮುನ್ನಡೆಯುತ್ತಾರಾ ಅಥವಾ ಬಿಜೆಪಿ ಕಡೆಗೆ ವಾಲುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...